ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್‌ಟಿಇಯಡಿ ಎಲ್‌ಕೆಜಿ, ಯುಕೆಜಿ ಪ್ರವೇಶಕ್ಕೆ ತಡೆ ನೀಡಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 23 : ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)ಯಡಿ ಖಾಸಗಿ ಶಾಲೆಗಳು ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೂ ಪ್ರವೇಶ ನೀಡಬೇಕು ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ (ಕ್ಯಾಮ್ಸ್‌) ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ರಜಾಕಾಲದ ಏಕಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರು ತಡೆಯಾಜ್ಞೆ ನೀಡಿದ್ದಾರೆ. [RTE ಹೋರಾಟ ವಿದ್ಯಾರ್ಥಿಗಳಿಗೆ ಜಯ]

rte

ಖಾಸಗಿ ಶಾಲೆಗಳ ಅರ್ಜಿ ಬಗ್ಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಆಯುಕ್ತರಿಗೆ ಕೋರ್ಟ್ ಸೂಚಿಸಿದ್ದು, ನೋಟಿಸ್‌ ಜಾರಿಗೊಳಿಸಿದೆ.

ಪ್ರವೇಶ ಹೇಗೆ ಸಾಧ್ಯ? : ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಲ್ಲ. ಕರ್ನಾಟಕ ಸರ್ಕಾರ ನರ್ಸರಿ, ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಆರ್‌ಟಿಇ ಅಡಿ ಪ್ರವೇಶ ಕೊಡುವಂತೆ ಖಾಸಗಿ ಶಾಲೆಗಳಿಗೆ ಸೂಚನೆ ಕೊಡುವುದು ಹೇಗೆ ಸರಿ? ಎಂದು ಕೋರ್ಟ್ ಪ್ರಶ್ನಿಸಿದೆ.

ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಪರವಾಗಿ ವಾದ ಮಂಡನೆ ಮಾಡಿದ ವಕೀಲ ಜಿ.ಆರ್.ಮೋಹನ್ ಅವರು, ಆರ್‌ಟಿಇ ಕಾಯ್ದೆ 2009ರ ಕಲಂ 2 (ಎಫ್‌) ಪ್ರಕಾರ, ಈ ಕಾಯ್ದೆ 6 ರಿಂದ 14 ವರ್ಷದ ಮಕ್ಕಳಿಗೆ, ಅಂದರೆ 1 ರಿಂದ 8ನೇ ತರಗತಿ ವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ವಾದ ಮಂಡಿಸಿದರು.

ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಆರ್‌ಟಿಇ ಅಡಿ ದಾಖಲಾದವರ ಶುಲ್ಕವನ್ನು ಸರ್ಕಾರ ಭರಿಸಬೇಕು.
ಆದರೆ, ಖಾಸಗಿ ಶಾಲೆಗಳಿಗೆ 4 ವರ್ಷದಿಂದಲೂ ಆರ್‌ಟಿಇ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕವನ್ನು ಪೂರ್ತಿಯಾಗಿ ಸಂದಾಯ ಮಾಡಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

English summary
Karnataka High Court on Tuesday stayed the government order of admission to students for LKG and UKG under Right to Education Act (RTE) in private schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X