ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ: ಸ್ವಯಂ ಪಿಐಎಲ್ ದಾಖಲಿಸಿದ ಹೈಕೋರ್ಟ್

ಬೆಂಗಳೂರು, ನವೆಂಬರ್ 08; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಇತರ ತಾಂತ್ರಿಕ ಸಿಬ್ಬಂದಿ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಆ ಕುರಿತು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅ. 16ರಂದು ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಸಂಬಂಧ ವರದಿ ಪ್ರಕಟವಾಗಿದೆ ಎಂದು ಪ್ರಸ್ತಾಪಿಸಿ ಇದು ಗಂಭೀರ ವಿಚಾರ ಎಂದು ಹೇಳಿತು.

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ವಕೀಲ ಶ್ರೀಧರ್ ಪ್ರಭು ಅವರನ್ನು ಅಮಿಕಸ್ ಕ್ಯೂರಿಯವರನ್ನು ನೇಮಕ ಮಾಡಿದೆ. ಜತೆಗೆ ಅವರ ಸಹಾಯಕರನ್ನಾಗಿ ವಕೀಲ ವಚನ್ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಅಲ್ಲದೆ, 454 ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಇದರಿಂದ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ಲಭ್ಯವಾಗಬೇಕಿದೆ‌ ಎಂದು ಪೀಠ ತಿಳಿಸಿತು.

HC Take Suo Motu PIL On Shortage Of Doctors In State

ಕೋರ್ಟ್‌ ನೀಡಿದ ಸೂಚನೆ ಏನು?; ರಾಜ್ಯದಲ್ಲಿ 763 ಎಂಬಿಬಿಎಸ್ ವೈದ್ಯರು, 7469 ಶುಶ್ರೂಷಕಿಯರು, 1517 ಲ್ಯಾಬ್ ಟೆಕ್ನಿಷಯನ್ಸ್ ,1517 ಫಾರ್ಮಸಿ ಸಿಬ್ಬಂದಿ, 1799 ಸಹಾಯಕರು 3658 ಗ್ರೂಪ್ 'ಡಿ' ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ವರದಿ ಪ್ರಕಟವಾಗಿದೆ.

ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಅರ್ಜಿ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸೂಚನೆ ನೀಡಿದೆ.

ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್: ಹೈಕೋರ್ಟ್ ದಾಖಲಿಸಿಕೊಂಡಿರುವ ಮತ್ತೊಂದು ಅರ್ಜಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾನಸಿಕವಾಗಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ನಿರ್ದೇಶನಗಳನ್ನ ನೀಡುವಂತೆ ಕೋರಿ ದಾಖಲಾಗಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

2023ರ ಅ.5 ರಂದು ಅಪ್ರಾಪ್ತ ಬಾಲಕನೊಬ್ಬನ ಪೋಷಕರು ಅವರ ತಾಯಿ, ಅಜ್ಜಿಯ ನಡುವಿನ ಮಕ್ಕಳ ಪಾಲನೆಗೆ ಸಂಬಂಧಿಸಿದ ಉಂಟಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ನಿರ್ದೇಶನ ನೀಡಿದ್ದರು.

ಈ ನಿರ್ದೇಶನದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಕೋರಿದೆ.
ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ಹಿರಿಯ ವಕೀಲ ಹಾಗೂ ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಅವರನ್ನು ಅಮೆಕಾಸ್ ಕ್ಯೂರಿಯನ್ನಾಗಿ ನೇಮಕ ಮಾಡಲು ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: ಮಕ್ಕಳ ಪಾಲನೆಯಲ್ಲಿ ದೇಶದ ನ್ಯಾಯಾಂಗ ಮತ್ತು ಕಾನೂನು ಚೌಕಟ್ಟ ಎದುರಿಸುತ್ತಿರುವ ಒಂದು ಸಂಕೀರ್ಣ ಸಮಸ್ಯೆಯಾಗಿದೆ. ಅಲ್ಲದೆ, ಈ ರೀತಿಯ ಸಮಸ್ಯೆಗಳನ್ನು ಎದುರಿಸುವಾಗಿ ಮಾನೋವಿಜ್ಞಾನಿಗಳನ್ನು ಒಳಗೊಳ್ಳವಂತೆ ಮಾರ್ಗಸೂಚಿಗಳನ್ನು ರಚಿಸಬೇಕಾಗಿದೆ.

ದಂಪತಿಯ ನಡುವೆ ಎದುರಾಗುವ ಸಮಸ್ಯೆಗಳಿಗೆ ಮಾನಸಿಕ ಸಮಸ್ಯೆಗಳೂ ಇರಬಹುದಾಗಿದೆ. ಹೀಗಾಗಿ ಈ ರೀತಿಯ ಪ್ರಕರಣಗಳಲ್ಲಿ ಮಗುವಿನ ಪಾಲನೆಗೆ ಒಳಗೊಳ್ಳುವ ವಿಚಾರಗಳಲ್ಲಿ ಕೇವಲ ತಾಂತ್ರಿಕ ಹಾಗೂ ಕಾನೂನಾತ್ಮ ವಿಚಾರಗಳೊಂದಿಗೆ ಮಾನಸಿಕ ಅಂಶಗಳನ್ನೊಳಗೊಂಡು ನೋಡಬೇಕಾಗುತ್ತೆ.

ಈ ರೀತಿಯ ಪರಿಸ್ಥಿತಿಗಳನ್ನು ಎದುರಿಸುವುದು ಮಕ್ಕಳ ಹಿತಾಸಕ್ತಿಯನ್ನು ರಕ್ಷಣೆ ಮಾಡುವುದು ಮತ್ತು ಮನಃಶಾಸ್ತ್ರಜ್ಞರ ಸಹಕಾರವನ್ನು ಪಡೆಯುವುದು ಅತ್ಯಗತ್ಯ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ವೈವಾಹಿಕ ವಿವಾದಗಳಲ್ಲಿ ಮಗುವಿನ ಪಾಲನೆಗೆ ಸಂಬಂಧಿಸಿದಂತೆ ಹೆಚ್ಚು ತೊಂದರೆಗೆ ಸಿಲುಕುವುದು ಮಗುವೇ ಆಗಿರುತ್ತದೆ. ಅಲ್ಲದೆ, ವಿಚ್ಛೇದನ ಪ್ರಕರಣಗಳಲ್ಲಿ ಪೋಷಕರು ಮಕ್ಕಳ ಪಾಲನೆ ಮತ್ತು ತಮ್ಮ ವಶಕ್ಕೆ ಪಡೆದುಕೊಳ್ಳುವುದಕ್ಕೆ ಹೋರಾಡುತ್ತಾರೆ.

ತಮ್ಮ ಮಕ್ಕಳನ್ನು ಪೋಷಣೆಗೆ ನಾವೇ ಸೂಕ್ತರು ಎಂದು ಮನವೊಲಿಸಲು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಜತೆಗೆ, ಮಗುವಿನ ಅಜ್ಜಿಯರು ಹಾಗೂ ಇತರೆ ಕುಟುಂಬ ಸದಸ್ಯರು ಇದೇ ರೀತಿಯಲ್ಲಿ ಮನವೊಲಿಸುವ ತಂತ್ರಗಳನ್ನು ಬಳಸಿಕೊಂಡು ನ್ಯಾಯಾಂಗದ ಮೇಲೆ ಪ್ರಭಾವ ಭೀರಿ ಪ್ರಕರಣದ ತೀರ್ಪು ದುರ್ಬಲಗೊಳ್ಳುವಂತೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮಗುವಿನ ಮನಸ್ಸನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡು ಅದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ರಚನೆ ಮಾಡುವುದು ಅತ್ಯಗತ್ಯ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+