ತಕ್ಷಣ ಮುಷ್ಕರ ನಿಲ್ಲಿಸಿ, ವೈದ್ಯರಿಗೆ ಹೈಕೋರ್ಟ್ ಸೂಚನೆ

Posted By: Gururaj
Subscribe to Oneindia Kannada
   ತಕ್ಷಣ ಮುಷ್ಕರ ನಿಲ್ಲಿಸಿ, ವೈದ್ಯರಿಗೆ ಹೈಕೋರ್ಟ್ ಸೂಚನೆ | Oneindia Kannada

   ಬೆಂಗಳೂರು, ನವೆಂಬರ್ 16 : ಖಾಸಗಿ ಆಸ್ಪತ್ರೆಗಳ ವೈದ್ಯರು ತಕ್ಷಣದಿಂದಲೇ ಮುಷ್ಕರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

   ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಈ ಸೂಚನೆ ನೀಡಿದೆ.

   ವೈದ್ಯರ ಮುಷ್ಕರಕ್ಕೆ ಕಾರಣವಾಯಿತೇ ಈ ಅಂಶಗಳು

   HC tells doctors to resume work from now

   ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್, ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ವಿಭಾಗೀಯ ಪೀಠ ಗುರುವಾರ ಮಧ್ಯಾಹ್ನ ಈ ಸೂಚನೆ ಕೊಟ್ಟಿದೆ.

   ವೈದ್ಯರ ಪ್ರತಿಭಟನೆ, ಪ್ರತಿಪಕ್ಷಗಳತ್ತ ಕೈ ತೋರಿಸಿದ ಸಿಎಂ

   ಒಂದು ದಿನದ ಕಾಲಾವಕಾಶ ಕೇಳಿದ ಖಾಸಗಿ ವೈದ್ಯರ ಪರ ವಕೀಲರ ಮನವಿಯನ್ನು ಕೋರ್ಟ್ ತಳ್ಳಿ ಹಾಕಿತು. ತಕ್ಷಣ ಕರ್ತವ್ಯಕ್ಕೆ ಹಾಜರಾಗಿ, ನಿಮ್ಮ ಸಮಸ್ಯೆ ಬಗ್ಗೆ ನಂತರ ಗಮನ ಹರಿಸೋಣ ಎಂದು ನ್ಯಾಯಾಲಯ ಹೇಳಿತು.

   In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

   ಸರ್ಕಾರ ಸೂಕ್ತ ನಿರ್ಧಾರವನ್ನು ಕೈಗೊಳ್ಳದಿದ್ದರೆ ನ್ಯಾಯಲಯವೇ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತದೆ ಎಂದು ಹೇಳಿದ ಕೋರ್ಟ್, ಶುಕ್ರವಾರ ಬೆಳಗ್ಗೆ 10.30ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದೆ.

   ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ರಮೇಶ್ ಕುಮಾರ್, ವೈದ್ಯಕೀಯ ಸಂಘದ ಪರಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   The Karnataka High Court directed the doctors to withdraw their strike. Doctor protesting against proposed amendments to the Karnataka Private Medical Establishments Act, 2017.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ