
ಜಾರಕಿಹೊಳಿ ಸಿಡಿ ಪ್ರಕರಣ: ಲಿಖಿತ ವಾದಾಂಶ ಸಲ್ಲಿಸದ್ದಕ್ಕೆ ಹೈಕೋರ್ಟ್ ಬೇಸರ
ಬೆಂಗಳೂರು, ಸೆ.26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಎಸ್‌ಐಟಿ ಈವರೆಗೂ ಲಿಖಿತ ವಾದ ಸಲ್ಲಿಸದಿರುವುದಕ್ಕೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.
ಅಲ್ಲದೆ, ಲಿಖಿತ ವಾದಾಂಶ ಹಾಗೂ ಸಿನಾಪ್ಸಿಸ್ ಸಲ್ಲಿಸುವವರೆಗೂ ವಾದ-ಪ್ರತಿವಾದ ಆಲಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಶಾಸಕರ ಮೌಲ್ಯ ಮಾಪನ; ರಮೇಶ್ ಜಾರಕಿಹೊಳಿ ಕಾರ್ಯ ವೈಖರಿಗೆ ಅಂಕ ನೀಡಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದನ್ನು ಪ್ರಶ್ನಿಸಿ ಹಾಗೂ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‌ಮೇಲ್ ಪ್ರಕರಣದ ಎಫ್‌ಐಆರ್ ರದ್ದು ಕೋರಿ ಸಂತ್ರಸ್ತೆ, ಆರೋಪಿಗಳಾದ ಎಸ್. ಶ್ರವಣ್ ಕುಮಾರ್ ಹಾಗೂ ಬಿ.ಎಂ. ನರೇಶ್ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ನಡೆಸಿತು.
ಸಂತ್ರಸ್ತೆ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ಲಿಖಿತ ವಾದಾಂಶ ಮತ್ತು ಸಿನಾಪ್ಸಿಸ್ ಸಲ್ಲಿಸಲು ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ಸೆ.5ರಂದು ನ್ಯಾಯಾಲಯ ಸೂಚಿಸಿತ್ತು. ತಮ್ಮ ಲಿಖಿತ ವಾದ ಸಲ್ಲಿಸಲಾಗಿದೆ.
ಜಾರಕಿಹೊಳಿ ಸಿಡಿ ಪ್ರಕರಣ: ವರದಿ ಸಲ್ಲಿಸದಂತೆ ಹೈಕೋರ್ಟ್ ಆದೇಶ
ಆದರೆ, ಸರ್ಕಾರ, ಎಸ್‌ಐಟಿ, ಅಮಿಸ್ ಕ್ಯೂರಿ ಸೇರಿದಂತೆ ಪ್ರತಿವಾದಿಗಳ್ಯಾರೂ ಲಿಖಿತ ವಾದದ ಸಲ್ಲಿಸಿಲ್ಲ. ಹಾಗಾಗಿ, ಅವರ ಮಂಡಿಸಲಿರುವ ಕಾನೂನಾತ್ಮಕ ಅಂಶಗಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲವಾಗಿದೆ ಎಂದರು.
10 ದಿನ ಕಾಲಾವಕಾಶ: ಅದಕ್ಕೆ ನ್ಯಾಯಪೀಠ, ಈಗಾಗಲೇ ಹಲವು ಬಾರಿ ಕಾಲಾವಕಾಶ ನೀಡಿದ್ದರೂ ಸರ್ಕಾರ, ಎಸ್‌ಐಟಿ ಮತ್ತು ರಮೇಶ್ ಜಾರಕಿಹೊಳಿ ಸೇರಿದಂತೆ ಇತರೆ ಪ್ರತಿವಾದಿಗಳು ತಮ್ಮ ಲಿಖಿತ ವಾದ ಸಲ್ಲಿಸಿಲ್ಲ. ಲಿಖಿತ ವಾದ ಸಲ್ಲಿಸದ ಹೊರತು ವಾದ-ಪ್ರತಿವಾದ ಆಲಿಸುವುದಿಲ್ಲ. ಹಾಗಾಗಿ, ಮತ್ತೊಮ್ಮೆ 10 ದಿನ ಕಾಲಾವಕಾಶ ನೀಡಲಾಗುವುದು. ಅಷ್ಟರೊಳಗೆ ಎಲ್ಲರೂ ತಮ್ಮ ಲಿಖಿತ ವಾದ ಸಲ್ಲಿಸಬೇಕು. ಮತ್ತಷ್ಟು ವಿಳಂಬ ಮಾಡಬಾರದು ಎಂದು ಹೇಳಿತು.
ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಎಸ್ಐಟಿ ಸಲ್ಲಿಸಿರುವ 'ಬಿ' ವರದಿಗೆ ಸುಪ್ರೀಂ ತಡೆ
ಅಲ್ಲದೆ, ಲಖಿತ ವಾದ ಸಲ್ಲಿಸಿದರೆ ಅದರಿಂದ ಯಾರು ಯಾವೆಲ್ಲಾ ಕಾನೂನಾತ್ಮಕ ಅಂಶದ ಮೇಲೆ ವಾದ ಮಂಡಿಸಲಿದ್ದಾರೆಂಬುದು ತಿಳಿಯುತ್ತದೆ. ಹಾಗೆಯೇ, ದಿನಗಟ್ಟಲೆ-ಗಂಟೆಗಟ್ಟಲೆ ವಾದ ಮಂಡಿಸುವುದನ್ನು ತಪ್ಪಿಸಬಹುದು. ವಾದ ಮಂಡನೆಗೆ ಸಮಯದ ಮಿತಿ ನಿಗದಿಪಡಿಸಬಹುದು ಎಂದು ಹೇಳಿತು.

ಏಕಸದಸ್ಯಪೀಠ ಏನು ಹೇಳಿತ್ತು?: ಕಳೆದ ಮಾ. 28ರಂದು ಹೈಕೋರ್ಟ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳನ್ನು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಸ್ಥಾಪನೆಯಾಗಿರುವ ವಿಶೇಷ ನ್ಯಾಯಪೀಠಕ್ಕೆ ವರ್ಗಾಯಿಸಿತ್ತು. ಹಾಗಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜಾರಕಿಹೊಳಿ ಜನಪ್ರತಿನಿಧಿ ಆಗಿರುವುದರಿಂದ ಮತ್ತು ಅವರ ಮೇಲೆಯೇ ನೇರ ಆರೋಪ ಇರುವುದರಿಂದ ವಿಶೇಷ ಕೋರ್ಟ್ ವಿಚಾರಣೆ ನಡೆಸುವುದು ಸೂಕ್ತವೆಂದು ಏಕಸದಸ್ಯಪೀಠ ಹೇಳಿದೆ.
ಸಿಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿದ ಆದೇಶ ಪ್ರಶ್ನಿಸಿ ಮತ್ತು ರಮೇಶ್ ಜಾರಕಿಹೊಳಿ ಕಬ್ಬನ್ ಪಾರ್ಕ್ ಠಾಣೆಗೆ ನೀಡಿದ್ದ ಬ್ಲಾಕ್‌ಮೇಲ್ ದೂರು ಆಧರಿಸಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಸಂತ್ರಸ್ತೆ ಸಲ್ಲಿಸಿರುವ ಪ್ರತ್ಯೇಕ ಎರಡು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತ್ತು.
ಬೊಮ್ಮಾಯಿ ಸಂಪುಟಕ್ಕೆ ರಮೇಶ್ ಸೇರ್ಪಡೆ ಬಗ್ಗೆ ಬಾಲಚಂದ್ರ ಹೇಳಿದ್ದೇನು?
ಸಿಡಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಲಿ ಶಾಸಕರಾಗಿದ್ದಾರೆ. ಹೈಕೋರ್ಟ್‌ನಲ್ಲಿ ಮಾಜಿ-ಹಾಲಿ ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಲು ವಿಶೇಷ ನ್ಯಾಯಪೀಠವಿದೆ. ಹಾಗಾಗಿ, ಆ ನ್ಯಾಯಪೀಠದ ಮುಂದೆ ಈ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಿ ಆದೇಶಿಸಲು ಕಡತವನ್ನು ಸಿಜೆ ಮುಂದೆ ಮಂಡಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿದ್ದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ಮಾ.10ರಂದು ವಿಲೇವಾರಿ ಮಾಡಿತ್ತು. ಆದರೆ ಎಸ್ ಐ ಟಿ ರಚನೆ ಪ್ರಶ್ನಿಸಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಏಕಸದಸ್ಯಪೀಠಕ್ಕೆ ವರ್ಗಾಯಿಸಿದೆ.