ಮಲ್ಲೇಶ್ವರಂ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಲಿಶಾಗೆ ಸರ್ಕಾರಿ ಹುದ್ದೆ!

Written By: Ramesh
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 19 : 2013ರ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಲಿಶಾ ಅವರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ.

ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ 20 ವರ್ಷದ ಲಿಶಾ ಅವರು ವಿಕಲಚೇತನ ಕೋಟಾದಡಿ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಮಂಗಳವಾರ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ಉದ್ಯೋಗ ನೀಡುವಂತೆ ಆದೇಶ ನೀಡಿತು ಮತ್ತು ಆಕೆಗೆ ನೀಡಬೇಕಾಗಿರುವ ಪರಿಹಾರದ ಮೊತ್ತವನ್ನು ಮೂರು ತಿಂಗಳೊಳಗೆ ನೀಡಬೇಕು ಎಂದು ಸೂಚನೆ ನೀಡಿದೆ.[ಮಲ್ಲೇಶ್ವರಂ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಡೇನಿಯಲ್ ಬಂಧನ]

HC

ಬಾಂಬ್ ಸ್ಫೋಟಗಳು ನಡೆದಾಗ ಗಾಯಗೊಂಡವರಿಗೆ ಪರಿಹಾರ ನೀಡಲು ರಾಷ್ಟ್ರೀಯ ನೀತಿಯನ್ನು ರೂಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶ ನೀಡಲಾಗಿದೆ.

2013 ರ ಏ.17ರಂದು ಬೆಳಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿತ್ತು. ಈ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇನಿಯಲ್ ಪ್ರಕಾಶ್ ಸೇರಿ ಇಲ್ಲಿ ತನಕ 15 ಜನ ಶಂಕಿತರನ್ನು ಬಂಧಿಸಲಾಗಿದೆ.

ಈ ಬಾಂಬ್ ಸ್ಫೋಟದಲ್ಲಿ ಸಿಇಟಿ ಕೋಚಿಂಗ್ ಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರಾದ ರಕ್ಷಿತಾ ಹಾಗೂ ಲೀಶಾ ಸೇರಿದಂತೆ 16 ಮಂದಿ ಗಾಯಗೊಂಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In an order that can be a solace of sorts to 20-year-old Leesha, who had suffered serious injuries in the bomb blast near the office of the Bharatiya Janata Party at Malleshwaram in 2013, the Karnataka High Court directed the State to provide a suitable job to her on compassionate grounds within three months.
Please Wait while comments are loading...