ಫೆ.9ಕ್ಕೆ ತೀರ್ಪು: ರಾಘವಶ್ರೀಗಳ ಪ್ರಕರಣ ರದ್ದಾಗುವುದೇ? ಇಲ್ಲವೇ?

ಬೆಂಗಳೂರು, ಫೆ.8: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡು­ವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದೆ. ಪ್ರಕರಣ ರದ್ದಾಗುವುದೇ? ಇಲ್ಲವೇ? ಎಂಬುದು ಸೋಮವಾರ ಮಧ್ಯಾಹ್ನದ ವೇಳೆಗೆ ತಿಳಿಯಲಿದೆ.

ನ್ಯಾಯಮೂರ್ತಿ ಆನಂದ ಭೈರಾರೆಡ್ಡಿ ಮತ್ತು ಎನ್‌. ಆನಂದ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಎರಡೂ ಕಡೆಯ ವಾದಗಳನ್ನು ಆಲಿಸಿ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿದ್ದು, ಸೋಮವಾರ ಮಧ್ಯಾಹ್ನ 2.30ರ ವೇಳೆಗೆ ಕೋರ್ಟ್ ಕೊಠಡಿ 12ರಲ್ಲಿ ತೀರ್ಪು ಪ್ರಕಟಿಸಲಿದೆ. [ರಾಘವೇಶ್ವರ ಶ್ರೀ ಡಿಎನ್ಎ ವರದಿ ಪಾಸಿಟಿವ್ : ಎಜಿ]

ರಾಘವೇಶ್ವರ ಶ್ರೀಗಳು ಪ್ರಕರಣ ರದ್ದು ಕೋರಿರುವ ಅರ್ಜಿಯ ವಿಚಾರಣೆಯಿಂದ ರಾಘವೇಶ್ವರ ಶ್ರೀಗಳ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿಗಳಾದ ಪವನ್‌ಕುಮಾರ್ ಬಿ. ಭಜಂತ್ರಿ, ಹೆಚ್‌.ಜಿ.ರಮೇಶ್, ಕೆ.ಎನ್.ಫಣೀಂದ್ರ, ರಾಮ­ಮೋಹನ ರೆಡ್ಡಿ ಮತ್ತು ಎನ್.ಕುಮಾರ್ -ಐವರು ನ್ಯಾಯಮೂರ್ತಿಗಳು ವಿವಿಧ ಕಾರಣಗಳಿಗಾಗಿ ಹಿಂದೆ ಸರಿದಿದ್ದರು. ಆದ್ದರಿಂದ ಹೊಸ ಪೀಠ ರಚನೆಯಾಗಿತ್ತು. ಗುರುವಾರದಿಂದ ಪೀಠದಲ್ಲಿ ವಿಚಾರಣೆ ನಡೆದಿತ್ತು.

Raghaveshwara Seer case : HC pronounce judgement on Feb.9

ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಮೇಲೆ ಅತ್ಯಾಚಾರ ನಡೆಸಿದ ಆರೋಪವನ್ನು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಎದುರಿಸುತ್ತಿದ್ದಾರೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶ್ರೀಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಶ್ರೀಗಳಿಗೆ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. [ಎರಡು ಪ್ರಕರಣದಲ್ಲಿ ರಾಘವೇಶ್ವರ ಶ್ರೀಗಳಿಗೆ ಜಾಮೀನು]

ಮತ್ತೆ ವೈದ್ಯಕೀಯ ಪರೀಕ್ಷೆ: ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಡಿಎನ್ಎ ವರದಿ ಪಾಸಿಟಿವ್ ಆಗಿದೆ ಎಂದು ಪ್ರಕರಣದ ತನಿಖೆಯ ಕುರಿತು ಹೈ ಕೋರ್ಟ್‌ಗೆ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮಕುಮಾರ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಆದರೆ, ವೈದ್ಯಕೀಯ ಪರೀಕ್ಷೆ ರದ್ದು ಕೋರಿ ಶ್ರೀಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಸಿಆರ್‌ಪಿಸಿ 53 ಮತ್ತು 53(ಎ) ಅನ್ನು ಪ್ರಶ್ನಿಸಿ ಶ್ರೀಗಳು ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾ.ಎ.ಎನ್ ವೇಣುಗೊಪಾಲಗೌಡ ಅವರಿದ್ದ ಏಕಸದಸ್ಯ ಪೀಠ, 2014ರ ಡಿ.3ರಂದು ಅರ್ಜಿ ವಜಾಗೊಳಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಶ್ರೀಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+