499 ನ್ಯಾಯಾಧೀಶರ ವರ್ಗಾವಣೆ: 56 ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಏ.25. ಹಿರಿಯ ಜಿಲ್ಲಾ ನ್ಯಾಯಾಧೀಶರು ಸೇರಿದಂತೆ ನ್ಯಾಯಾಂಗದ ನಾನಾ ವೃಂದಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 499 ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ.

ಈ ಕುರಿತು ಸಿಜೆ ಅವರ ನಿರ್ದೇಶನದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ.

ಅದರಂತೆ 16 ಜಿಲ್ಲಾ ಹಿರಿಯ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಹಿರಿಯ ಜಿಲ್ಲಾ ನ್ಯಾಯಾಧೀಶ ಕೆ.ಎಸ್. ಭರತ್ ಕುಮಾರ್ ಅವರನ್ನು ರಿಜಿಸ್ಟ್ರಾರ್ (ವಿಚಕ್ಷಣಾ) ಆಗಿ ನೇಮಕ ಮಾಡಲಾಗಿದೆ, ಮತ್ತೊರ್ವ ಹಿರಿಯ ಜಿಲ್ಲಾ ನ್ಯಾಯಾಧೀಶ ಜೈಶಂಕರ್ ಅವರನ್ನು ರಿಜಿಸ್ಟ್ರಾರ್ ಜನರಲ್ ನ್ಯಾಯಾಂಗ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಎಲ್ಲ ವರ್ಗಾವಣೆ ಆದೇಶ ಮೇ. 23ರಿಂದ ಜಾರಿಗೆ ಬರಲಿವೆ.

HC transfers 499 judicial officers, Notification issued for recruitment of 56 civil judges

ಪ್ರತಿವರ್ಷ ಹೈಕೋರ್ಟ್ ಗೆ ಬೇಸಿಗೆ ರಜೆ ಆರಂಭವಾಗುವ ಹೊತ್ತಿನಲ್ಲಿ ಜಿಲ್ಲಾ ಮತ್ತು ತಾಲೂಕು ಕೋರ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬಹುತೇಕ ಒಂದೇ ಸ್ಥಳದಲ್ಲಿ ಮೂರು ವರ್ಷ ಸೇವೆ ಸಲ್ಲಿಸಿದ್ದರೆ ವರ್ಗಾವಣೆ ಮಾಡುವುದು ನಿಶ್ಚಿತ. ಅದರಂತೆ ಈ ವರ್ಷವೂ ನಾನಾ ಹಂತದಲ್ಲಿ 499 ನ್ಯಾಯಾಂಗ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆ ಆದೇಶ ಹಾಗೂ ಹೆಚ್ಚಿನ ವಿವರಗಳು ಹೈಕೋರ್ಟ್ ವೆಬ್ ಸೈಟ್ ನಲ್ಲಿ ಲಭ್ಯವಿದೆ. ವರ್ಗಾವಣೆಯಾಗಿರುವವರಲ್ಲಿ 16 ಮಂದಿ ಹಿರಿಯ ಜಿಲ್ಲಾ ನ್ಯಾಯಾಧೀಶರು, 127 ಮಂದಿ ಜಿಲ್ಲಾ ನ್ಯಾಯಾಧೀಶರು ಮತ್ತು 117 ಮಂದಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು 239 ಸಿವಿಲ್ ನ್ಯಾಯಾಧೀಶರು ಸೇರಿದ್ದಾರೆ.

56 ಸಿವಿಲ್ ನ್ಯಾಯಾಧೀಶರ ಹುದ್ದೆ ಭರ್ತಿ:

ಈ ಮಧ್ಯೆ, ನಾನಾ ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳೂ ಸೇರಿದಂತೆ 56 ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಹೈಕೋರ್ಟ್ ಅಧಿಸೂಚನೆ ಹೊರಡಿಸಿದ್ದು, ಅದನ್ನು ರಾಜ್ಯಪತ್ರದಲ್ಲೂ ಉಲ್ಲೇಖಿಸಲಾಗಿದೆ.

ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಮೇ 23 ಕಡೆಯ ದಿನವಾಗಿದೆ. ಹೆಚ್ಚಿನ ವಿವರ ಹೈಕೋರ್ಟ್ ನ ನೇಮಕಾತಿ ವಿಭಾಗದಲ್ಲಿ ಮತ್ತು ರಾಜ್ಯಪತ್ರದಲ್ಲೂ ಸಹ ಲಭ್ಯವಿದೆ.

ವಿದ್ಯಾರ್ಹತೆ, ವಿಯೋಮಿತಿ, ವೇತನ ಶ್ರೇಣಿ ನೇಮಕ ವಿಧಾನ ಮತ್ತಿತರ ವಿವರಗಳು ವೆಬ್‌ಸೈಟ್‌ನಲ್ಲಿ ದೊರಕುತ್ತದೆ. ವೇತನ 44,770 ರೂ. ಎಲ್ಲ ನೇಮಕ ಪ್ರಕ್ರಿಯೆಯಂತೆ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನ ವಿಧಾನದಲ್ಲಿ ನೇಮಕ ನಡೆಯಲಿದೆ.

Recommended Video

      ಇನ್ನೊಂದು ಸಲ ಇದೇ ಮಿಸ್ಟೇಕ್ ಮಾಡಿದ್ರೆ KL ರಾಹುಲ್ IPL ನಿಂದ ಬ್ಯಾನ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+