ಚಿತ್ರಗಳು : ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ದೇವೇಗೌಡರು

Posted By:
Subscribe to Oneindia Kannada

ಬೆಂಗಳೂರು, ಮೇ 18 : ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಬುಧವಾರ 83ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. 'ರಾಜಕೀಯ ನಿವೃತ್ತಿಯ ಪ್ರಶ್ನೆಯೇ ಇಲ್ಲ. ಕೊನೆ ತನಕ ಹೋರಾಟ ಮಾಡುತ್ತಲೇ ಇರುತ್ತೇನೆ' ಎಂದು ಘೋಷಿಸಿದರು.

ಹುಟ್ಟು ಹಬ್ಬದ ಪ್ರಯುಕ್ತ ದೇವೇಗೌಡರು ಪತ್ನಿ ಜೊತೆ ತಿರುಪತಿಗೆ ತೆರಳಿದ್ದರು. ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ನೂರಾರು ಕಾರ್ಯಕರ್ತರು ಬರಮಾಡಿಕೊಂಡರು. ವಿಮಾನ ನಿಲ್ದಾಣದ ಹೊರಗೆ ಕಾರ್ಯಕರ್ತರ ಜೊತೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡರು. [ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ : ದೇವೇಗೌಡ]

deve gowda

ಬುಧವಾರ ಸಂಜೆ ಪದ್ಮನಾಭನಗರದಲ್ಲಿನ ನಿವಾಸಕ್ಕೆ ಭೇಟಿ ನೀಡಿದ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಅಭಿಮಾನಿಗಳು ಹೂಗುಚ್ಚ ನೀಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ದೇವೇಗೌಡರ ಪತ್ನಿ ಚನ್ನಮ್ಮ ಅವರು ಜೊತೆಯಲ್ಲಿದ್ದರು. [ಮೌನ ಮುರಿದ ದೇವೇಗೌಡರು ಹೇಳಿದ್ದೇನು?]

-
-
-
-
-

ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡರು, 'ರಾಜಕೀಯ ನಿವೃತ್ತಿ ಪಡೆಯುವ ಪ್ರಶ್ನೆಯೇ ಇಲ್ಲ. ಕೊನೆಯ ಕ್ಷಣದವರೆಗೂ ಹೋರಾಟ ನಡೆಸುತ್ತಿರುತ್ತೇನೆ' ಎಂದರು.

ಶುಭಾಶಯ ಕೋರಿದ ಮೋದಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಟ್ವಿಟರ್ ಮೂಲಕ ಶುಭಾಶಯ ಕೋರಿದರು. ದೇವೇಗೌಡರಿಗೆ ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಮೋದಿ ಟ್ವಿಟ್ ಮಾಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Former prime minister and JDS national president Haradanahalli Doddegowda Deve Gowda (H.D.Deve Gowda) celebrated 83rd birthday on Wednesday, May 18, 2016. Here are the pics.
Please Wait while comments are loading...