ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ : ಕಾಂಗ್ರೆಸ್‌ಗೆ ಷರತ್ತು ಹಾಕಿದ ದೇವೇಗೌಡರು!

|
Google Oneindia Kannada News

Recommended Video

ಸಂಪುಟ ವಿಸ್ತರಣೆ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆ | Oneindia Kannada

ಬೆಂಗಳೂರು, ಜೂನ್ 06 : ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕಾಂಗ್ರೆಸ್ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದು, ಇದಕ್ಕೆ ಕಾಂಗ್ರೆಸ್‌ ಕಡೆಯಿಂದ ಇನ್ನೂ ಒಪ್ಪಿಗೆ ಸಿಕ್ಕಿಲ್ಲ.

ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಹಲವು ತಂತ್ರಗಳನ್ನು ಮಾಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಪುಟದಲ್ಲಿ ಖಾಲಿ ಇರುವ 3 ಸ್ಥಾನಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಿದೆ. ಜೆಡಿಎಸ್‌ ಕೋಟಾದ 2, ಕಾಂಗ್ರೆಸ್ ಕೋಟಾದ 1 ಸಚಿವ ಸ್ಥಾನ ಖಾಲಿ ಇದೆ.

ಸಂಪುಟ ವಿಸ್ತರಣೆ : ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ?ಸಂಪುಟ ವಿಸ್ತರಣೆ : ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ?

ಖಾಲಿ ಇರುವ ಮೂರು ಸ್ಥಾನಗಳ ಪೈಕಿ ಎರಡನ್ನು ಪಕ್ಷೇತರ ಶಾಸಕರಿಗೆ ನೀಡಲು ಕಾಂಗ್ರೆಸ್ ಪ್ರಸ್ತಾಪ ಮುಂದಿಟ್ಟಿತ್ತು. ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರು.

ಸಂಪುಟ ಪುನಾರಚನೆಗೆ ತಾತ್ಕಾಲಿಕ ತಡೆಸಂಪುಟ ಪುನಾರಚನೆಗೆ ತಾತ್ಕಾಲಿಕ ತಡೆ

ಮಂಗಳವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ಈ ಕುರಿತು ಚರ್ಚೆ ನಡೆದಿತ್ತು. ಶಾಸಕರು ಸರ್ಕಾರ ಉಳಿಸಿಕೊಳ್ಳಲು ಎರಡು ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಒಪ್ಪಿಗೆ ಕೊಟ್ಟಿದ್ದರು. ಆದರೆ, ಎಚ್.ಡಿ.ದೇವೇಗೌಡರು ಹೊಸ ಷರತ್ತು ಹಾಕಿದ್ದಾರೆ.....

ಅಧಿಕಾರ ತ್ಯಾಗಕ್ಕೆ ಒಪ್ಪದ ಸಚಿವರು, ಇಕ್ಕಟ್ಟಿನಲ್ಲಿ ಮೈತ್ರಿ ಸರ್ಕಾರಅಧಿಕಾರ ತ್ಯಾಗಕ್ಕೆ ಒಪ್ಪದ ಸಚಿವರು, ಇಕ್ಕಟ್ಟಿನಲ್ಲಿ ಮೈತ್ರಿ ಸರ್ಕಾರ

ಸಂಪುಟ ವಿಸ್ತರಣೆ, 3 ಸ್ಥಾನ ಭರ್ತಿ

ಸಂಪುಟ ವಿಸ್ತರಣೆ, 3 ಸ್ಥಾನ ಭರ್ತಿ

ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಮೂರು ಸಚಿವ ಸ್ಥಾನ ಖಾಲಿ ಇವೆ. ಕಾಂಗ್ರೆಸ್ ಕೋಟಾದಲ್ಲಿ 1, ಜೆಡಿಎಸ್ ಕೋಟಾದಲ್ಲಿ 2 ಸ್ಥಾನಗಳಿವೆ. ಆದರೆ, ಜೆಡಿಎಸ್ ಕೋಟಾದಡಿ ಇಬ್ಬರು ಪಕ್ಷೇತರ ಶಾಸಕರನ್ನು ಸೇರಿಸಿಕೊಳ್ಳಲು ದೇವೇಗೌಡರು ಒಪ್ಪಿಗೆ ನೀಡಿಲ್ಲ.

ಕಾಂಗ್ರೆಸ್‌ಗೆ ಷರತ್ತು ಹಾಕಿದ ಗೌಡರು

ಕಾಂಗ್ರೆಸ್‌ಗೆ ಷರತ್ತು ಹಾಕಿದ ಗೌಡರು

ಎಚ್.ಡಿ.ದೇವೇಗೌಡರು ಇಬ್ಬರು ಪಕ್ಷೇತರ ಶಾಸಕರನ್ನು ಸೇರಿಸಿಕೊಳ್ಳಲು ಒಪ್ಪಿಗೆ ನೀಡಿದ್ದಾರೆ. ಆದರೆ, ಕಾಂಗ್ರೆಸ್‌ನಿಂದ 1, ಜೆಡಿಎಸ್‌ನಿಂದ 1 ಸ್ಥಾನ ಭರ್ತಿ ಮಾಡೋಣ. ಎರಡೂ ಸ್ಥಾನವನ್ನು ಜೆಡಿಎಸ್‌ ಬಿಟ್ಟುಕೊಡುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ

ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ

ಮಂಗಳವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರವನ್ನು ಉಳಿಸಿಕೊಳ್ಳಲು ಎರಡೂ ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಜೆಡಿಎಸ್ ಶಾಸಕರು ಒಪ್ಪಿಗೆ ನೀಡಿದ್ದಾರೆ. ಆದರೆ, ದೇವೇಗೌಡರು ಒಪ್ಪಿಗೆ ನೀಡಿಲ್ಲ.

ಕಾಂಗ್ರೆಸ್‌ನಿಂದ ಯಾರು ಸಂಪುಟಕ್ಕೆ?

ಕಾಂಗ್ರೆಸ್‌ನಿಂದ ಯಾರು ಸಂಪುಟಕ್ಕೆ?

ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಇಬ್ಬರ ಹೆಸರು ಕೇಳಿಬರುತ್ತಿದೆ. ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ, ಹಿರೇಕೆರೂರು ಕ್ಷೇತ್ರದ ಬಿ.ಸಿ.ಪಾಟೀಲ್ ಇಬ್ಬರಲ್ಲಿ ಒಬ್ಬರು ಸಂಪುಟ ಸೇರುವೆ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಅವರ ಮನವೊಲಿಸುವ ಕೆಲಸವನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ.

English summary
JD(S) supremo H.D.Deve Gowda condition for the Karnataka's Congress-JD(S) alliance govt cabinet expansion. Three ministers post vacant in Chief Minister H.D.Kumaraswamy cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X