ರಾಷ್ಟ್ರ ರಾಜಕಾರಣದ ಮುಂದಿನ ನಡೆ ಬಿಚ್ಚಿಟ್ಟ ದೇವೇಗೌಡರು
Recommended Video

ಬೆಂಗಳೂರು, ಡಿಸೆಂಬರ್ 16 : ಮಧ್ಯಪ್ರದೇಶ, ರಾಜಸ್ಥಾನದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ಸೋಮವಾರ ನಡೆಯಲಿದೆ. ಈ ಕಾರ್ಯಕ್ರಮ ಮಹಾಮೈತ್ರಿಯ ಮತ್ತೊಂದು ವೇದಿಕೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್‌ನಾಥ್, ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹಲವಾರು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾನುವಾರ ಟ್ವೀಟ್ ಮೂಲಕ ಕಮಲ್‌ನಾಥ್, ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಮಲ್‌ನಾಥ್ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೋಮವಾರ ನಡೆಯುವ ಸಮಾರಂಭಗಳು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ್ದು. ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಸ್ಪಷ್ಟ ಸಂದೇಶ. ಮಹಾ ಮೈತ್ರಿಯ ಮತ್ತೊಂದು ವೇದಿಕೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ರಾಜಸ್ಥಾನ,ಮಧ್ಯಪ್ರದೇಶದಲ್ಲಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಅಶೋಕ್ ಗೆಹ್ಲೋಟ್, ಕಮಲ್ ನಾಥ್,ಯುವ ನಾಯಕ ಸಚಿನ್ ಪೈಲಟ್ ಅವರಿಗೆ ನನ್ನ ಶುಭಾಶಯ. ಮುಖ್ಯವಾಗಿ ನಾಳೆ ನಡೆಯಲಿರುವ ಸಮಾರಂಭಗಳು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ್ದು.ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಸ್ಪಷ್ಟ ಸಂದೇಶ. ಮಹಾಮೈತ್ರಿಯ ಮತ್ತೊಂದು ವೇದಿಕೆ.
— H D Devegowda (@H_D_Devegowda) December 16, 2018












Click it and Unblock the Notifications