ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರ ರಾಜಕಾರಣದ ಮುಂದಿನ ನಡೆ ಬಿಚ್ಚಿಟ್ಟ ದೇವೇಗೌಡರು

|
Google Oneindia Kannada News

Recommended Video

ರಾಷ್ಟ್ರ ರಾಜಕಾರಣದ ಮುಂದಿನ ನಡೆ ಬಿಚ್ಚಿಟ್ಟ ದೇವೇಗೌಡರು | Oneindia Kannada

ಬೆಂಗಳೂರು, ಡಿಸೆಂಬರ್ 16 : ಮಧ್ಯಪ್ರದೇಶ, ರಾಜಸ್ಥಾನದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ಸೋಮವಾರ ನಡೆಯಲಿದೆ. ಈ ಕಾರ್ಯಕ್ರಮ ಮಹಾಮೈತ್ರಿಯ ಮತ್ತೊಂದು ವೇದಿಕೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್‌ನಾಥ್, ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹಲವಾರು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಪ್ರದೇಶದಲ್ಲಿ ಕಮಲ ಮುದುಡಿದರೇನಂತೆ, ಇನ್ನೊಂದು ಕಮಲ ಅರಳಿತಲ್ಲವೇ!ಮಧ್ಯಪ್ರದೇಶದಲ್ಲಿ ಕಮಲ ಮುದುಡಿದರೇನಂತೆ, ಇನ್ನೊಂದು ಕಮಲ ಅರಳಿತಲ್ಲವೇ!

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾನುವಾರ ಟ್ವೀಟ್ ಮೂಲಕ ಕಮಲ್‌ನಾಥ್, ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಮಲ್‌ನಾಥ್ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

HD Deve Gowda congratulated Madhya Pradesh and Rajasthan CM

ಸೋಮವಾರ ನಡೆಯುವ ಸಮಾರಂಭಗಳು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ್ದು. ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಸ್ಪಷ್ಟ ಸಂದೇಶ. ಮಹಾ ಮೈತ್ರಿಯ ಮತ್ತೊಂದು ವೇದಿಕೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

5 ರಾಜ್ಯಗಳ ಚುನಾವಣೆ : ಸಮೀಕ್ಷೆ ಹೇಳಿದ್ದೇನು? ಫಲಿತಾಂಶ ಬಂದಿದ್ದೇನು?5 ರಾಜ್ಯಗಳ ಚುನಾವಣೆ : ಸಮೀಕ್ಷೆ ಹೇಳಿದ್ದೇನು? ಫಲಿತಾಂಶ ಬಂದಿದ್ದೇನು?

English summary
Kamal Nath to take oath as Madhya Pradesh Chief Minister and Ashok Gehlot to take Chief Minister of Rajasthan and Sachin Pilot as DCM. JD(S) supremo H.D.Deve Gowda congratulated the all leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X