ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಿದ್ದರಾಮಯ್ಯ ಮೊದಲು ನಾಸ್ತಿಕರಾಗಿದ್ದರು, ಈಗ ಆಸ್ತಿಕರಾಗಿದ್ದಾರೆ'

By ನಮ್ಮ ಪ್ರತಿನಿಧಿ
|
Google Oneindia Kannada News

ಕಾರವಾರ, ಅಕ್ಟೋಬರ್ 16 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ನಾಸ್ತಿಕರಾಗಿದ್ದರು. ಆದರೆ, ಅಧಿಕಾರಕ್ಕೆ ಬಂದ ಬಳಿಕ ಅವರು ಆಸ್ತಿಕರಾಗಿದ್ದಾರೆ' ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೆಗೌಡ ಹೇಳಿದ್ದಾರೆ.

ಭಾನುವಾರ ಶಿರಸಿಯಲ್ಲಿ ಮಾತನಾಡಿದ ದೇವೇಗೌಡರು, 'ಮೊದ ಮೊದಲು ನಾಸ್ತಿಕರೆಂದು ಹೇಳಿಕೊಂಡು ಓಡಾಡುತ್ತಿದ್ದ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆಸ್ತಿಕರಾಗುತ್ತಿದ್ದಾರೆ. ಶನಿವಾರ ಕೋಲಾರದ ಮುಳಬಾಗಿಲಿನಲ್ಲಿ ವಿಘ್ನೇಶ್ವರ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ, ಕಾರ್ಯಕ್ರಮ ನಡೆಸಿ ನಾವೇ ಮುಂದೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ' ಎಂದರು.

ಅಸ್ತಿಕ-ನಾಸ್ತಿಕ: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆಅಸ್ತಿಕ-ನಾಸ್ತಿಕ: ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ

Siddaramaiah

'ನಮ್ಮ ಪಕ್ಷಕ್ಕೆ ಮೊದಲು ಅಪ್ಪ-ಮಕ್ಕಳ ಪಕ್ಷ ಎಂಬ ಆರೋಪವಿತ್ತು. ಆದರೆ, ಪರಿಶಿಷ್ಟ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ನಾಯಕರು ನಮ್ಮ ಪಕ್ಷದಲ್ಲಿದ್ದಾರೆ. ನಮ್ಮದು ಸಾಮೂಹಿಕ ನಾಯಕತ್ವದ ಪಕ್ಷವಾಗಿದೆ. ಪ್ರಾದೇಶಿಕ ಪಕ್ಷದಿಂದ ನೆರೆಯ ರಾಜ್ಯಗಳಲ್ಲಿ ಆದಂತಹ ಅಭಿವೃದ್ಧಿ ನಮ್ಮ ರಾಜ್ಯದಲ್ಲೂ ಆಗಬೇಕು' ಎಂದು ತಿಳಿಸಿದರು.

'ಕರ್ನಾಟಕದಲ್ಲಿಯೂ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕಿದೆ. ರಾಜ್ಯದ ಹಿತದೃಷ್ಟಿಯಿಂದ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದು ಅವಶ್ಯವಾಗಿದೆ. ಈ ಹಿನ್ನಲೆಯಲ್ಲಿ ಪಕ್ಷ ಸಂಘಟಿಸುವುದು ಅಗತ್ಯವಾಗಿದೆ. ಉತ್ತರ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಯಲ್ಲಿ ಇನ್ನು ಮುಂದೆ ಪಕ್ಷ ಸಂಘಟನೆಗೆ ಸಂಚರಿಸುತ್ತೇನೆ' ಎಂದು ಹೇಳಿದರು.

'ಈ ಭಾಗದಲ್ಲಿ ಮಧು ಬಂಗಾರಪ್ಪ ಹೆಚ್ಚು ಸಂಚಾರ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪರ ಪ್ರಭಾವ ಈ ಭಾಗದಲ್ಲಿ ಹೆಚ್ಚಿರುವುದರಿಂದ ಮಧು ಬಂಗಾರಪ್ಪ ಈ ಕಡೆ ಹೆಚ್ಚು ಓಡಾಡಿ ಮಾರ್ಗದರ್ಶನ ನೀಡುತ್ತಿದ್ದಾರೆ. ನವೆಂಬರ 1 ರಿಂದ ಕುಮಾರಸ್ವಾಮಿ ಕೂಡ ರಾಜ್ಯ ಪ್ರವಾಸ ಮಾಡಲಿದ್ದಾರೆ. ನಾನು ಕೂಡಾ ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಸಂಘಟನೆ ಮಾಡುತ್ತೇನೆ' ಎಂದರು.

ನಿಖಿಲ್ ಗೌಡ : ನಿಖಿಲ್ ಗೌಡರ ಕುರಿತ ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, 'ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವುದರಿಂದ ಅವರ ಕ್ಷೇತ್ರದಲ್ಲಿ ನಿಖಿಲ್ ಪ್ರಚಾರ ನಡೆಸಲಿದ್ದಾರೆ. ನಿಖಿಲ್ ಚಿತ್ರರಂಗದಲ್ಲಿದ್ದಾರೆ. ರಾಜಕೀಯಕ್ಕೆ ಬರುವುದಿಲ್ಲ' ಎಂದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ, ಸೊರಬಾ ಶಾಸಕ ಮಧು ಬಂಗಾರಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ನಾಯ್ಕ, ಜೆಡಿಎಸ್ ಮುಖಂಡರಾದ ಶಶಿಭೂಷಣ ಹೆಗಡೆ, ಎ.ರವೀಂದ್ರ ನಾಯ್ಕ, ರಾಜೇಶ್ವರಿ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

English summary
Former prime minister and JDS supremo H.D.Deve Gowda criticized Karnataka Chief Minister Siddaramaiah who visited temple Kolar on October 14, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X