ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಲು ದೇವೇಗೌಡರಿಗೆ ಆಫರ್!
ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲಲು ದೇವೇಗೌಡರಿಗೆ ಆಫರ್ ಬಂದಿದೆಯಂತೆ
ನವದೆಹಲಿ/ಬೆಂಗಳೂರು, ಮೇ 29: ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲಲು ದೇವೇಗೌಡರಿಗೆ ಆಫರ್ ಬಂದಿದೆಯಂತೆ. ಆದರೆ, ದೂಸ್ರಾ ಮಾತನಾಡದೆ, ಆಫರ್ ರಿಜೆಕ್ಟ್ ಮಾಡಿರುವ ಸುದ್ದಿ ಬಂದಿದೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ನಿನ್ನೆ ರಾತ್ರಿ ಮಾಜಿ ಪ್ರಧಾನಿ ಗೌಡರಿಗೆ ದೂರವಾಣಿ ಕರೆ ಮಾಡಿ ರಾಷ್ಟ್ರಪತಿ ಸ್ಥಾನದ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ.[ಭಾರತದ ರಾಷ್ಟ್ರಪತಿ ಅಯ್ಕೆ ಮಾಡುವ ಎಲೆಕ್ಟ್ರೋಲ್ ಕಾಲೇಜ್ ಹೇಗಿದೆ?]
ಆದರೆ, ಈ ಮನವಿಯನ್ನು ನಯವಾಗಿಯೇ ನಿರಾಕರಿಸಿದ್ದು , ನಾನು ಕರ್ನಾಟಕದಲ್ಲೇ ರಾಜಕಾರಣ ಮಾಡುತ್ತೇನೆ ಮತ್ತೆ, ರಾಷ್ಟ್ರ ರಾಜಕೀಯಕ್ಕೆ ಹಿಂತಿರುಗಲಾರೆ ಎಂದು ಸ್ಪಷ್ಟಪಡಿಸಿದ್ದಾರೆ.[ಈ 20 ಪ್ರಭಾವಿ ವ್ಯಕ್ತಿಗಳಲ್ಲಿ ರಾಷ್ಟ್ರಪತಿಯಾಗಲು ಯಾರು ಸಮರ್ಥರು?]

ನನಗೆ ರಾಷ್ಟ್ರಪತಿ ಹುದ್ದೆ ಅಲಂಕರಿಸಲು ಯಾವುದೇ ಆಸಕ್ತಿ ಇಲ್ಲ. ನಾನು ನನ್ನ ಕರ್ನಾಟಕದಲ್ಲಿ ನನ್ನ ಜನರ ಮಧ್ಯದಲ್ಲೇ ಇರಲು ಬಯಸುತ್ತೇನೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತಿದ್ದಾರೆ. ನಾನು ಕೂಡ ಅವರಿಗೆ ನೆರವಾಗುತ್ತೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಉಳಿವಿಗಾಗಿ ಶ್ರಮಿಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ಸಿನಿಂದ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರಲ್ಲದೆ, ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲ, ಮಹಾತ್ಮಾ ಗಾಂಧೀಜಿ ಅವರ ಮೊಮ್ಮಗ ಗೋಪಾಲ್ ಕೃಷ್ಣ ಗಾಂಧಿ ಅವರ ಹೆಸರನ್ನು ಕೂಡಾ ಕಾಂಗ್ರೆಸ್ ತೇಲಿ ಬಿಟ್ಟಿದೆ.












Click it and Unblock the Notifications