ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಆಸ್ಪತ್ರೆಯಿಂದಲೇ ಕಾರ್ಯನಿರ್ವಹಿಸಬೇಕಾಗಿದೆ

|
Google Oneindia Kannada News

ಬೆಂಗಳೂರು, ಆಗಸ್ಟ್‌ 07: ರಾಜ್ಯದ ಜನತೆ ಕೊರೊನಾ ವೈರಸ್ ಸಂಕಷ್ಟ ಎದುರಿಸುತ್ತಿರುವಾಗಲೇ ದುರದೃಷ್ಟವಷಾತ್ ಮಳೆ ಹಾಗೂ ಅತಿವೃಷ್ಟಿ ಸಂಭವಿಸುತ್ತಿದೆ. ಸರ್ಕಾರ ಈ ಸಂದರ್ಭದಲ್ಲಿ ಜನರ ಸಹಾಯಕ್ಕೆ ಬರಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಆಗ್ರಹಿಸಿದ್ದಾರೆ.

Recommended Video

ಗಾಣಗಪುರದ ದತ್ತನ ದರ್ಶನವೇ ಡಿಕೆ ಶಿವಕುಮಾರ್ ಗೆ ಮುಳುವಾಯ್ತಾ? | Oneindia Kannada

ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ. ಜೊತೆಗೆ ಇದೀಗ ದುರದೃಷ್ಟವಷಾತ್ ಅತಿವೃಷ್ಟಿಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್‌ಡಿಕೆಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್‌ಡಿಕೆ

ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತತ್‌ಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆಗೆ ಇದ್ದೇವೆ. ಇದೇ ಸಮಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿದೆ ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದು ಒದಗಿದೆ.

Hd Deve Gowda Demanded Government Should Help People During Monsoon Rains

ರಾಜ್ಯದ ಬಹುತೇಕ ಜಿಲ್ಲೆಗಳು ಮುಂಗಾರು ಮಳೆಯ ಅಬ್ಬರದಿಂದ ನಲುಗುತ್ತಿವೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಬಂಧಿಸಿದ ಸಚಿವರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ದೇವೇಗೌಡರು ಸಲಹೆ ಕೊಟ್ಟಿದ್ದಾರೆ.

ಕೋವಿಡ್ ಸೋಂಕು; ಬಿ. ಎಸ್. ಯಡಿಯೂರಪ್ಪ ಹೆಲ್ತ್ ಬುಲೆಟಿನ್ಕೋವಿಡ್ ಸೋಂಕು; ಬಿ. ಎಸ್. ಯಡಿಯೂರಪ್ಪ ಹೆಲ್ತ್ ಬುಲೆಟಿನ್

ಅತಿವೃಷ್ಟಿಗೆ ಸಿಲುಕಿರುವ ಜಿಲ್ಲೆಗಳಲ್ಲಿ ತಕ್ಷಣ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬಹುತೇಕ ರಾಜ್ಯದೆಲ್ಲೆಡೆ ಬೆಳೆ ಹಾನಿಯಾಗಿದೆ. ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕು.

Hd Deve Gowda Demanded Government Should Help People During Monsoon Rains

ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ವಿಶೇಷ ಅರ್ಥಿಕ ನೆರವು ನೀಡಬೇಕೆಂದು ಮಾಧ್ಯಮಗಳ ಮೂಲಕ ಆಗ್ರಹಿಸುತ್ತೇನೆ. ಈ ಸಂಬಂಧ ರಾಜ್ಯ ಸರ್ಕಾರ ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ಸರ್ಕಾರವನ್ನು ಮಾಜಿ ಪ್ರಧಾನಿ ದೇವೇಗೌಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

English summary
Unfortunately, rain and heavy rain is occurring while the people of the state are suffering from coronavirus. Former Prime Minister HD Deve Gowda demanded the government should come to the aid of the people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X