ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ

Posted By:
Subscribe to Oneindia Kannada

ನವದೆಹಲಿ, ಡಿಸೆಂಬರ್ 11 : 'ಮಹದಾಯಿ ಯೋಜನೆ ಕುರಿತ ವಿವಾದ ಮೂರು ರಾಜ್ಯಗಳಿಗೆ ಸಂಬಂಧಿಸಿದ್ದು. ಆದ್ದರಿಂದ, ಮಧ್ಯ ಪ್ರವೇಶಿಸಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿ ರಾಜ್ಯದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು' ಎಂದು ಎಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಶುಕ್ರವಾರ ಬೆಳಗ್ಗೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಮಹದಾಯಿ ಯೋಜನೆ, ರಾಜ್ಯದ ಬರಪರಿಸ್ಥಿತಿ, ರೈತರ ಆತ್ಮಹತ್ಯೆ ಮುಂತಾದ ವಿಚಾರಗಳ ಕುರಿತು ದೇವೇಗೌಡರು ಪ್ರಧಾನಿ ಜೊತೆ ಮಾತುಕತೆ ನಡೆಸಿದರು. [ಏನಿದು ಕಳಸಾ-ಬಂಡೂರಿ ಯೋಜನೆ?]

deve gowda

ಮಹದಾಯಿ ನದಿ ನೀರನ್ನು ಉಪಯೋಗಿಸಿಕೊಂಡು ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಬಗ್ಗೆ ಚರ್ಚೆ ನಡೆಸಿದ ಗೌಡರು, ಪ್ರಧಾನಿಗಳು ಮಧ್ಯ ಪ್ರವೇಶಿಸಿ ವಿವಾದ ಬಗೆಹರಿಸಬೇಕು ಎಂದು ಮನವಿ ಮಾಡಿದರು. [ಮಹದಾಯಿ ನ್ಯಾಯಾಧೀಕರಣಕ್ಕೆ ಅರ್ಜಿ ಸಲ್ಲಿಸಿದ ಕರ್ನಾಟಕ]

ರೈತ ಆತ್ಮಹತ್ಯೆ : ರಾಜ್ಯದಲ್ಲಿನ ಬರ ಪರಿಸ್ಥಿತಿ ಮತ್ತು ರೈತರ ಆತ್ಮಹತ್ಯೆ ಬಗ್ಗೆ ಚರ್ಚೆ ನಡೆಸಿದ ದೇವೇಗೌಡರು, 'ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು' ಎಂದು ಒತ್ತಾಯಿಸಿದರು. [ಕಲಬುರಗಿ : ನಂದಿವನದ ಎತ್ತುಗಳಿಗೆ ಜಿಲ್ಲಾಡಳಿತದ ನೆರವು]

Had a meeting with former PM Shri HD Deve Gowda.

Posted by Narendra Modi onThursday, December 10, 2015

ದೇವೇಗೌಡರೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರು, ದೇಶದ ಅಭಿವೃದ್ಧಿ, ಕೃಷಿ ಕ್ಷೇತ್ರದ ಬೆಳವಣಿಗೆ, ರೈತರ ಸಮಸ್ಯೆಗಳ ಕುರಿತು ಹಲವು ಸಲಹೆಗಳನ್ನು ದೇವೇಗೌಡರಿಂದ ಪಡೆದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former Prime Minister H.D.Deve Gowda met Prime Minister Narendra Modi on Friday, December 11th and discuss about Mahadayi river water dispute.
Please Wait while comments are loading...