Get Updates
Get notified of breaking news, exclusive insights, and must-see stories!

ದೇವೇಗೌಡರ ಸುಪುತ್ರ ಕುಮಾರಸ್ವಾಮಿ ಅವರೇ ಮುಂದಿನ ಮುಖ್ಯಮಂತ್ರಿ- ಭವಿಷ್ಯ ನುಡಿದ ಹರಿದ್ವಾರದ ಸಂತರು

ಬೆಂಗಳೂರು ಮಾರ್ಚ್ 10: ಹೆಚ್.ಡಿ.ಕುಮಾರಸ್ವಾಮಿ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಹಾಗೂ ಜೆಡಿಎಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಅನೇಕ ಸಮೀಕ್ಷೆಗಳು ಈಗಾಗಲೇ ಹೇಳಿವೆ. ಅದಕ್ಕೆ ಪೂರಕವಾಗಿ ಪುಣ್ಯಕ್ಷೇತ್ರ ಹರಿದ್ವಾರದಲ್ಲಿ ನೆಲೆಸಿರುವ ಸಂತರೊಬ್ಬರು ಮುಂದಿನ ಚುನಾವಣೆ ನಂತರ ಕುಮಾರಸ್ವಾಮಿ ಅವರೇ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಾರಿ ಕರ್ನಾಟಕದಲ್ಲಿ ದೇವೇಗೌಡರ ಸುಪುತ್ರ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಅವರ ಭವಿಷ್ಯದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಕೆಲ ಗುರೂಜಿಗಳು, ರಾಜಕೀಯ ವಿಶ್ಲೇಷಕರು ಹೇಳುವಂತೆ ಎಚ್. ಡಿ. ಕುಮಾರಸ್ವಾಮಿ ಅವರೇ ಮುಂದಿನ ಸಿಎಂ. ಈಗಾಗಲೇ ಕುಮಾರಸ್ವಾಮಿ ಜನರ ಮನ ಗೆದ್ದಿದ್ದಾರೆ. ಜನರ ಹೃದಯದಲ್ಲಿ ಇದ್ದಾರೆ. ಮುಂದಿನ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಸಿಎಂ ಆಗೋದು ಫಿಕ್ಸ್ ಎಂದು ಹೇಳಲಾಗುತ್ತಿದೆ.

ಸಿಎಂ ಆಗೇ ತೀರುತ್ತೇನೆಂದು ಹೆಚ್‌ಡಿಕೆ ಶಪಥ

ಸಿಎಂ ಆಗೇ ತೀರುತ್ತೇನೆಂದು ಹೆಚ್‌ಡಿಕೆ ಶಪಥ

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಈಗಾಗಲೇ ಎಲ್ಲಾ ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಜೋರಾಗಿಯೇ ನಡೀತಿದೆ. ​​ಇದರ ಜೊತೆ ಪಕ್ಷದಿಂದ ಪಕ್ಷಕ್ಕೆ ಪಲಾಯನ ಮಾಡುವವರ ಪರ್ವ ಕೂಡ ಜೊತೆ ಜೊತೆಯಾಗಿಯೇ ಸಾಗುತ್ತಿದೆ. ಈಗಾಗಲೇ ಅನೇಕರು ಸಿಎಂ ಕನಸು ಕಾಣ್ತಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪಕ್ಷವನ್ನು ಅಧಿಕಾರಕ್ಕೆ ತರಲು ನಾನಾ ಕರಸತ್ತು ಮಾಡ್ತಿದ್ದಾರೆ.

ಜೊತೆಗೆ ಅವರು ಮುಂದಿನ ಸಿಎಂ ನಾನೇ ಎಂದು ಅಚ್ಚರಿಯ ಹೇಳಿಕೆ ನೀಡಿದ್ಧಾರೆ. ಈ ಹಿಂದೆ ತುಮಕೂರಿನ ಗಾಜಿನ ಮನೆಯಲ್ಲಿ ನಡೆದ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಮಾತಾಡಿದ ಕುಮಾರಸ್ವಾಮಿ ಸ್ವಾಮೀಜಿಗಳ ಆಸೆ ಈಡೇರಿಸಿಯೇ ಈಡೇರಿಸುತ್ತೇವೆ ಎಂದು ಶಪಥ ಮಾಡಿದ್ದಾರೆ.

ಸ್ವಾಮಿಜಿಗಳ ಹಾಗೂ ಜನಗಳ ಆಶೀರ್ವಾದದಿಂದ 2023ಕ್ಕೆ ಪುನಃ ನಾನು ಯಾವ ರೀತಿ ಮುಖ್ಯಮಂತ್ರಿ ಆಗ್ತಿನೋ ಗೊತ್ತಿಲ್ಲ. ಮುಖ್ಯಮಂತ್ರಿ ಆಗುವ‌ ವಿಶ್ವಾಸ ಖಂಡಿತ ಇದೆ ಎಂದು ಭಾಷಣದುದ್ದಕ್ಕೂ ಎರಡೆರಡು ಬಾರಿ ನಾನು ಸಿಎಂ ಆಗ್ತಿನಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರೇ ಮುಂದಿನ ಸಿಎಂ- ನಿಖಿಲ್

ಕುಮಾರಸ್ವಾಮಿ ಅವರೇ ಮುಂದಿನ ಸಿಎಂ- ನಿಖಿಲ್

ಈ ಹಿಂದೆ ಜಗತ್ತಿನಲ್ಲಿ ಸೂರ್ಯಚಂದ್ರರಿರುವುದು ಎಷ್ಟುಸತ್ಯವೋ ಮುಂದಿನ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದೂ ಕೂಡ ಅಷ್ಟೇ ಸತ್ಯ. ಯಾರೂ ಏನೇ ಕುತಂತ್ರ ಮಾಡಿದರೂ ಕುಮಾರಣ್ಣ ಈ ಬಾರಿ ಇಪ್ಪತ್ತಲ್ಲ ಐವತ್ತು ಸಾವಿರ ಮತಗಳ ಲೀಡ್‌ ಪಡೆದು ಜಯಭೇರಿ ಬಾರಿಸಲಿದ್ದಾರೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

ರೈತರ ಸಾಲ ಮನ್ನಾ ಮಾಡಿ ರೈತರ ಅಭಿವೃದ್ಧಿಗಾಗಿ ಕುಮಾರಸ್ವಾಮಿಯವರ ಸರ್ಕಾರ ಈ ಹಿಂದೆ ಸಾಕಷ್ಟು ಶ್ರಮಿಸಿದೆ.

ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪ್ರಬಲ ಪಕ್ಷಗಳು ಮತಭೇಟೆಯನ್ನು ಆರಂಭಿಸಿವೆ. ಹಲವಾರು ಭರವಸೆಗಳ ಮೂಲಕ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ ಪಕ್ಷಗಳ ಪ್ರಚಾರದ ಕಾರ್ಯ ಕೂಡ ಜೋರಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಂತರ ಜೆಡಿಎಸ್‌ ಕೂಡ ರೈತರಿಗೆ ಭರವಸೆ ನೀಡಿದೆ.

ಕುಮಾರಸ್ವಾಮಿ ಮತಬೇಟೆ ಆರಂಭ

ಕುಮಾರಸ್ವಾಮಿ ಮತಬೇಟೆ ಆರಂಭ

ರೈತರ ಮಕ್ಕಳನ್ನು ಮದುವೆಯಾಗುವ ಹುಡುಗಿಗೆ ಎರಡು ಲಕ್ಷ ಕೊಡುವ ಯೋಜನೆ ಜಾರಿಗೆ ತರುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ರಾಜ್ಯ ವಿದಾನಸಭಾ ಚುನಾವಣೆ ಬೆನ್ನಲ್ಲೆ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆಯನ್ನ ತುಮಕೂರಿನ ಹಾಲ್ಕುರಿಕೆ ಗ್ರಾಮದಲ್ಲಿ ಬುಧವಾರ ನಡೆಸಲಾಯಿತು.

ತಪಟೂರು ಕ್ಷೇತ್ರದ ಹಾಲ್ಕುರಿಕೆ ಗ್ರಾಮದಲ್ಲಿ ಪಂಚರತ್ನ ರಥಯಾತ್ರೆಯ ಬೃಹತ್ ರೋಡ್ ಶೋ ಮೂಲಕ ನಡೆಯಿತು. ಈ ವೇಳೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, 'ಹಳ್ಳಿ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡಲ್ಲ. ಹಾಗಾಗಿ ಹಳ್ಳಿಯ ರೈತರ ಮಕ್ಕಳ ಜೊತೆ ಮದುವೆಯಾದರೆ ಎರಡು ಲಕ್ಷ ರೂಪಾಯಿಯನ್ನು ಕೊಡುವ ಯೋಜನೆ ಜಾರಿಗೆ ತರ್ತೀವಿ. ಅದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಾತ್ರ ಎರಡು ಲಕ್ಷ ರೂಪಾಯಿಯನ್ನು ಕೊಡುವುದಾಗಿ ಘೋಷಣೆ ಮಾಡುತ್ತೇವೆ ಎಂದು ತಿಪಟೂರಿನ ಪಂಚರತ್ನಯಾತ್ರೆಯಲ್ಲಿ ಭರವಸೆ ನೀಡಿದ್ದಾರೆ.

ಪಂಚರತ್ನ ರಥಯಾತ್ರೆ ಮೂಲಕ ಪ್ರಚಾರ

ಪಂಚರತ್ನ ರಥಯಾತ್ರೆ ಮೂಲಕ ಪ್ರಚಾರ

ಜೆಡಿಎಸ್‍ನ ಪಂಚರತ್ನ ರಥಯಾತ್ರೆ ಮತ್ತು ಜನ ಸಂಪರ್ಕ ಕಾರ್ಯಕ್ರಮ ತುಮಕೂರು ಜಿಲ್ಲೆಯ ತಿಪಟೂರಿನಿಂದ ಮಾ. 8ರಂದು ಮರು ಆರಂಭವಾಗಿದ್ದು, ಮಾ.26ರಂದು ಸಮಾರೋಪ ಸಮಾರಂಭ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಈಗಾಗಲೇ ರಾಜ್ಯ 75 ಕ್ಷೇತ್ರಗಳಲ್ಲಿ ಪೂರ್ಣಗೊಂಡಿದೆ. ಈಗ ಮತ್ತೆ 33 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. ಈ ಯಾತ್ರೆ ಮೂಲಕ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಮಹತ್ವದ ಪಂಚ ಯೋಜನೆಗಳ ಬಗ್ಗೆ ಆಯಾ ಕ್ಷೇತ್ರದ ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ.

123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿಯೊಂದಿಗೆ ಈ ಚುನಾವಣಾ ಪ್ರಚಾರ ಆರಂಭಿಸಲಾಗಿದೆ. ಈಗಾಗಲೇ ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಎರಡನೇ ಹಂತದಲ್ಲಿ ಸುಮಾರು 60 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ. ಇನ್ನೊಂದು ವಾರದಲ್ಲಿ ಎರಡನೇ ಪಟ್ಟಿಯೂ ಬಿಡುಗಡೆ ಮಾಡುಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+