ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್. ಡಿ. ದೇವೇಗೌಡರಿಂದ ಇಂದು ಮಹತ್ವದ ತೀರ್ಮಾನ ಪ್ರಕಟ!

|
Google Oneindia Kannada News

ಬೆಂಗಳೂರು, ಜೂನ್ 05 : ಕರ್ನಾಟಕದ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿ ಆಯ್ಕೆ, ಮೈತ್ರಿ ಬಗ್ಗೆ ಮಾತುಕತೆಗಳು ಶುರುವಾಗಿವೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಇಂದು ಮಹತ್ವದ ತೀರ್ಮಾನ ಪ್ರಕಟಿಸಲಿದ್ದಾರೆ.

ಶುಕ್ರವಾರ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡರು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

Oneindia explainer; ರಾಜ್ಯಸಭೆ ಚುನಾವಣೆ ಹೇಗೆ ನಡೆಯುತ್ತದೆ? Oneindia explainer; ರಾಜ್ಯಸಭೆ ಚುನಾವಣೆ ಹೇಗೆ ನಡೆಯುತ್ತದೆ?

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್‌ನ ಬಿ. ಕೆ. ಹರಿಪ್ರಸಾದ್, ರಾಜೀವ್ ಗೌಡ, ಬಿಜೆಪಿಯ ಪ್ರಭಾಕರ ಕೋರೆ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಅವರಿಂದ ತೆರವಾಗುವ ಸ್ಥಾನಕ್ಕೆ ಜೂನ್ 19ರಂದು ಚುನಾವಣೆ ನಡೆಯಲಿದೆ.

ಕಾಂಗ್ರೆಸ್ ಶಾಸಕರ ರಾಜೀನಾಮೆ; ರಾಜ್ಯಸಭೆ ಚುನಾವಣೆ ಲೆಕ್ಕಾಚಾರ ಉಲ್ಟಾ ಕಾಂಗ್ರೆಸ್ ಶಾಸಕರ ರಾಜೀನಾಮೆ; ರಾಜ್ಯಸಭೆ ಚುನಾವಣೆ ಲೆಕ್ಕಾಚಾರ ಉಲ್ಟಾ

ಕುಪೇಂದ್ರ ರೆಡ್ಡಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದು ಈಗ ನಡೆಯುವ ಚುನಾವಣೆಯಲ್ಲಿ ಪಕ್ಷದಿಂದ ಯಾರು ಅಭ್ಯರ್ಥಿ? ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಎಚ್. ಡಿ. ದೇವೇಗೌಡರು ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯಸಭೆ ಚುನಾವಣೆ; ಮೌನ ಮುರಿದ ಮುದ್ದಹನುಮೇಗೌಡರು! ರಾಜ್ಯಸಭೆ ಚುನಾವಣೆ; ಮೌನ ಮುರಿದ ಮುದ್ದಹನುಮೇಗೌಡರು!

ದೇವೇಗೌಡರ ಸ್ಪರ್ಧೆ

ದೇವೇಗೌಡರ ಸ್ಪರ್ಧೆ

ರಾಜ್ಯಸಭೆ ಚುನಾವಣಾ ಕಣಕ್ಕೆ ಎಚ್. ಡಿ. ದೇವೇಗೌಡರು ಇಳಿಯುವ ಬಗ್ಗೆ ಇಂದು ಅಂತಿಮ ತೀರ್ಮಾನವಾಗಲಿದೆ. ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ವರ್ಗಾಯಿಸುವ ಮೂಲಕ ಸಹಕಾರ ನೀಡಿದರೆ ಮಾತ್ರ ದೇವೇಗೌಡರು ಕಣಕ್ಕಿಳಿಯಲಿದ್ದಾರೆ.

ಸಿದ್ದರಾಮಯ್ಯ ಹೇಳುವುದೇನು?

ಸಿದ್ದರಾಮಯ್ಯ ಹೇಳುವುದೇನು?

"ಒಂದು ವೇಳೆ ರಾಜ್ಯಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಪ್ರಸ್ತಾಪವನ್ನು ದೇವೇಗೌಡರು ಮುಂದಿಟ್ಟರೆ ಅಡ್ಡಗಾಲು ಹಾಕುವುದಿಲ್ಲ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಕೆಲವು ಕಾಂಗ್ರೆಸ್ ನಾಯಕರಲ್ಲಿ ಜೆಡಿಎಸ್‌ಗೆ ಬೆಂಬಲ ಕೊಡುವ ವಿಚಾರದಲ್ಲಿ ಒಮ್ಮತವಿಲ್ಲ.

ಬೆಂಬಲ ಅನಿವಾರ್ಯವಾಗಿದೆ

ಬೆಂಬಲ ಅನಿವಾರ್ಯವಾಗಿದೆ

ವಿಧಾನಸಭೆ ಬಲಾಬಲದ ಆಧಾರದ ಮೇಲೆ ಬಿಜೆಪಿ 2 ರಾಜ್ಯಸಭಾ ಸ್ಥಾನದಲ್ಲಿ ಗೆಲ್ಲಲಿದೆ. ಕಾಂಗ್ರೆಸ್‌ನಲ್ಲಿ 68 ಶಾಸಕರಿದ್ದು, ಒಬ್ಬ ಅಭ್ಯರ್ಥಿ ಗೆದ್ದು ಹೆಚ್ಚುವರಿ ಮತ ಉಳಿಯಲಿದೆ. ಜೆಡಿಎಸ್‌ನಲ್ಲಿ 34 ಶಾಸಕರಿದ್ದು ಕಾಂಗ್ರೆಸ್ ಬೆಂಬಲ ಇಲ್ಲದೇ ಒಂದು ಸ್ಥಾನ ಗೆಲ್ಲುವುದೂ ಸಾಧ್ಯವಿಲ್ಲ. ಕಾಂಗ್ರೆಸ್ ಬೆಂಬಲ ನೀಡುವ ವಿಚಾರದಲ್ಲಿ ಇನ್ನೂ ತೀರ್ಮಾನ ಪ್ರಕಟಿಸಿಲ್ಲ.

ಶನಿವಾರ ಬಿಜೆಪಿ ಸಭೆ

ಶನಿವಾರ ಬಿಜೆಪಿ ಸಭೆ

ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್ ಪಡೆಯಲು ಭಾರಿ ಪೈಪೋಟಿ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀನ್ ನೇತೃತ್ವದಲ್ಲಿ ಶನಿವಾರ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
Former PM and JD(S) supremo H. D. Deve Gowda to announce important decision on Rajya Sabha election on June 5. Election will be held on June 19, 2020 to elect 4 Rajya Sabha members from Karnataka assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X