ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ರಾಜ್ಯಾಧ್ಯಕ್ಷರ ಜೊತೆ 4 ಕಾರ್ಯಾಧ್ಯಕ್ಷರ ನೇಮಕ

|
Google Oneindia Kannada News

ಬೆಂಗಳೂರು, ಜುಲೈ 01 : ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಿರುವ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ರಾಜ್ಯಾಧ್ಯಕ್ಷರ ಜೊತೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಚಿಂತನೆ ನಡೆಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕದಿಂದ ಬಂದ ಬಳಿಕ ರಾಜ್ಯಾಧ್ಯಕ್ಷರ ನೇಮಕ ನಡೆಯಲಿದೆ.

ಪಕ್ಷ ಸಂಘಟನೆಗಾಗಿ ವಿಚಾರ, ವಿಕಾಸ ಮತ್ತು ವಿಶ್ವಾಸ ಧ್ಯೇಯ ವಾಕ್ಯದೊಂದಿಗೆ ಜೆಡಿಎಸ್ ರಾಜ್ಯಾದ್ಯಂತ ಪಾದಯಾತ್ರೆ ಮಾಡಲಿದೆ. ಆಗಸ್ಟ್ 20ರಂದು ನಂಜನಗೂಡಿನಿಂದ ಆರಂಭವಾಗಲಿರುವ ಪಾದಯಾತ್ರೆ ರಾಜ್ಯಾದ್ಯಂತ ಸಂಚಾರ ನಡೆಸಲಿದೆ.

ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಎಚ್.ಡಿ.ದೇವೇಗೌಡಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಎಚ್.ಡಿ.ದೇವೇಗೌಡ

ಪಾದಯಾತ್ರೆ ಆರಂಭಿಸುವುದಕ್ಕೂ ಮೊದಲು ರಾಜ್ಯಾಧ್ಯಕ್ಷರ ನೇಮಕವಾಗಲಿದೆ. ಎಚ್.ವಿಶ್ವನಾಥ್ ಅವರು ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ರಾಜ್ಯಾಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

ಬಿಜೆಪಿ ನಾಯಕರನ್ನು ಕೇಳಿ ಅಮೆರಿಕಕ್ಕೆ ಹೋಗಬೇಕಾ : ದೇವೇಗೌಡಬಿಜೆಪಿ ನಾಯಕರನ್ನು ಕೇಳಿ ಅಮೆರಿಕಕ್ಕೆ ಹೋಗಬೇಕಾ : ದೇವೇಗೌಡ

'ನಾನು ಈ ಬಾರಿಯ ಚುನಾವಣೆಗೆ ನಿಂತಿದ್ದು ಆಕಸ್ಮಿಕ. ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ. ಪಕ್ಷ ಸಂಘಟನೆಗೆ ಸಾಕಷ್ಟು ದುಡಿದಿದ್ದೇನೆ. ಇನ್ನು ಮುಂದೆಯೂ ಪಕ್ಷ ಸಂಘಟನೆ ಮಾಡುತ್ತೇನೆ' ಎಂದು ಎಚ್.ಡಿ.ದೇವೇಗೌಡರು ಹೇಳಿದ್ದಾರೆ....

ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟಕ್ಕೆ ಕೇಳಿಬಂತು ಹೊಸ ಹೆಸರು!ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟಕ್ಕೆ ಕೇಳಿಬಂತು ಹೊಸ ಹೆಸರು!

ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಜುಲೈ 11 ಅಥವ 12ರಂದು ಬೆಂಗಳೂರಿನಲ್ಲಿ ಪರಿಶಿಷ್ಟ ಸಮುದಾಯದ ಬೃಹತ್ ಸಮಾವೇಶವನ್ನು ನಡೆಸಿ ಎಚ್.ಕೆ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತದೆ. ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕದಿಂದ ಬಂದ ಬಳಿಕ ಸಮಾವೇಶದ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ.

4 ಕಾರ್ಯಾಧ್ಯಕ್ಷರ ನೇಮಕ

4 ಕಾರ್ಯಾಧ್ಯಕ್ಷರ ನೇಮಕ

ಜೆಡಿಎಸ್ ರಾಜ್ಯಾಧ್ಯಕ್ಷರ ಜೊತೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ಎಚ್.ಡಿ.ದೇವೇಗೌಡ ತೀರ್ಮಾನಿಸಿದ್ದಾರೆ. ಪ್ರದೇಶವಾರು ಹಿರಿಯ ಕಾರ್ಯಕರ್ತರನ್ನು ಗುರುತಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗುತ್ತದೆ.

ಪಾದಯಾತ್ರೆ ನೀಲನಕ್ಷೆ ಸಿದ್ಧ

ಪಾದಯಾತ್ರೆ ನೀಲನಕ್ಷೆ ಸಿದ್ಧ

ಪಕ್ಷ ಸಂಘಟನೆಗಾಗಿ ವಿಚಾರ, ವಿಕಾಸ ಮತ್ತು ವಿಶ್ವಾಸ ಧ್ಯೇಯ ವಾಕ್ಯದೊಂದಿಗೆ ಜೆಡಿಎಸ್ ರಾಜ್ಯಾದ್ಯಂತ ಪಾದಯಾತ್ರೆ ಮಾಡಲಿದೆ. ಪಾದಯಾತ್ರೆಯ ನೀಲನಕ್ಷೆಯನ್ನು ಪಕ್ಷ ಅಂತಿಮಗೊಳಿಸಿದೆ. ಮೊದಲ ಹಂತದಲ್ಲಿ ನಂಜನಗೂಡಿನಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು, ಕಾವೇರಿಯಿಂದ ತುಂಗಭದ್ರೆ ತನಕ 1475 ಕಿ.ಮೀ. ಹಾಗೂ ಎರಡನೇ ಹಂತದಲ್ಲಿ ತುಂಗಭದ್ರೆಯಿಂದ ಮಲಪ್ರಭೆ ತನಕ ಪಾದಯಾತ್ರೆ ನಡೆಯಲಿದೆ.

ಮೊದಲ ಹಂತದ ಪಾದಯಾತ್ರೆ ಮಾರ್ಗ

ಮೊದಲ ಹಂತದ ಪಾದಯಾತ್ರೆ ಮಾರ್ಗ

ಮೊದಲ ಹಂತದ ಪಾದಯಾತ್ರೆ ಆಗಸ್ಟ್ 20 ರಿಂದ ಆರಂಭವಾಗಲಿದೆ. ನಂಜನಗೂಡು, ತಿ.ನರಸೀಪುರ, ಕೊಳ್ಳೇಗಾಲ, ಮಳವಳ್ಳಿ, ಕನಕಪುರ, ಬೆಂಗಳೂರು, ಹೊಸಕೋಟೆ, ಕೋಲಾರ, ಶ್ರೀನಿವಾಸಪುರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದಾಬಸ್‌ಪೇಟೆ, ಕುಣಿಗಲ್, ನಾಗಮಂಗಲ, ಪಾಂಡವಪುರ, ಮೇಲುಕೋಟೆ, ಮೈಸೂರು, ಹುಣಸೂರು, ಪುತ್ತೂರು, ಬಂಟ್ವಾಳ, ಕಡೂರು, ಚಿಕ್ಕಮಗಳೂರು, ಭದ್ರಾವತಿ, ಹೊಳೆಹೊನ್ನೂರು, ಚಿತ್ರದುರ್ಗ, ಚಳ್ಳಕೆರೆ, ದಾವಣಗೆರೆ, ಹರಿಹರ ಮಾರ್ಗದಲ್ಲಿ ಪಾದಯಾತ್ರೆ ನಡೆಯಲಿದೆ.

English summary
JD(S) supremo H.D.Deve Gowda will appoint 4 working presidents for the party. H.K.Kumaraswamy may appoint as party president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X