ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಬಂಧಿಸಿ: ದೇವೇಗೌಡ

Posted By:
Subscribe to Oneindia Kannada

ವಿಜಯಪುರ, ಆಗಸ್ಟ್ 20: ಆರ್ ಎಸ್ಎಸ್ ಮುಖಂಡ ಕಲ್ಲಡ್ಕದ ಪ್ರಭಾಕರ ಭಟ್ ಅವರನ್ನು ಕೂಡಲೇ ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆಮಾಜಿ ಪ್ರಧಾನಿ ಮತ್ತು ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಆಗ್ರಹಿಸಿದ್ದಾರೆ.

'ಕರ್ನಾಟಕದಲ್ಲಿರುವುದು ಸಿದ್ದರಾಮಯ್ಯ ಕಾಂಗ್ರೆಸ್'

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಲ್ಲಡ್ಕ ಶ್ರೀರಾಮ ಶಿಕ್ಷಣ ಕೇಂದ್ರಕ್ಕೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಅನುದಾನ ಕಡಿತ ಮಾಡಿದ ರಾಜ್ಯ ಸರಕಾರದ ಕ್ರಮವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಮರ್ಥಿಸಿಕೊಂಡರು.

HD Deve Gowda urges Govt to arrest Kalladka Prabhakar Bhat

ಡಾ.ಕಲ್ಲಡ್ಕ ಪ್ರಭಾಕರ ಭಟ್ ಕೆಲವು ತಪ್ಪುಗಳನ್ನು ಮಾಡಿದ್ದಾರೆ ಅವರನ್ನು ಬಂಧಿಸಿ ಅವರ ವಿರುದ್ಧ ಸರಕಾರ ಕ್ರಮ ಕೈಗೊಂಡರೆ ಆ ಭಾಗದಲ್ಲಿ ಶಾಂತಿ ನೆಲೆಸಲಿದೆ ಎಂದರು.

ಇಂದಿನಿಂದ 5ದಿನ ದೇವೇಗೌಡರಿಂದ ಉತ್ತರ ಕರ್ನಾಟಕ ಪ್ರವಾಸ

ಇದೇ ವೇಳೆ ಚುನಾವಣೆ ಬಗ್ಗೆ ಮಾತನಾಡಿದ ದೇವೇಗೌಡರು, ಅಲ್ಪಸಂಖ್ಯಾತರಿಗೆ ಅನುಕೂಲವಾಗಲೆಂದು ಜೆಡಿಎಸ್ ಪಕ್ಷ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಬೇಕಾಯಿತು ಎಂದರು. ಸ್ವಂತ ಬಲದಿಂದ ವಿಧಾನಸಭಾ ಕ್ಷೇತ್ರಗಳಲ್ಲಿ ಜೆ ಡಿಎಸ್ ಸ್ಪರ್ಧಿಸಲಿದೆ. ರಾಷ್ಟ್ರೀಯ ಪಕ್ಷಗಳಿಂದ ನಾಡಿನ ಜಲ, ನೆಲ, ಭಾಷೆಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಜೆಡಿಎಸ್ ಎರಡು ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಒಂದು ವೇಳೆ ಸ್ಪರ್ಧಿಸಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗುತ್ತಿತ್ತು. ಬಿಜೆಪಿಗೆ ಅನುಕೂಲವಾಗುತ್ತಿತ್ತು. ಎಂದು ಹೇಳಿದರು.

ಅಲ್ಪಸಂಖ್ಯಾತರಿಗೆ ಅನುಕೂಲವಾಗಲೆಂದು ಜೆಡಿಎಸ್ ಪಕ್ಷ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದೆ ಎಂದು ಅಭಿಪ್ರಾಯಪಟ್ಟರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
JDS supremo, former PM HD Deve Gowda urges Siddaramaiah government to arrest Kalladka Prabhakar Bhat

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ