ತಾಯಿ, ಧರ್ಮಪತ್ನಿ ನೆನೆದು ಕಣ್ಣೀರಿಟ್ಟ ಹೆಚ್.ಡಿ. ದೇವೇಗೌಡ
ಬೆಂಗಳೂರು, ಜೂನ್ 23: ನಾಡಿನ ಸಂತಶ್ರೇಷ್ಟರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರಿಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ದೇವೇಗೌಡರು, ತಮಗೆ ನೀಡಲಾದ ಈ ಪ್ರಶಸ್ತಿಗೆ ಸಮಸ್ತ ಕನ್ನಡಿಗರ ಪ್ರೀತಿ, ವಿಶ್ವಾಸ ಕಾರಣ ಹಾಗೂ ನನ್ನ ಬದುಕಿನುದ್ದಕ್ಕೂ ನನ್ನ ಪಾಲಿನ ಶಕ್ತಿಯಾಗಿ ಉಳಿದಿರುವ ನನ್ನ ಶ್ರೀಮತಿ ಚನ್ನಮ್ಮ ಅವರಿಗೆ ಹಾಗೂ ನನ್ನ ತಂದೆ ತಾಯಿಗೆ ನನ್ನ ಯಶಸ್ಸಿನ ಶ್ರೇಯಸ್ಸು ಸಲ್ಲಬೇಕು ಎಂದು ಹೇಳಿದರು.
ಶ್ರೀಮತಿ ಚನ್ನಮ್ಮ ಅವರು ಎಲ್ಲಾ ಹಂತದಲ್ಲಿ ನನ್ನ ಜೊತೆ ನಿಂತಿದ್ದಾರೆ. ಅನೇಕ ಕಷ್ಟಗಳ ಜೊತೆಗೆ ನನ್ನ ಗೌರವ ಉಳಿಸಿದ್ದಾರೆ. ಅವರ ಕೊಡುಗೆ ನೆನೆಸಿಕೊಳ್ಳುತ್ತೇನೆ ಎಂದು ಪತ್ನಿಯನ್ನು ನೆನೆದು ಕಣ್ಣೀರು ಹಾಕಿದ ದೇವೇಗೌಡರು, ಎಲ್ಲ ಮುಂದೆ ನಮ್ಮನ್ನು ನಿಲ್ಲುವಂತೆ ಶಕ್ತಿ ತಂದುಕೊಟ್ಟವರು ಶ್ರೀ ಬಾಲಗಂಗಾಧರ ಸ್ವಾಮೀಜಿ ಅವರು ಎಂದು ಗದ್ಗದಿತರಾದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ಎಲ್ಲಾ ಕನ್ನಡಿಗರು ಸೇರಿ ಹದಿನಾರು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಿದ್ದರು. ಅದರ ಪರಿಣಾಮವಾಗಿ ನಾನು ಪ್ರಧಾನಿಯಾಗಲು ಸಾಧ್ಯವಾಯಿತು ಎಂದ ದೇವೇಗೌಡರು, ಇದು ನನ್ನ ಜೀವನದ ಸಂದ್ಯಾಕಾಲ. ನಾನು ಇನ್ನೇನು ಮಾಡಲು ಸಾಧ್ಯ. ಆದರೂ ರಾಷ್ಟ್ರದ, ನಾಡಿನ ಜನರಿಗೆ ಏನಾದರೂ ಕಿಂಚಿತ್ತಾದರೂ ಅಳಿಲು ಸೇವೆ ಮಾಡಬೇಕು ಎನ್ನುವುದು ನನ್ನ ಮಹದಾಸೆ. ಅದಕ್ಕಾಗಿ ಗೋದಾವರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯ ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಹಾಗೂ ಮಾವಿಗೆ ಬೆಂಬಲ ಬೆಲೆ ಕೊಡಬೇಕು ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೆಚ್ ಡಿ ದೇವೇಗೌಡರು ಹೇಳಿದರು.
ನನಗೆ 93ನೇ ವಯಸ್ಸಿನಲ್ಲಿ, ಜೀವನದ ಕೊನೆ ದಿನಗಳಲ್ಲಿ ಈ ಹಂತದಲ್ಲಿ ನಿಮ್ಮ ಆಶೀರ್ವಾದ ನನಗೆ ಬಹಳ ಸಮಾಧಾನ ತಂದಿದೆ. 65 ವರ್ಷಗಳ ರಾಜಕಾರಣದಲ್ಲಿ ನನ್ನನ್ನು ಎಲ್ಲಾ ಸಮಾಜದವರು ಬೆಳೆಸಿದ್ದಾರೆ. ಯಾವುದೇ ಒಂದು ಸಮಾಜ ಅಲ್ಲ, ಎಲ್ಲರೂ ನನ್ನನ್ನು ಎತ್ತಿ ಆಡಿಸಿಕೊಂಡಿ ಬಂದಿದ್ದಾರೆ. ಪ್ರಧಾನಿಯಾಗಿ ರೈತನ ಮಗ ಕೆಲಸ ಮಾಡಿದ್ದಾನೆ. ನಾಲ್ಕು ಎಕರೆ ಜಮೀನು ಇಟ್ಟುಕೊಂಡಿದ್ದ ರೈತನ ಮಗ ಆ ಸ್ಥಾನಕ್ಕೆ ಹೋಗಬೇಕಾದರೆ ಈ ರಾಜ್ಯದ ಎಲ್ಲ ಸಮಾಜಗಳು ಸಹಾಯ ಮಾಡಿದ್ದಾರೆ. ಇದನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭಾವುಕರಾಗಿ ಹೇಳಿದರು.
ರಾಮಕೃಷ್ಣ ಹೆಗಡೆ ಅವರಿಗೆ ಒಮ್ಮೆ ಕಾಲಿಗೆ ನಮಸ್ಕಾರ ಮಾಡಿ, ಪಕ್ಷ ಉಳಿಸೋಣ. ನಡೆಯಿರಿ ಎಂದು ಹೇಳಿದ್ದೆ. ಆದರೆ ಅವರು, "ನೀನು ಶತ್ರುಗಳನ್ನು ಸೃಷ್ಟಿ ಮಾಡಿಕೊಳ್ತೀಯಾ ಎಂದರು. ನೀನು ಸತ್ಯ ಹೇಳ್ತೀಯಾ, ಅದರ ಜೊತೆಗ ನಗ್ನಸತ್ಯಗಳನ್ನ ಹೇಳ್ತೀಯಾ. ಅದಕ್ಕೆ ನಿನಗೆ ಹೆಚ್ಚು ಶತ್ರುಗಳು ಹುಟ್ಟಿಕೊಳ್ಳತ್ತಾರೆ" ಎಂದು ಹೇಳಿದ್ದರು. ಅವರ ಮಾತು ನನಗೆ ಚೆನ್ನಾಗಿ ನೆನಪಿದೆ. ಆದರೆ ಸತ್ಯಕ್ಕೆ ನಾನು ಯಾವತ್ತೂ ಬೆನ್ನು ತೋರಿಸಿದವನಲ್ಲ ಎಂದು ದೇವೇಗೌಡರು ಹಳೆಯ ರಾಜಕಾರಣವನ್ನು ನೆನಪು ಮಾಡಿಕೊಂಡರು.
ಇನ್ನೂ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿ ಅವರುಗಳೆಲ್ಲರೂ ದೇವೇಗೌಡರಿಗೆ ಗಂಗ ಸಾಮ್ರಾಟ ಶ್ರಿಪುರುಷ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು, ದೇವೆಗೌಡರ ಕುಟುಂಬ ಸದಸ್ಯರು, ಸಾರ್ವಜನಿಕರು ಈ ಅರ್ಥಪೂರ್ಣ ಸಮಾರಂಭಕ್ಕೆ ಸಾಕ್ಷಿಯಾದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications