ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪರ್ಧಿಸುವ ಕ್ಷೇತ್ರ ಅಂತಿಮ
Recommended Video

ಬೆಂಗಳೂರು, ಮಾರ್ಚ್ 11 : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪರ್ಧಿಸುವ ಕ್ಷೇತ್ರ ಯಾವುದು?. ಹಾಸನ ಕ್ಷೇತ್ರದ ಹಾಲಿ ಸಂಸದ ಎಚ್.ಡಿ.ದೇವೇಗೌಡ ಅವರು ಬೆಂಗಳೂರು ನಗರದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ನೇತೃತ್ವದಲ್ಲಿ ಸೋಮವಾರ ಜೆಡಿಎಸ್ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಎಚ್.ಡಿ.ದೇವೇಗೌಡರು ಯಾವ ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಎಚ್.ಡಿ.ದೇವೇಗೌಡರು ಸಹ ಪಾಲ್ಗೊಂಡಿದ್ದರು. ಬೆಂಗಳೂರು ಉತ್ತರ, ತುಮಕೂರು, ಮೈಸೂರು-ಕೊಡಗು ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ಮೈಸೂರಿನಿಂದ ಕಣಕ್ಕಿಳಿಯುವಂತೆ ಒತ್ತಡ ಹಾಕಲಾಯಿತು.
ಹಾಸನ ಕ್ಷೇತ್ರದ ಹಾಲಿ ಸಂಸದ ಎಚ್.ಡಿ.ದೇವೇಗೌಡ ಅವರು ಸಚಿವ ಎಚ್.ಡಿ.ರೇವಣ್ಣ ಪುತ್ರ ಮತ್ತು ಮೊಮ್ಮನ ಪ್ರಜ್ವಲ್ ರೇವಣ್ಣ ಅವರಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಆದ್ದರಿಂದ, ಈ ಬಾರಿಯ ಚುನಾವಣೆಯಲ್ಲಿ ಅವರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು....
ಲೋಕಸಭಾ ಚುನಾವಣೆ : ಮೊದಲ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್

ಬೆಂಗಳೂರು ಉತ್ತರ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ. ಇಂದು ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಒಕ್ಕಲಿಗರ ಪ್ರಾಬಲ್ಯದ ಕ್ಷೇತ್ರ
ಬೆಂಗಳೂರು ಉತ್ತರ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ. ಆದ್ದರಿಂದ, ಎಚ್.ಡಿ.ದೇವೇಗೌಡರು ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದಾರೆ. ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟುಕೊಟ್ಟ ದೇವೇಗೌಡರು ಬೆಂಗಳೂರು ನಗರಕ್ಕೆ ವಲಸೆ ಬಂದಿದ್ದಾರೆ.

ಜೆಡಿಎಸ್, ಕಾಂಗ್ರೆಸ್ ಪ್ರಾಬಲ್ಯದ ಕ್ಷೇತ್ರ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಇವುಗಳಲ್ಲಿ 7 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿಲ್ಲ. 5 ಕ್ಷೇತ್ರದಲ್ಲಿ ಕಾಂಗ್ರೆಸ್, 2 ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಬೆಂಗಳೂರು ನಗರದಲ್ಲಿ ಜೆಡಿಎಸ್ ಗೆದ್ದಿರುವುದು 2 ಕ್ಷೇತ್ರಗಳಲ್ಲಿ. ಆ ಎರಡೂ ಕ್ಷೇತ್ರಗಳು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಆದ್ದರಿಂದ, ದೇವೇಗೌಡರು ಉತ್ತರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಬಿಜೆಪಿ ವಶದಲ್ಲಿರುವ ಕ್ಷೇತ್ರ
ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದರು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ. ಎಚ್.ಡಿ.ದೇವೇಗೌಡರು ಕಣಕ್ಕಿಳಿದರೆ ಇಬ್ಬರು ಒಕ್ಕಲಿಗ ನಾಯಕರ ನಡುವಿನ ಹೋರಾಟಕ್ಕೆ ಕ್ಷೇತ್ರ ಸಾಕ್ಷಿಯಾಗಲಿದೆ. ಏಪ್ರಿಲ್ 18ರಂದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಒಕ್ಕಲಿಗರು ನಿರ್ಣಾಯಕ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ. ಬ್ಯಾಟರಾಯನಪುರ, ದಾಸರಹಳ್ಳಿ, ಹೆಬ್ಬಾಳ, ಪುಲಿಕೇಶಿ ನಗರ, ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಶವಂತಪುರ ಹಾಗೂ ಕೆ.ಆರ್.ಪುರ ಕ್ಷೇತ್ರಗಳು ಉತ್ತರದ ವ್ಯಾಪ್ತಿಗೆ ಒಳಪಡಲಿದ್ದು, ಒಕ್ಕಲಿಗರೇ ಹೆಚ್ಚಾಗಿದ್ದಾರೆ.












Click it and Unblock the Notifications