ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ-ದೇವೇಗೌಡ ಭೇಟಿಯ ಸ್ಪೋಟಕ ಮಾಹಿತಿ ಹಂಚಿಕೊಂಡ ಬೊಮ್ಮಾಯಿ!

|
Google Oneindia Kannada News

ಹುಬ್ಬಳ್ಳಿ, ಡಿ. 01: ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಸುಮಾರು 2500 ಅಂತರರಾಷ್ಟ್ರೀಯ ಪ್ರಯಾಣಿಕರು ಬರುತ್ತಾರೆ. ಜೊತೆಗೆ ಕೆಲವರು ಮಂಗಳೂರು ವಿಮಾನ ನಿಲ್ದಾಣಕ್ಕೂ ಬಂದಿಳಿಯುತ್ತಾರೆ. ಕೊರೊನಾ ವೈರಸ್ ಕಳೆದ ಬಾರಿ ಸೃಷ್ಟಿಸಿದ್ದ ಸಂಕಷ್ಟದ ಅನುಭವದ ಮೇರೆಗೆ ಈಗಿನಿಂದಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದರು.

ಕೊರೊನಾ ವೈರಸ್ ಕುರಿತು ಜನರಿಗೆ ಅನಗತ್ಯ ಆತಂಕ ಬೇಡ, ಜೊತೆಗೆ ಕೋವಿಡ್ ಹೊಸ ತಳಿಯ ಕುರಿತು ಜನತೆ ಅನಗತ್ಯ ಆತಂಕಕ್ಕೆ ಒಳಗಾಗಬಾರದು. ಜನರು ಈಗ ತಾನೇ ಆರ್ಥಿಕವಾಗಿ, ಸಾಮಾಜಿಕ ವಾಗಿ ಸುಧಾರಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಇದೇ ವೇಳೆ ಮತ್ತೊಮ್ಮೆ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಫೋಟಕ ಮಾಹಿತಿ ಹಂಚಿಕೊಂಡಿದ್ದಾರೆ.

ಗುರುವಾರ ದೆಹಲಿಗೆ ಹೋಗುತ್ತೇನೆ!

ಗುರುವಾರ ದೆಹಲಿಗೆ ಹೋಗುತ್ತೇನೆ!

ನಾಳೆ ಡಿಸೆಂಬರ್ 2 ರಂದು ದೆಹಲಿಗೆ ತೆರಳುವುದಾಗಿ ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. "ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಬೂಸ್ಟರ್ ಡೋಸ್ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿಯಲ್ಲಿರುವ ಕೋವಿಡ್ ಕಾರ್ಯಕರ್ತರು ಲಸಿಕೆ ಪಡೆದು 6 ತಿಂಗಳಾಗಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕವಾಗಿ ಆಗಿರುವ ಪ್ರಗತಿ ಹಾಗೂ ಕೇಂದ್ರ ಸರ್ಕಾರದ ಶಿಫಾರಸುಗಳ ಬಗ್ಗೆ ಚರ್ಚಿಸುತ್ತೇನೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ಮೋದಿ ಭೇಟಿ ಮಾಡಿರುವ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, "ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪ್ರಧಾನಿ ಮೋದಿ ಅವರು ಹಲವಾರು ವಿಷಯಗಳ ಕುರಿತು ಚರ್ಚಿಸಿದ್ದಾರೆ. ಅದರಲ್ಲಿ ಸ್ಥಳೀಯವಾಗಿ ಮೈತ್ರಿ ಮಾಡಿಕೊಳ್ಳುವುದೂ ಸೇರಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಆದರೆ ಈ ಮೈತ್ರಿ ವಿಧಾನ ಪರಿಷತ್ ಚುನಾವಣೆಗೆ ಮಾತ್ರ ಎಂಬ ಮಾಹಿತಿ 'ಒನ್‌ಇಂಡಿಯಾ ಕನ್ನಡ'ಕ್ಕೆ ಲಭ್ಯವಾಗಿದೆ. ಇದೇ ವೇಳೆ ಕೊರೊನಾ ವೈರಸ್ ತಡೆಯ ಬಗ್ಗೆಯೂ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಯಾರಿಗೆ ಕೊರೊನಾ ಬೂಸ್ಟರ್ ಡೋಸ್?

ಯಾರಿಗೆ ಕೊರೊನಾ ಬೂಸ್ಟರ್ ಡೋಸ್?

ಯಾರಿಗೆ ಕೊರೊನಾ ಬೂಸ್ಟರ್ ಡೋಸ್ ಲಸಿಕೆಯನ್ನು ಯಾರಿಗೆ ಕೊಡಲಾಗುತ್ತದೆ ಎಂಬುದರ ಬಗ್ಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. "ಫ್ರಂಟ್‌ಲೈನ್ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದು ಸೂಕ್ತ ಎನ್ನುವುದು ತಜ್ಞರ ಅನಿಸಿಕೆ ಕೂಡ ಆಗಿದೆ" ಎಂದು ಅವರು ತಿಳಿಸಿದ್ದಾರೆ.

ಇನ್ನು ಕೊರೊನಾ ರೂಪಾಂತರ ತಳಿ ವೈರಸ್ ಬಗ್ಗೆ ಮಾತನಾಡಿರುವ ಬೊಮ್ಮಾಯಿ, "ಈಗಾಗಲೇ ಒಂದು ಮಾದರಿಯನ್ನು ಕೇಂದ್ರದ ಎನ್.ಸಿ.ಬಿ.ಎಸ್‌ಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವರದಿ ಬಂದ ತಕ್ಷಣ ಕ್ರಮ ಜರುಗಿಸಲಾಗುವುದು. ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಹಾಗೂ ಲಸಿಕೆ ಹಾಕುವುದನ್ನು ತೀವ್ರಗೊಳಿಸಲಾಗಿದೆ" ಎಂದು ಹೇಳಿದ್ದಾರೆ.

ವಿದೇಶಿ ಪ್ರಯಾಣಿಕರ ಮೇಲೆ ನಿಗಾ!

ವಿದೇಶಿ ಪ್ರಯಾಣಿಕರ ಮೇಲೆ ನಿಗಾ!

ವಿದೇಶಿ ಪ್ರಯಾಣಿಕರು ಹಾಗೂ ಕೇರಳ ಜಿಲ್ಲೆಯ ವಿದ್ಯಾರ್ಥಿಗಳ ಪರೀಕ್ಷೆಗೆ ಮುಖ್ಯವಾಗಿ ನಿಗಾ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಕೇರಳದ ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ಅವರೆಲ್ಲರ ಮೇಲೆ ನಿಗಾ ಇಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಧಾರವಾಡದ ಜಿಲ್ಲೆಯಲ್ಲಿ 306 ಜನರು ಪಾಸಿಟಿವ್ ಬಂದಿದ್ದು, 7 ದಿನಗಳ ನಂತರದ ಪರೀಕ್ಷೆಯಲ್ಲಿ ಇಬ್ಬರು ಮಾತ್ರ ಪಾಸಿಟಿವ್ ಇದ್ದಾರೆ ಎಂದರು. ಯಾರಿಗೂ ತೀವ್ರ ಲಕ್ಷಣಗಳಿಲ್ಲದೇ, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಈಗಾಗಲೇ ಸುಮಾರು 7 ಸಾವಿರ ಜನರಿಗೆ ಈಗಾಗಲೇ ಪರೀಕ್ಷೆ ಮಾಡಿದ್ದು, 500 ಮೀಟರ್ ವ್ಯಾಪ್ತಿಯೊಳಗೆ 1000 ಕ್ಕೂ ಹೆಚ್ಚು ಜನರ ಪರೀಕ್ಷೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

2-3 ದಿನಗಳಲ್ಲಿ ಎಲ್ಲರಿಗೂ ಹಣ ಬಿಡುಗಡೆ!

2-3 ದಿನಗಳಲ್ಲಿ ಎಲ್ಲರಿಗೂ ಹಣ ಬಿಡುಗಡೆ!

ರಾಜ್ಯದಲ್ಲಿನ ಕಿರಿಯ ವೈದ್ಯರು ಮಾಡಲು ನಿರ್ಧರಿಸಿರುವ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಸಿಎಂ ಬೊಮ್ಮಾಯಿ ಅವರು, "ಈಗಾಗಲೇ ಹಣವನ್ನು ಬಿಡುಗಡೆ ಮಾಡಲಾಗಿದೆ. ಕೆಲವು ಕಾಲೇಜುಗಳಲ್ಲಿ ದಾಖಲೆಗಳಿಲ್ಲದೆ ಪಾವತಿಗೆ ತೊಂದರೆಯಾಗಿದೆ. ದಾಖಲೆಗಳಿದ್ದವರಿಗೆ ಕೋವಿಡ್ 19 ಹಾಗೂ ಶಿಷ್ಯವೇತನ ಪಾವತಿಸಲು ಈಗಾಗಲೇ ಸೂಚಿಸಲಾಗಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಹಣವನ್ನು ಬಿಡುಗಡೆ ಮಾಡಲಾಗುವುದು" ಎಂದು ಭರವಸೆ ನೀಡಿದ್ದಾರೆ.

Recommended Video

Nandi Hills ರಸ್ತೆಗಳ ಮರುನಿರ್ಮಾಣ , ಪ್ರವಾಸಿಗರು ಫುಲ್ ಖುಷ್ | Oneindia Kannada

English summary
Former Prime Minister Deve Gowda and Prime Minister Modi have discussed regarding alliance in Karnataka. Former CM BS Yediyurappa and H.D. Kumaraswamy would take a final decision said chief minister Basavaraj Bommai. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X