ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ರಣಹೇಡಿಯಂತೆ ಬಾಲ ಮುದುರಿಕೊಂಡಿರುವ ರಾಜ್ಯ ಸರ್ಕಾರ: ದೇವೇಗೌಡ

|
Google Oneindia Kannada News

ಬೆಂಗಳೂರು, ಡಿಸೆಂಬರ್‌ 29: ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ತೀವ್ರಗೊಂಡಿರುವಾಗ ರಾಜ್ಯ ಸರ್ಕಾರ ರಣಹೇಡಿಯಂತೆ ಬಾಲ ಮುದುರಿ ಕೊಂಡಿದೆ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಅವರು, 'ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ತೀವ್ರಗೊಂಡಿದ್ದು, ಆಡಳಿತ ಸರ್ಕಾರವು ರಣಹೇಡಿಯಂತೆ ಬಾಲ ಮುದುರಿಕೊಂಡಿರುವುದು, ವಿರೋಧ ಪಕ್ಷವು ಈ ವಿಷಯಕ್ಕೂ ತಮಗೂ ಸಂಬಂಧವೇ ಇಲ್ಲದಿರುವಂತೆ ಇರುವುದು, ಕರ್ನಾಟಕಕ್ಕೆ ಕನ್ನಡ-ಕೇಂದ್ರಿತ ಸರ್ಕಾರದ ಅನಿವಾರ್ಯತೆ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ' ಎಂದು ಹೇಳಿದ್ದಾರೆ.

'ಕರ್ಣಾಟ ಬಲಂ ಅಜೇಯಂʼ ಎಂದು ಕೊಂಡಾಡುವಷ್ಟು ಬಲಿಷ್ಠವಾಗಿದ್ದ ನಮ್ಮ ರಾಜ್ಯವು ಇಂದು ಛಿದ್ರ ಛಿದ್ರವಾಗುವ ಭಯದ ವಾತವರಣ ನಿರ್ಮಾಣವಾಗಿರುವುದಕ್ಕೆ ರಾಷ್ಟ್ರೀಯ ಪಕ್ಷಗಳ ನಿರ್ಲಕ್ಷ್ಯಕರ ಆಡಳಿತ ಕಾರಣವೇ ಹೊರತು ಮತ್ತೀನೇನು ಅಲ್ಲ ಎಂದು ಮಾಜಿ ಪ್ರಧಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Hd Devegowda Attacks On State Government Over Karnataka Maharashtra Border Dispute

ಕರ್ನಾಟಕದ ಗತವೈಭವ ಮರುಕಳಿಸಬೇಕಿದ್ದರೇ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಬೇಕಿದೆ. ಇದು ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದರಿಂದ ಮಾತ್ರ ಸಾಧ್ಯ ಎಂದು ದೇವೇಗೌಡ ಹೇಳಿದ್ದಾರೆ.

ಕರ್ನಾಟಕದ ಪ್ರಮುಖ ನಗರಗಳಾದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ, ಬೀದರ್ ಹಾಗೂ 865 ಮರಾಠಿ ಭಾಷಿಗರನ್ನು ಹೊಂದಿರುವ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಮಹಾರಾಷ್ಟ್ರ ಸರ್ಕಾರ ಹೇಳಿದೆ. ಈ ಕುರಿತು ನಿರ್ಣಯವನ್ನೂ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಈ ವಿಚಾರವಾಗಿ ಮಹಾರಾಷ್ಟ್ರದ ರಾಜಕೀಯ ಮುಖಂಡರು ಉದ್ದಟತನದ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಶಿವಸೇನಾ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲು ಮನವಿ ಮಾಡಿದ್ದಾರೆ.

ಚೀನಾ ಸೈನ್ಯವು ಭಾರತದೊಳಗೆ ನುಗ್ಗಿದ ಹಾಗೆ ನಾವು ಕರ್ನಾಟಕದೊಳಗೆ ನುಗ್ಗುತ್ತೇವೆಂದು ಶಿವಸೇನಾ ನಾಯಕ ಸಂಜಯ್‌ ರಾವತ್‌ ಹೇಳಿದ್ದಾರೆ.

Hd Devegowda Attacks On State Government Over Karnataka Maharashtra Border Dispute

ನಾವು ಮರಾಠಿ ಭಾಷಿಗರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕನ್ನಡಿಗರು ನಮ್ಮ ತಾಳ್ಮೆ ಕೆಣಕಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿಕೆ ನೀಡಿದ್ದಾರೆ.

ಇದರ ವಿರುದ್ಧ ವಿರೋಧ ಪಕ್ಷಗಳ ನಾಯಕರು ಹಾಗೂ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಈ ವಿಚಾರವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕನ್ನಡ ನಾಡಿನ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಡುವುದಿಲ್ಲ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಈ ಪಕ್ಷದ ನಾಯಕರು ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

English summary
Former Prime Minister, Rajya Sabha member HD Deve Gowda has attacked that the state government has turned weak when the border dispute between Karnataka and Maharashtra states has intensified,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X