ಡಿಕೆಶಿ ಪ್ರಾಬಲ್ಯ ತಗ್ಗಿಸಲು ಮಂಡ್ಯದಿಂದ ಕಣಕ್ಕಿಳಿಯಲಿದ್ದಾರಾ ಮಾಜಿ ಪ್ರಧಾನಿ ದೇವೇಗೌಡ?

ಬೆಂಗಳೂರು,ಡಿಸೆಂಬರ್‌ 23: 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಗಳಿಸಲು ಕಾರಣಕರ್ತರಲ್ಲಿ ಒಬ್ಬರಾದ ಡಿ ಕೆ ಶಿವಕುಮಾರ್‌ ಅವರ ವರ್ಷಸ್ಸು ಹೆಚ್ಚಾಗಿದೆ. ಅಲ್ಲದೇ ಕಾಂಗ್ರೆಸ್‌ ಹೈಕಮಾಂಡ್‌ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಕನಕಪುರ ಬಂಡೆ ಡಿ ಕೆ ಶಿವಕುಮಾರ್‌ ಅವರ ಪ್ರಾಬಲ್ಯ ಕುಗ್ಗಿಸಲು ದಳಪತಿಗಳು ತಯಾರಿ ನಡೆಸಿದ್ದಾರೆ.

ಹೌದು, ಡಿ ಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತಂದಿರುವ ಡಿ ಕೆ ಶಿವಕುಮಾರ್‌ ಪ್ರಾಬಲ್ಯವನ್ನ ಹಳೇ ಮೈಸೂರು ಭಾಗದಲ್ಲೇ ಕುಗ್ಗಿಸಲು ಲೋಕಸಮರದ ವೇದಿಕೆಯನ್ನ ದಳಪತಿಗಳು ಸಜ್ಜುಗೊಳಿಸಿದ್ದಾರೆ. ಈಗಾಗಲೇ ಹಳೇ ಮೈಸೂರು ಭಾಗದಲ್ಲಿ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಂತೆ ಡಿ ಕೆ ಶಿವಕುಮಾರ್‌ ಅವರ ಪ್ರಾಬಲ್ಯ ಹೆಚ್ಚಾಗಿದೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿ ಕೆ ಶಿವಕುಮಾರ್‌ ಹಣೆಯಲ್ಲೂ ಜೆಡಿಎಸ್‌ ನಾಯಕರು ಪ್ಲಾನ್‌ ನಡೆಸಿದ್ದಾರೆ.

HD Devegowda Contesting From Mandya LS Constituency to Counter DK Shivakumars Dominance?

ಹಳೇ ಮೈಸೂರು ಭಾಗ ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿದ್ದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಲೋಕಸಭಾ ಕ್ಷೇತ್ರವನ್ನ ಗೆಲ್ಲುವ ನಿಟ್ಟಿನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನ ವಶಪಡಿಸಿಕೊಳ್ಳುವ ಮೂಲಕ ಡಿ ಕೆ ಶಿವಕುಮಾರ್‌ ಗೆ ಠಕ್ಕರ್‌ ಕೊಡಲು ತಯಾರಿ ನಡೆಸಿವೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ ಕೆ ಬ್ರದರ್ಸ್‌ ತಮ್ಮದೇ ಆದ ವರ್ಚಸ್ಸನ್ನ ಹೊಂದಿದೆ. ಮಂಡ್ಯ ಕ್ಷೇತ್ರವನ್ನ ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ತಂತ್ರಗಾರಿಕೆಯನ್ನ ನಡೆಸಿದ್ದಾರೆ.

ಈಗಾಗಲೇ 2019 ರ ಲೋಕಸಭಾ ಚುನಾವಣೆ ಹಾಗೂ 2023 ರ ವಿಧಾನಸಭಾ ಚುಣಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಈ ಬಾರೀ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಈ ಬಾರೀ ಮಂಡ್ಯ ಕ್ಷೇತ್ರವನ್ನ ವಶಪಡಿಸಿಕೊಳ್ಳುವುದು ದಳಪತಿಗಳಿಗೆ ಪ್ರತಿಷ್ಠೆಯಾಗಿದೆ. ಹೀಗಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವುದಕ್ಕಿಂತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡ ಅವರನ್ನ ಕಣಕ್ಕಿಳಿಸುವ ಕುರಿತು ಜೆಡಿಎಸ್‌ ಪಾಳಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ನಿಖಿಲ್‌ ಕುಮಾರಸ್ವಾಮಿ ಅವರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಒಕ್ಕಲಿಗರ ಭದ್ರ ಕೋಟೆಯನ್ನ ವಶಪಡಿಸಕೊಳ್ಳಬೇಕು. ಈ ಹಿಂದೆ ಮಂಡ್ಯದಲ್ಲಿ ಎಲ್ಲಾ ವಿಧಾನಸಭಾ ಸ್ಥಾನಗಳನ್ನ ಜೆಡಿಎಸ್‌ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್‌ ಹೆಚ್ಚಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನ ಗೆಲ್ಲುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲಬೇಕಾದರೇ ಮೊದಲು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ದಳಪತಿಗಳಿಗಿದೆ. ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಾಗಿರುವ ಡಿ ಕೆ ಶಿವಕುಮಾರ್‌ ಅವರ ಪ್ರಾಬಲ್ಯವನ್ನ ಕುಗ್ಗಿಸುವ ನಿಟ್ಟಿನಲ್ಲಿ ದೊಡ್ಡಗೌಡರನ್ನ ಮಂಡ್ಯದಿಂದ ಕಣಕ್ಕಿಳಿಸಲು ಜೆಡಿಎಸ್‌ ನಾಯಕರು ತಂತ್ರಗಾರಿಕೆಯನ್ನ ನಡೆಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+