Breaking: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಎಚ್‌ಡಿ ದೇವೇಗೌಡ ಅವಿರೋಧ ಆಯ್ಕೆ
ಬೆಂಗಳೂರು, ಅ.27: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲಾಗಿದೆ.
ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಗುರುವಾರ ಸಂಜೆ ನಡೆಯಿತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ಸಭೆಯಲ್ಲಿ ಒಮ್ಮತದಿಂದ ನಿರ್ಣಯಿಸಲಾಗಿದೆ.
13 ರಾಜ್ಯಗಳ ಪ್ರತಿನಿಧಿಗಳು ಭಾಗಿ, ಕೇರಳದ ಮಾಜಿ ಸಚಿವರು, ಹಾಲಿ ಶಾಸಕರು ಸೇರಿ ವಿವಿಧ ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿ ಆಗಿದ್ದರು. ಮಾಜಿ ಪ್ರಧಾನಿ ದೇವೇಗೌಡ ಅವರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಬೇಕು ಎಂದು ಎಲ್ಲರೂ ಒಮ್ಮತದಿಂದ ನಿರ್ಣಯಿಸಿದ್ದರು.

ಸಭೆಯಲ್ಲಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಕೇರಳದ ಇಂಧನ ಸಚಿವ ಕೃಷ್ಣನ್ ಕುಟ್ಟಿ, ಪಕ್ಷದ ರಾಜ್ಯಧ್ಯಕ್ಷ ಸಿಎಂ ಇಬ್ರಾಹಿಂ ಸಹಿತ ಹಲವರು ಭಾಗಿಯಾಗಿದ್ದರು.











Click it and Unblock the Notifications