ಸಿದ್ದು ಮನೆ ಮುಂದೆ ದೇವೇಗೌಡ ಆಮರಣಾಂತ ಉಪವಾಸ
ನೀರಿನ ವಿಚಾರದಲ್ಲಿ ಹಾಸನ ಜಿಲ್ಲೆಗೆ ಅನ್ಯಾಯವಾಗುತ್ತಿದೆ ಎಂಬ ವಿಚಾರಕ್ಕೆ ಸರ್ಕಾರದ ವಿರುದ್ಧ ಮುನಿಸಿಕೊಂಡಿರುವ ದೇವೇಗೌಡರು.
ಬೆಂಗಳೂರು, ಮಾರ್ಚ್ 4: ಹಾಸನ ಜಿಲ್ಲೆಗೆ ಕುಡಿಯುವ ನೀರಿನ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ಧುರೀಣ ಎಚ್.ಡಿ. ದೇವೇಗೌಡ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.
ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ, ಶೀಘ್ರವೇ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಆಮಣಾಂತ ಉಪವಾಸ ಸತ್ಯಾಗ್ರಹ ಹೂಡುವುದಾಗಿ ಹೇಳಿದ್ದಾರೆ.

ಈಗಾಗಲೇ ತಾವು ಕೈಗೊಳ್ಳಲಿರುವ ಸತ್ಯಾಗ್ರಹದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇವೇಗೌಡರು ಪತ್ರ ಬರೆದಿರುವುದಾಗಿ ಮೂಲಗಳು ತಿಳಿಸಿವೆ.












Click it and Unblock the Notifications