• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಲಾಕ್‌ಡೌನ್‌ ಸಂಕಷ್ಟ: ಸಿಎಂ ಬಿಎಸ್‌ವೈಗೆ ಮಾಜಿ ಸಿಎಂ ಎಚ್‌ಡಿಕೆ ಸಲಹೆ!

|

ಬೆಂಗಳೂರು, ಮೇ 11: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳುಗಳಿಂದ ಲಾಕ್‌ಡೌನ್‌ನಿಂದಾಗಿ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನಿಂತಿವೆ. ಲಾಕ್‌ಡೌನ್‌ನಿಂದಾಗಿ ರಾಜ್ಯಗಳ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಹಣವಿಲ್ಲದೆ ಬಜೆಟ್‌ನ್ನೂ ಕೂಡ ಅನುಷ್ಠಾನಕ್ಕೆ ತರುವುದು ಆಗುತ್ತಿಲ್ಲ.

   ಕೊರೊನಾ ಅಂತ್ಯಕ್ಕೆ ಶ್ರೀಮನ್ನಾರಾಯಣನೇ ಬರ್ತಾನೆ | Corona | Oneindia kannada

   ಕಳೆದ ಮಾರ್ಚ್‌ ತಿಂಗಳಿನಿಂದ ತೆರಿಗೆ ಸಂಗ್ರಹ ಕೂಡ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ 5ನೇ ಬಾರಿಗೆ ವಿಡಿಯೊ ಸಂವಾದ ನಡೆಸಲಿದ್ದಾರೆ.

   1610 ಕೋಟಿಯ ವಿಶೇಷ ಪ್ಯಾಕೇಜ್ ಪ್ರಚಾರಕ್ಕೆ ಸೀಮಿತ: ಕುಮಾರಸ್ವಾಮಿ

   ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ರಾಜ್ಯದ ಸಮಸ್ಯೆಗಳ ಕುರಿತು ಮಾತನಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹಲವು ಸಲಹೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊಟ್ಟಿದ್ದಾರೆ. ರಾಜ್ಯದ ಪರವಾಗಿ ಯಾವ್ಯಾವ ಬೇಡಿಕೆಗಳನ್ನು ಇಡಬೇಕು ಎಂಬುದರ ಕುರಿತು ಕುಮಾರಸ್ವಾಮಿ ಅವರು ಸಿಎಂಗೆ ಸಲಹೆ ಕೊಟ್ಟು, ಟ್ವೀಟ್ ಮಾಡಿದ್ದಾರೆ.

   ರಾಜ್ಯಕ್ಕೆ ಕೋವಿಡ್ ಪ್ಯಾಕೇಜ್ ಕೇಳಿ

   ರಾಜ್ಯಕ್ಕೆ ಕೋವಿಡ್ ಪ್ಯಾಕೇಜ್ ಕೇಳಿ

   ಕೊರೊನಾ ವೈರಸ್ ನಿಯಂತ್ರಣ, ಲಾಕ್ ಡೌನ್ ಕುರಿತಂತೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ರಾಜ್ಯದ ಸಿಎಂ ಯಡಿಯೂರಪ್ಪ ಅವರೂ ಇರಲಿದ್ದಾರೆ. ಸಂವಾದದಲ್ಲಿ ಬಿಎಸ್‌ವೈ ಅವರು ರಾಜ್ಯಕ್ಕೆ ಕೋವಿಡ್ ಪ್ಯಾಕೇಜ್ ನೀಡುವಂತೆ ಮೋದಿ ಅವರನ್ನು ಆಗ್ರಹಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

   ರಾಜ್ಯಕ್ಕೆ ಆರ್ಥಿಕ ನೆರವು ಬಂದಿಲ್ಲ

   ರಾಜ್ಯಕ್ಕೆ ಆರ್ಥಿಕ ನೆರವು ಬಂದಿಲ್ಲ

   ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್‌ ನಿಧಿ ಸ್ಥಾಪಿಸಿದೆ. ಇದಕ್ಕೆ ರಾಜ್ಯದ ಸಂಸದರು, ಉದ್ಯಮಿಗಳು, ನಾಗರಿಕರು ಉದಾರ ದೇಣಿಗೆ ನೀಡಿದ್ದಾರೆ. ಹೀಗಿದ್ದೂ ಕೇಂದ್ರದಿಂದ ರಾಜ್ಯಕ್ಕೆ ಈ ವರೆಗೆ ಕೋವಿಡ್ ಎದುರಿಸಲು ಸೂಕ್ತ ಆರ್ಥಿಕ ನೆರವು ಬಂದಿಲ್ಲ ಎಂಬುದನ್ನು ಪ್ರಧಾನಿ ಮೋದಿ ಅವರಿಗೆ ಸಿಎಂ ಯಡಿಯೂರಪ್ಪ ಅವರು ಮನನ ಮಾಡಿಕೊಡಬೇಕು ಎಂದಿದ್ದಾರೆ.

   ಊರಿಗೆ ಹೊರಟ ಕಾರ್ಮಿಕರು; ಸರ್ಕಾರವನ್ನು ಟೀಕಿಸಿದ ಕುಮಾರಸ್ವಾಮಿ

   ಕಳೆದ 3 ದಿನಗಳಿಂದ ಸೋಂಕು ಹೆಚ್ಚುತ್ತಿದೆ

   ಕಳೆದ 3 ದಿನಗಳಿಂದ ಸೋಂಕು ಹೆಚ್ಚುತ್ತಿದೆ

   ಮೂರನೇ ಹಂತದ ಲಾಕ್‌ಡೌನ್ ಸಡಲಿಕೆ ಬಳಿಕ ಕೊರೊನಾ ವೈರಸ್‌ ಸೋಂಕು ಹರಡುವುದು ಹೆಚ್ಚಾಗುತ್ತಿದೆ. ಕಳೆದ 3 ದಿನಗಳ ಅಂಕಿ ಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ವೈದ್ಯಕೀಯ ಕ್ರಮಗಳನ್ನು ಬಿಗಿಗೊಳಿಸಬೇಕಿದೆ. ಜೊತೆಗೆ ಲಾಕ್‌ಡೌನ್‌ನಿಂದ ನಷ್ಟಕ್ಕೊಳಗಾಗಿರುವ ಜನರಿಗೆ ಆರ್ಥಿಕ ಪರಿಹಾರ ನೀಡಬೇಕಿದೆ. ದೊಡ್ಡ ಮಟ್ಟದ ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ ಕೊಡುವ ಕರ್ನಾಟಕದಂತಹ ದೊಡ್ಡ ರಾಜ್ಯಕ್ಕೆ ಸೂಕ್ತ ಪ್ಯಾಕೇಜ್ ಅತ್ಯಗತ್ಯ. ಈ ಬಗ್ಗೆ ಕೇಂದ್ರಕ್ಕೆ ರಾಜ್ಯ ಪ್ರಸ್ತಾವನೆ ಇಡಬೇಕೆ ಎಂದು ಎಚ್‌ಡಿಕೆ ಆಗ್ರಹಿಸಿದ್ದಾರೆ.

   ಕೇಂದ್ರದ ಬಾಕಿ ಹಣ ಕೇಳಬೇಕು

   ಕೇಂದ್ರದ ಬಾಕಿ ಹಣ ಕೇಳಬೇಕು

   ಕೇಂದ್ರದಿಂದ ಕೋವಿಡ್ ಪ್ಯಾಕೇಜ್ ಜೊತೆಗೆ ಜಿಎಸ್‌ಟಿ ಬಾಕಿ, ನೆರೆ-ಬರ ಪರಿಹಾರ ಸೇರಿದಂತೆ ಕೇಂದ್ರದಿಂದ ಬರಬೇಕಾದ ಇತರ ಬಾಕಿ ಹಣದ ಬಗ್ಗೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಲ್ಲಿ ಕೇಳಬೇಕು. ಲಾಕ್‌ಡೌನ್‌ನಿಂದಾಗಿ ರಾಜ್ಯ ಹಣಕಾಸಿನ ತೊಂದರೆ ಅನುಭವಿಸುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರದಿಂದ ಸೂಕ್ತ ನೆರವು ಸಿಗದ ಹೊರತು ಕೋವಿಡ್ ನಿಯಂತ್ರಣ ಕಷ್ಟವಾಗಲಿದೆ.

   ಈ ಎಲ್ಲ ವಿಚಾರಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಬೇಕು. ಕೇಂದ್ರದಿಂದ ಸೂಕ್ತ ಹಣಕಾಸು ನೆರವು ಸಿಗದೇ ಇದ್ದರೆ ಕೊರೊನಾ ವೈರಸ್‌ ನಿಯಂತ್ರಣ ಸಾಧ್ಯವಿಲ್ಲ. ರಾಜ್ಯದ ಎಲ್ಲ ಬೇಡಿಕೆಗಳನ್ನು ಸೂಕ್ತವಾಗಿ ಕೇಂದ್ರದ ಎದುರು ಇಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರ ಎದುರು ಇಟ್ಟಿದ್ದಾರೆ.

   English summary
   Former Chief Minister H.D. Kumaraswamy gave many suggestions to Chief Minister B.S. Yeddyurappa. Kumaraswamy tweeted and advised CM on what demands should be placed on behalf of the state infront of PM Modi.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more