ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ 7: ಕರ್ನಾಟಕ ರಾಜ್ಯದಲ್ಲಿ ಭಾರಿ ಮಳಯಾಗುತ್ತಿದ್ದು, ಇದರಿಂದ ಕೊಡಗು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ.

Recommended Video

ಗಾಣಗಪುರದ ದತ್ತನ ದರ್ಶನವೇ ಡಿಕೆ ಶಿವಕುಮಾರ್ ಗೆ ಮುಳುವಾಯ್ತಾ? | Oneindia Kannada

ಮಳೆಯಿಂದ ಕಳೆದ ವರ್ಷ ಸೃಷ್ಟಿಯಾಗಿದ್ದ ಅವಾಂತರ ಮತ್ತೆ ಉದ್ಬವವಾಗಿಬಿಡುತ್ತಾ ಎಂಬ ಆತಂಕ ಎದುರಾಗಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಪ್ರವಾಹ ಭೀತಿ: ಯಡಿಯೂರಪ್ಪ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆಪ್ರವಾಹ ಭೀತಿ: ಯಡಿಯೂರಪ್ಪ ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

'ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ' ಆಗ್ರಹಿಸಿದ್ದಾರೆ. ಮುಂದೆ ಓದಿ...

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ

ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದು ತಿಳಿಸಿದ್ದಾರೆ..

ಕೇಂದ್ರದಿಂದ ಪರಿಹಾರಕ್ಕೆ ಆಗ್ರಹ

ಕೇಂದ್ರದಿಂದ ಪರಿಹಾರಕ್ಕೆ ಆಗ್ರಹ

- ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸುತ್ತೇನೆ.

- ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಸಲಹೆ ನೀಡಿದ್ದಾರೆ.

ಸರ್ಕಾರಕ್ಕೆ ಅಗ್ನಿಪರೀಕ್ಷೆ

ಸರ್ಕಾರಕ್ಕೆ ಅಗ್ನಿಪರೀಕ್ಷೆ

'ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ' ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವರು, ಅಧಿಕಾರಿಗಳು ಮೊಕ್ಕಾಂ ಮಾಡಿ

ಸಚಿವರು, ಅಧಿಕಾರಿಗಳು ಮೊಕ್ಕಾಂ ಮಾಡಿ

'ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ' ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

English summary
Former Chief Minister HD Kumaraswamy has advised the government to how to work in flood situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X