'ಪ್ರಜ್ವಲ್‌ ಪೆನ್ ಡ್ರೈವ್ ಬಿಡುಗಡೆಯಲ್ಲಿ ಕುಮಾರಸ್ವಾಮಿ ಹಾಗೂ ಮೈತ್ರಿ ನಾಯಕರ ಕೈವಾಡ '

ಬೆಂಗಳೂರು, ಮೇ 1: ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪವಾಗಿ ಡಿ ಕೆ ಸುರೇಶ್‌ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಅವರೀಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

HD Kumaraswamy And Alliance Leaders Are Involved In The Launch Of Prajwal Pen Drive

ಇಲ್ಲಿ ಕುಮಾರಸ್ವಾಮಿ ಅವರ ಆರೋಪ ಮುಖ್ಯವೋ, ಆ ಭಾಗದ ಐನೂರಕ್ಕಿಂತ ಹೆಚ್ಚು ಸಂತ್ರಸ್ತೆಯರಿಗೆ ರಕ್ಷಣೆ, ನ್ಯಾಯ ಒದಗಿಸುವುದು ಮುಖ್ಯವೋ? ಅವರು ತಮ್ಮ ಹುಳುಕು ಮುಚ್ಚಿಕೊಳ್ಳಲು ದಿನಾ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಅನ್ಯಾಯಕ್ಕೆ ಒಳಗಾಗಿರುವವರ ಬಗ್ಗೆ ನಾವು ಚಿಂತನೆ ಮಾಡಬೇಕು. ಕುಮಾರಸ್ವಾಮಿ ಅವರು ಯಾವ ವಿಚಾರದಲ್ಲಿ ಶಿವಕುಮಾರ್ ಅವರ ವಿರುದ್ಧ ಟೀಕೆ ಮಾಡದೇ ಇದ್ದಾರೆ ಹೇಳಿ? ಎಲ್ಲಿ ಏನೇ ಆದರೂ ಅದಕ್ಕೆ ಶಿವಕುಮಾರ್ ಅವರೇ ಕಾರಣ ಎನ್ನುತ್ತಾರೆ. ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡದೇ ಇರಲು ಅವರಿಗೆ ಆಗುವುದಿಲ್ಲ ಎಂದರು.

ದೇವರಾಜೇಗೌಡ ಪದೇ ಪದೆ ಡಿ.ಕೆ. ಶಿವಕುಮಾರ್ ಅವರ ಹೆಸರು ಪ್ರಸ್ತಾಪ ಮಾಡುತ್ತಿರುವುದೇಕೆ ಎಂಬ ಪ್ರಶ್ನಗೆ ಉತ್ತರಿಸಿದ ಅವರು, ಅವರವರು ತಮ್ಮ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಶಿವಕುಮಾರ್ ಅವರ ಬಳಿ ಪೆನ್ ಡ್ರೈವ್ ಇದ್ದಿದ್ದರೆ ಇನ್ನು ಮುಂಚಿತವಾಗಿ ರಿಲೀಸ್ ಮಾಡಬಹುದಿತ್ತಲ್ಲವೇ? ಇದು ಬಿಡುಗಡೆ ಆಗಿರುವುದು ಹಾಸನ ಜಿಲ್ಲೆಯಲ್ಲಿ, ಹಾಸನ ಜಿಲ್ಲೆಯ ನಾಯಕರ ಕೈವಾಡ ಇದರಲ್ಲಿದೆ. ಅವರ ಮೈತ್ರಿ ನಾಯಕರು ಹಾಗೂ ಕುಮಾರಸ್ವಾಮಿ ಅವರ ಕೈವಾಡವಿದೆ.

ಕುಮಾರಸ್ವಾಮಿ ಅವರಿಗೆ ಈ ಬಗ್ಗೆ ಮುಂಚಿತವಾಗಿಯೇ ಗೊತ್ತಿತ್ತು, ಹೀಗಾಗಿ ಬಹಿರಂಗವಾಗಿ ಪ್ರಜ್ವಲ್ ಗೆ ತಿದ್ದುಕೊಳ್ಳುವಂತೆ ಹೇಳುತ್ತೇನೆ ಎಂದು ಹೇಳಿದ್ದರಲ್ಲ. ಇನ್ನು ಈ ವಿಡಿಯೋಗಳು ನಾಲ್ಕು ವರ್ಷಗಳ ಹಳೆಯದು ಎಂದು ರೇವಣ್ಣನವರೇ ಒಪ್ಪಿಕೊಂಡಿದ್ದಾರೆ. ಅವರ ಕುಟುಂಬದವರೇ ಈ ವಿಚಾರವಾಗಿ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದ್ದು, ಬೇರೆಯವರ ಮೇಲೆ ಯಾಕೆ ಆರೋಪ ಮಾಡಬೇಕು ಎಂದರು.

ನನ್ನ ಬಳಿ ಪೆನ್ ಡ್ರೈವ್ ಬರುವ ಮುನ್ನ ಡಿ.ಕೆ. ಶಿವಕುಮಾರ್ ಅವರ ಬಳಿ ಈ ಪೆನ್ ಡ್ರೈವ್ ಹೋಗಿತ್ತು ಎಂಬ ದೇವರಾಜೇಗೌಡರ ಹೇಳಿಕೆ ಕುರಿತು ಮಾತನಾಡಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಸನ ಜಿಲ್ಲೆಯಲ್ಲಿ ಕೇವಲ ಗುಸು ಗುಸು ಇತ್ತು. ಅವರು ಕೋರ್ಟ್ ನಲ್ಲಿ ತಡೆಯಾಜ್ಞೆ ಕೂಡ ತಂದಿದ್ದರು. ಪೆನ್ ಡ್ರೈವ್ ಹರಿದಾಡಿದ ನಂತರ ಈಗ ವಿಚಾರ ಚರ್ಚೆಯಾಗುತ್ತಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+