HD Kumaraswamy: ಮಾಜಿ ಸಿಎಂ ಕುಮಾರಸ್ವಾಮಿ & ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ನೇರ ಯುದ್ಧ ಆರಂಭ!
ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಹಾಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ವಾರ್ ಶುರುವಾಗಿದೆ. 2018ರ ಸಮ್ಮಿಶ್ರ ಸರ್ಕಾರದ ನಂತರ ಇಬ್ಬರು ನಾಯಕರ ಮಧ್ಯೆ ಒಂದಷ್ಟು ಸ್ನೇಹ ಮೂಡಿತ್ತು. ಆದರೆ ಸಮ್ಮಿಶ್ರ ಸರ್ಕಾರ ಬಿದ್ದು ಹೋದ ನಂತರ ಸಣ್ಣದಾಗಿ ವಾರ್ ಶುರುವಾಗಿತ್ತು. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಈ ಇಬ್ಬರು ನಾಯಕರು ವಾಗ್ದಾಳಿ ನಡೆಸುತ್ತಿದ್ದರು, ಆದರೆ ಈಗ ನೇರ ಯುದ್ಧ ಶುರುವಾಗಿದೆ.
ಹೌದು, ರಾಜ್ಯ ಕಾಂಗ್ರೆಸ್ ಸರ್ಕಾರ ಪರ್ಸಂಟೇಜ್ ಪಟಾಲಂ ಎಂದು ಮಾಜಿ ಸಿಎಂ ಎಚ್‌ಡಿಕೆ ವಾಗ್ದಾಳಿ ನಡೆಸಿದ್ದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿ ತಿರುಗೇಟನ್ನೂ ಕೊಟ್ಟಿದ್ದರು. ಇದೀಗ ಇದೇ ವಿಚಾರವಾಗಿ ಇಬ್ಬರೂ ಒಕ್ಕಲಿ ಸಮುದಾಯದ ನಾಯಕರ ನಡುವೆ ದೊಡ್ಡ ಯುದ್ಧ ಆರಂಭವಾಗಿದೆ. ಹಾಗಾದರೆ ಡಿ.ಕೆ. ಶಿವಕುಮಾರ್ ಹೇಳಿಕೆ ಬಗ್ಗೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಡಿಕೆ ಬ್ರದರ್ಸ್ ಮನಸ್ಸು ಹುಳ್ಳುಳ್ಳಗೆ?
ಅಂದಹಾಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಂಇ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯಲ್ಲಿ HDK, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕೊಂಡನಂತೆ, ಕಳ್ಳನ ಮನಸ್ಸು ಹುಳ್ಳುಳ್ಳಗೆ ಎನ್ನುವ ಈ ಗಾದೆಮಾತು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಆದರೆ ಡಿಕೆ ಸಹೋದರರಿಗೆ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ನೇರ ಯುದ್ಧಕ್ಕೆ ನಿಂತಿದ್ದಾರೆ.
ತಿಹಾರ ಜೈಲು ವಿಚಾರವೂ ಪಸ್ತಾಪ!
ಅಲ್ಲದೆ, 'ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ' ಎಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಹತಾಶೆ ಹಳಹಳಿಕೆ ಅಷ್ಟೇ ಎಂದು ಎಚ್‌ಡಿಕೆ ಇದೇ ವೇಳೆ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿರುವ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನಾ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್ ಜೈಲಿನ ವಿಷಯ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ ಅಂತಾ ಇದೇ ವೇಳೆ ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.
ಹಾಗೇ, ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ. ಅಂದಹಾಗೆ, ನಾನು ಐಟಿ ಪ್ರತಿನಿಧಿಯೂ ಅಲ್ಲ, ಈಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ.. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ? ಎಂದು ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಹಾಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಶ್ನೆ ಕೇಳಿದ್ದಾರೆ.

ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ...
40% ಕಮೀಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ? ಎಂದು ಡಿಸಿಎಂ ಕಾಲೆಳೆದಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.
ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು!! ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಎಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.











Click it and Unblock the Notifications