ಎಚ್.ಡಿ ಕುಮಾರಸ್ವಾಮಿ vs ಡಿ.ಕೆ ಶಿವಕುಮಾರ್ "ಒಕ್ಕಲಿಗ ಸಮುದಾಯ" ಚರ್ಚೆ!
ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಶುರುವಾಗುತ್ತಿದೆ. ಜಾತಿ ಗಣತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡುತ್ತಿದ್ದಂತೆಯೇ ಎಚ್.ಡಿ ಕುಮಾರಸ್ವಾಮಿ ಅವರು ಈ ವಿಚಾರವಾಗಿ ರಿಯಾಕ್ಟ್ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಕ್ಕಲಿಗ ಸಮುದಾಯದ ಜನ ಸಂಖ್ಯೆಯ ಬಗ್ಗೆ ಮಾತನಾಡಿದ್ದಾರೆ. ಇದರ ನಡುವೆ ಜಾತಿ ಗಣತಿಯ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ. ಒಕ್ಕಲಿಗ ಚರ್ಚೆ ಮುನ್ನೆಲೆಗೆ ಬಂದಿದೆ.
ರಾಜ್ಯದಲ್ಲಿ ಜಾತಿ ಗಣತಿ ವಿಚಾರವು ಇದೀಗ ಚರ್ಚೆಯ ಕೇಂದ್ರ ಬಿಂದುವಾಗಿದೆ. ಸರ್ಕಾರದ ಬೆಲೆ ಏರಿಕೆ ಹಾಗೂ ಹನಿಟ್ರ್ಯಾಪ್ ವಿಚಾರಗಳು ಚರ್ಚೆಯಾಗುತ್ತಿಲ್ಲ. ಕಳೆದ 15 ದಿನಗಳ ಹಿಂದೆ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಜಾತಿ ಗಣತಿಯ ಬಗ್ಗೆ ಕೆಲವು ಪ್ರಮುಖ ಸಚಿವರೇ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಸಂಬಂಧ ವಿವಿಧ ಜಾತಿಯ ಕಾಂಗ್ರೆಸ್ ನಾಯಕರೇ ಒಂದೆಡೆ ಸೇರಿ ಸಭೆ - ಚರ್ಚೆಗಳನ್ನು ಮಾಡುತ್ತಿದ್ದಾರೆ.

ಡಿ.ಕೆ ಶಿವಕುಮಾರ್ ಹೇಳಿದ್ದೇನು ?
ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ. ಇದರ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಶಾಸಕರ ಜೊತೆಗೆ ಚರ್ಚಿಸಿ ಯಾರ ಮನಸ್ಸನ್ನು ಸಹ ನೋಯಿಸದೆ ಎಲ್ಲರ ಗೌರವವನ್ನು ಕಾಪಾಡಲು ಸಲಹೆ ನೀಡುತ್ತೇವೆ. ನಮ್ಮದು ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸುವ ಪಕ್ಷವಾಗಿದೆ. ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಯಾರು ಹಿಂದುಳಿದಿದ್ದಾರೋ ಅವರನ್ನು ಮುಖ್ಯವಾಹಿನಿಗೆ ತರುವುದು ನಮ್ಮ ಆದ್ಯತೆಯಾಗಿದೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ಹೇಳಿದ್ದೇನು ?
ಜಾತಿ ಗಣತಿಯ ಬಗ್ಗೆ ಮಾತನಾಡಿರುವ ಎಚ್.ಡಿ ಕುಮಾರಸ್ವಾಮಿ ಅವರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಜಾತಿ ಗಣತಿ ವಿಚಾರದಲ್ಲಿ ಒಕ್ಕಲಿಗ ಸಮುದಾಯದ ವಿಚಾರವಾಗಿ ಡಿ.ಕೆ ಶಿವಕುಮಾರ್ ಹಾಗೂ ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ವಾಕ್ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಆದರೆ ಈ ವಿಚಾರದಲ್ಲಿ ಇಬ್ಬರೂ ನಾಯಕರು ಒಂದಾದಂತೆ ಕಾಣುತ್ತಿದೆ.
ಪ್ರಭಾವಿ ಸಮುದಾಯಗಳಿಂದ ವಿರೋಧ: ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಮಂಡನೆಗೆ ಸಂಬಂಧಿಸಿದಂತೆ ಕರ್ನಾಟಕದ ಪ್ರಮುಖ ಸಮುದಾಯಗಳಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕದ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗ ಸಮುದಾಯದಿಂದ ಸರ್ಕಾರದ ಜಾತಿ ಗಣತಿಗೆ ವಿರೋಧ ವ್ಯಕ್ತವಾಗಿದೆ. ಈ ಎರಡೂ ಸಮುದಾಯಗಳು ಜಾತಿ ಗಣತಿ ವರದಿಯನ್ನು ಪ್ರಬಲವಾಗಿ ವಿರೋಧಿಸಿವೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಈ ವರದಿಯನ್ನು ಮಂಡನೆ ಮಾಡಬಾರದು ಎಂದು ಆಗ್ರಹಿಸಿವೆ. ಲಿಂಗಾಯತ ಸಮುದಾಯವು ಪ್ರತ್ಯೇಕ ಜಾತಿ ಗಣತಿ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದರೆ, ಒಕ್ಕಲಿಗ ಸಮುದಾಯದಿಂದ ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಕಳೆದ ವರ್ಷ ಜಾತಿ ಗಣತಿ ವರದಿ ಮಂಡನೆಯ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿಯೂ ಈ ಎರಡೂ ಸಮುದಾಯಗಳಿಂದ ವರದಿ ಮಂಡನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ವರದಿಯ ಅಂಕಿ - ಅಂಶಗಳು ಬಹಿರಂಗವಾಗುವ ಸಂದರ್ಭದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ. ಇದನ್ನು ನಿಭಾಯಿಸುವುದು ಕರ್ನಾಟಕ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.












Click it and Unblock the Notifications