Get Updates
Get notified of breaking news, exclusive insights, and must-see stories!

ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ದೇವೇಗೌಡರ ಮೇಲೆ ಆಣೆ ಮಾಡುತ್ತೀರಾ ಕುಮಾರಸ್ವಾಮಿ?: ಸಿದ್ದರಾಮಯ್ಯ

ಬೆಂಗಳೂರು, ಏ.20: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ ಅವರ ಸಾಮಾಜಿಕ ಜಾಲತಾಣದ ವಾರ್ ಮುಂದುವರಿದಿದೆ. ಪರಸ್ಪರ ಮಾತಿನ ಚಾಟಿಗಳನ್ನು ನೀಡುತ್ತಿದ್ದಾರೆ.

ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ- ಟೀಮ್ ಎಂದು ಹೇಳಿದ್ದರು. ಇದಕ್ಕೆ ಕೆಂಡಾಮಂಡಲ ಆಗಿದ್ದ ಕುಮಾರಸ್ವಾಮಿ ಅವರು 'ಹೆಸರಲ್ಲಿ ರಾಮ! ಉಂಡಮನೆಗೆ ಪಂಗನಾಮ' ಎಂದು ಸಿದ್ದರಾಮಯ್ಯ ಅವರ ಕಾಲೆಳೆದಿದ್ದರು.

ಅದಕ್ಕೆ ಮತ್ತೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಿದ್ದರಾಮಯ್ಯ ಅವರು, 'ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಎಚ್‌ಡಿ. ದೇವೇಗೌಡ ಅವರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ದ ಇದ್ದೀರಾ? ಎಚ್‌.ಡಿ. ಕುಮಾರಸ್ವಾಮಿ ಅವರೇ' ಎಂದು ಪ್ರಶ್ನಿಸಿದ್ದಾರೆ.

hd kumaraswamy and siddaramaiah social media war continue

ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜು ಕಾರುತ್ತಿರುವ ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ. ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ 'ಬಿ-ಟೀಮ್' ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ.

hd kumaraswamy and siddaramaiah social media war continue

ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ, ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ.

ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ ಕುಮಾರಸ್ವಾಮಿ ಅವರೇ ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು - ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+