ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಮಟ್ಟದಲ್ಲಿ ಪ್ರಾದೇಶಿಕ ಪಕ್ಷಗಳ ಖದರ್: ಕರ್ನಾಟಕದ ಎಚ್‌ಡಿಕೆ-ತೆಲಂಗಾಣ ಸಿಎಂ ಚರ್ಚೆ

|
Google Oneindia Kannada News

ಹೈದರಾಬಾದ್, ಸೆಪ್ಟಂಬರ್ 12: ರಾಜಕೀಯವಾಗಿ ಎಲ್ಲರ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಭಾನುವಾರ ಹೈದರಾಬಾದ್‌ನಲ್ಲಿ ನಿರಂತರ ಮೂರು ಗಂಟೆಗಳ ಕಾಲ ಚರ್ಚೆ ನಡೆಸಿದರು. ಪ್ರಾದೇಶಿಕ ಪಕ್ಷಗಳ ಉಭಯ ನಾಯಕರ ಚರ್ಚೆ ರಾಜಕೀಯ ಅಂಗಳದಲ್ಲಿ ಕುತೂಹಲ ಸೃಷ್ಟಿಸಿದೆ.

ದಸರಾ ಹಬ್ಬದ ಹೊಸ್ತಿಲಲ್ಲಿ ಎರಡು ರಾಜ್ಯಗಳ ಪ್ರಾದೇಶಿಕ ರಾಜಕೀಯ ಪಕ್ಷಗಳು ಮುಖಂಡರು ಭೇಟಿಯಾಗಿದ್ದಾರೆ. ಇದರ ಫಲಶ್ರುತಿಯಾಗಿ ದಸರಾ ವಿಜಯದಶಮಿ ವೇಳೆಗೆ ದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಪರ್ಯಾಯ ರಾಜಕೀಯ ಶಕ್ತಿಯೊಂದು ಹೊರಹೊಮ್ಮುವ ಸಾಧ್ಯತೆ ಇದೆ ಎನ್ನಲಾಗಿದೆ. ಆ ಬಗ್ಗೆ ತಿಳಿದುಕೊಳ್ಳಲು ಎರಡು ರಾಜ್ಯಗಳ ಜನತೆ ಕಾಯಬೇಕಿದೆ.

ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಹೇಳಿದ ಕಟೀಲ್!ಸಿದ್ದರಾಮಯ್ಯ ರಾಜಕೀಯ ಭವಿಷ್ಯ ಹೇಳಿದ ಕಟೀಲ್!

ಭಾನುವಾರ ಮಧ್ಯಾಹ್ನ ಒಂದು ಗಂಟೆಗೆ ತೆಲಂಗಾಣ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಪ್ರಗತಿ ಭವನ'ಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೆರಳಿದರು. ಅವರನ್ನು ಕೆ.ಚಂದ್ರಶೇಖರ್ ರಾವ್ ಮತ್ತವರ ಸಂಪುಟ ಸದಸ್ಯರು ಆದರದಿಂದ ಸ್ವಾಗತಿಸಿದರು. ಬಳಿಕ ಇಬ್ಬರು ನಾಯಕರು ಬೋಜನ ಸವಿದರು. ಈ ವೇಳೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಬೆಳ್ಳಿಯ ಶ್ರೀ ಸರಸ್ವತಿ ವೀಣೆ ನೀಡಿ ತೆಲಂಗಾಣ ಮುಖ್ಯಮಂತ್ರಿಗಳ ಸ್ವಾಗತ ವಿಶೇಷವಾಗಿತ್ತು.

ರಾಷ್ಟ್ರದಲ್ಲಿ ಪ್ರಾದೇಶಿಕ ಪಕ್ಷಗಳ ಜವಾಬ್ದಾರಿ ಏನು?

ರಾಷ್ಟ್ರದಲ್ಲಿ ಪ್ರಾದೇಶಿಕ ಪಕ್ಷಗಳ ಜವಾಬ್ದಾರಿ ಏನು?

ಕರ್ನಾಟಕ ಮತ್ತು ತೆಲಂಗಾಣ ಹಾಗೂ ರಾಷ್ಟ್ರ ರಾಜಕಾರಣದ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆ.ಚಂದ್ರಶೇಖರ್ ರಾವ್ (ಕೆಸಿಆರ್‌) ಅವರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮಹತ್ವದ ಮಾತುಕತೆ ನಡೆಸಿದರು. ರಾಷ್ಟ್ರ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳು ವಹಿಸಬೇಕಾದ ಗುರುತರ ಪಾತ್ರ, ಜವಾಬ್ದಾರಿ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ರಾಷ್ಟ್ರ ಮಟ್ಟದಲ್ಲಿ ಹೊರಹೊಮ್ಮಲಿರುವ ಪರ್ಯಾಯ ರಾಜಕೀಯ ಕೂಟದ ಬಗ್ಗೆ ಕುಮಾರಸ್ವಾಮಿ ಅವರಿಗೆ ಕೆಸಿಆರ್ ಮಾಹಿತಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಪರಸ್ಪರ ಮಾತನಾಡಿಕೊಂಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪರ್ಯಾಯವಾಗಿ ರೂಪುಗೊಳ್ಳಲಿರುವ ರಾಜಕೀಯ ವ್ಯವಸ್ಥೆ ಹೇಗಿರುತ್ತದೆ? ಅದರ ಧ್ಯೇಯೋದ್ದೇಶಗಳೇನು? ಯಾವ ದಿಕ್ಕಿನಲ್ಲಿ ಕೆಲಸ ಮಾಡಬೇಕು? ಎಂಬ ಮಾಹಿತಿಯನ್ನು ಕೆಸಿಆರ್ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ.

ರಾಷ್ಟ್ರೀಯ ಪಕ್ಷ ಆರಂಭ ಕುರಿತು ಎಚ್‌ಡಿಕೆ, ಕೆಸಿಆರ್‌ ಚರ್ಚೆರಾಷ್ಟ್ರೀಯ ಪಕ್ಷ ಆರಂಭ ಕುರಿತು ಎಚ್‌ಡಿಕೆ, ಕೆಸಿಆರ್‌ ಚರ್ಚೆ

ದೇಶದಲ್ಲಿ ಕೃಷಿ, ಕೈಗಾರಿಕೆಗೆ ಮಾರಕ ವಾತಾವರಣ

ದೇಶದಲ್ಲಿ ಕೃಷಿ, ಕೈಗಾರಿಕೆಗೆ ಮಾರಕ ವಾತಾವರಣ

ದೇಶದಲ್ಲಿರುವ ಆರು ಪ್ರಮುಖ ನಗರಗಳಲ್ಲಿ ಮೂಲಸೌಕರ್ಯ ಕೊರತೆಯಿಂದ ಇಡೀ ದೇಶಕ್ಕೆ ಹಿನ್ನಡೆ ಉಂಟಾಗಿದೆ. ದಿನೇ ದಿನೆ ನಿರುದ್ಯೋಗ ಹೆಚ್ಚಾಗುತ್ತಿದೆ. ಕೃಷಿ, ಕೈಗಾರಿಕೆಗೆ ಮಾರಕವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಇದೆಲ್ಲವನ್ನು ಸರಿ ಮಾಡುವುದರ ಜತೆಗೆ, ದೇಶದ ಉದ್ದಗಲಕ್ಕೂ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿಯೂ ಹೊಸ ರಾಜಕೀಯವು ನಿರ್ಣಾಯಕ ಪಾತ್ರ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಇಂದಿನ ಭೇಟಿಯಲ್ಲಿ ಚರ್ಚೆ ಆಗಿದೆ.

ಬಿಜೆಪಿ ಆಡಳಿತ ಬಗ್ಗೆ ಮಹತ್ವದ ಚರ್ಚೆ

ಬಿಜೆಪಿ ಆಡಳಿತ ಬಗ್ಗೆ ಮಹತ್ವದ ಚರ್ಚೆ

ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಉಂಟಾಗಿರುವ ಪರಿಸ್ಥಿತಿಗಳು ಹಾಗೂ ಸಾಮಾನ್ಯ ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ವಿಚಾರ ವಿನಿಮಯವಾಗಿವೆ. ಬಿಜೆಪಿ ಪಕ್ಷದ ಅಪಾಯಕಾರಿ ರಾಜಕಾರಣ ಮಾಡುತ್ತಿದೆ ಎಂದು ಇಬ್ಬರು ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಕೆಸಿಆರ್‌ ಭೇಟಿಗೆಂದು ಕುಮಾರಸ್ವಾಮಿ ಅವರು ಶನಿವಾರ ರಾತ್ರಿಯೇ ಹೈದರಾಬಾದ್ ತಲುಪಿದ್ದರು. ಅಂದು ತೆಲಂಗಾಣದ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಕುಮಾರಸ್ವಾಮಿಯನ್ನು ಸ್ವಾಗತಿಸಿದ್ದಾರೆ. ಇದು ಕರ್ನಾಟಕ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ. ಈ ಭೇಟಿಯ ವೇಳೆ ತೆಲಂಗಾಣ ರಾಜ್ಯದ ಸಚಿವರಾದ ಪ್ರಶಾಂತ ರೆಡ್ಡಿ, ಪಲ್ಲಾ ರಾಜೇಶ್ವರ ರೆಡ್ಡಿ, ಮಧುಸೂಧನಾಚಾರಿ ಸೇರಿದಂತೆ ಟಿಆರ್‌ ಎಸ್‌ ಪಕ್ಷದ ನಾಯಕರು ಉಪಸ್ಥಿತರಿದ್ದರು.

ಸಿಎಂ ಭೇಟಿಗೂ ಮುನ್ನ ಕೆಟಿಆರ್ ಜತೆ ಎಚ್‌ಡಿಕೆ ಚರ್ಚೆ

ಸಿಎಂ ಭೇಟಿಗೂ ಮುನ್ನ ಕೆಟಿಆರ್ ಜತೆ ಎಚ್‌ಡಿಕೆ ಚರ್ಚೆ

ತಲಂಗಾಣದ ಮುಖ್ಯಮಂತ್ರಿ ಬೇಟಿಗೂ ಮುನ್ನ ಕುಮಾರಸ್ವಾಮಿ ಅವರು ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್ (ಕೆಟಿಆರ್) ಅವರೊಂದಿಗೆ ಮಾತುಕತೆ ನಡೆಸಿದರು. ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು.

English summary
Karnataka former CM HD Kumaraswamy and Telangana CM K Chandrashekar rao 3 hours meeting at Hyderabad on Sunday. increased curiosity in Karnataka and Telangana states Political.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X