ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿಗೆ ಮತ ಹಾಕ್ತೀರಿ : ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಆಕ್ರೋಶ

|
Google Oneindia Kannada News

Recommended Video

ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಆಕ್ರೋಶ | Oneindia Kannada

ಬೆಂಗಳೂರು, ಜೂನ್ 26 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 'ನರೇಂದ್ರ ಮೋದಿಗೆ ವೋಟ್ ಹಾಕ್ತೀರಿ. ಸಮಸ್ಯೆ ನಾನು ಬಗೆಹರಿಸಬೇಕಾ?' ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಮುಖ್ಯಮಂತ್ರಿಗಳು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ರಾಯಚೂರಿನಿಂದ ಕರೇಗುಡ್ಡಕ್ಕೆ ಸರ್ಕಾರಿ ಬಸ್‌ನಲ್ಲಿ ತೆರಳುವಾಗ ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ಬಸ್ ಅಡ್ಡಗಟ್ಟಿದರು, ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ಮುಂದಾದರು.

ರಾಯಚೂರಲ್ಲಿ ಗ್ರಾಮ ವಾಸ್ತವ್ಯ, ಕುಮಾರಸ್ವಾಮಿ ಕಾರ್ಯಕ್ರಮಗಳುರಾಯಚೂರಲ್ಲಿ ಗ್ರಾಮ ವಾಸ್ತವ್ಯ, ಕುಮಾರಸ್ವಾಮಿ ಕಾರ್ಯಕ್ರಮಗಳು

ಇದರಿಂದಾಗಿ ಕಾರ್ಮಿಕರ ವಿರುದ್ಧ ಕುಮಾರಸ್ವಾಮಿ ಅವರು ಕೋಪಗೊಂಡರು. 'ನರೇಂದ್ರ ಮೋದಿಗೆ ವೋಟ್ ಹಾಕ್ತೀರಿ. ಸಮಸ್ಯೆ ನಾನು ಬಗೆಹರಿಸಬೇಕಾ?' ಎಂದು ಪ್ರಶ್ನೆ ಮಾಡಿದರು. ಈ ವಿಚಾರ ಈಗ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಹಲವು ಬಿಜೆಪಿ ನಾಯರಕು ಮುಖ್ಯಮಂತ್ರಿಗಳ ಹೇಳಿಕೆ ಖಂಡಿಸಿದರು.

ಶಿವನಗೌಡರಿಂದ ನಮ್ಮ ಕುಟುಂಬ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿಶಿವನಗೌಡರಿಂದ ನಮ್ಮ ಕುಟುಂಬ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಕುಮಾರಸ್ವಾಮಿ

ಕರ್ನಾಟಕದ ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸಿದ್ದಾರೆ. 'ಯಾವುದೇ ಕಾರಣಕ್ಕೂ ನನ್ನ ಹೇಳಿಕೆಯನ್ನು ವಾಪಸ್ ಪಡೆಯುವುದಿಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು......

ಗ್ರಾಮ ವಾಸ್ತವ್ಯ: ಯಾದಗಿರಿ ಜಿಲ್ಲೆಗೆ ಕುಮಾರಸ್ವಾಮಿ ಕೊಟ್ಟಿದ್ದು ಏನೇನು?ಗ್ರಾಮ ವಾಸ್ತವ್ಯ: ಯಾದಗಿರಿ ಜಿಲ್ಲೆಗೆ ಕುಮಾರಸ್ವಾಮಿ ಕೊಟ್ಟಿದ್ದು ಏನೇನು?

ಸಂಯಮ ಕಳೆದುಕೊಳ್ಳುತ್ತಿರುವುದು

ಸಂಯಮ ಕಳೆದುಕೊಳ್ಳುತ್ತಿರುವುದು

ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ, 'ಮುಖ್ಯಮಂತ್ರಿಗಳು ಈ ರೀತಿ ಸಂಯಮ ಕಳೆದುಕೊಳ್ಳುತ್ತಿರುವುದು ಇದು ಮೊದಲನೇ ಬಾರಿ ಏನೂ ಅಲ್ಲ. ಯಾವಾಗಲೂ ಅವರಿಗೆ ಜನರೆಂದರೆ ಅದರಲ್ಲೂ ಉತ್ತರ ಕರ್ನಾಟಕದ ಜನತೆ ಎಂದರೆ ಆಗುವುದಿಲ್ಲ. ಅವರ ಗ್ರಾಮ ವಾಸ್ತವ್ಯ ಬೂಟಾಟಿಕೆ ಎಂದು ಮತ್ತೆ ಬಿಂಬಿಸಿದ್ದಾರೆ' ಎಂದು ಆರೋಪ ಮಾಡಿದ್ದಾರೆ.

ಕೊಳಕು ಮನಸ್ಸನ್ನು ಎತ್ತಿ ತೋರಿಸುತ್ತದೆ

ಕೊಳಕು ಮನಸ್ಸನ್ನು ಎತ್ತಿ ತೋರಿಸುತ್ತದೆ

ಮುಖ್ಯಮಂತ್ರಿಯವರು ಜನರ ಬಗ್ಗೆಇರುವ ಅದರಲ್ಲೂ ರಾಜ್ಯದಲ್ಲಿ ಬಿಜೆಪಿ ಗೆದ್ದ ಕಾರಣ ಸಂಯಮ ಕಳೆದುಕೊಳ್ಳುತ್ತಿರುವುದು ಅವರ ಕೊಳಕು ಮನಸ್ಸನ್ನು ಎತ್ತಿ ತೋರಿಸುತ್ತದೆ. ಮೋದಿಗೆ, ಬಿಜೆಪಿಗೆ ಮತ ಹಾಕಿದರು ಎಂಬ ಕಾರಣಕ್ಕೆ ಹಿಯಾಳಿಸಿ ಮಾತನಾಡುವುದು ಒಬ್ಬ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ಮಾಡಿದ ಅಪಮಾನ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಜನ ವಿರೋಧಿ ಕ್ರಮ

ಜನ ವಿರೋಧಿ ಕ್ರಮ

ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ನೀವು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನ ವಿರೋಧಿ ಕ್ರಮ. ಈ ರೀತಿ ದೌರ್ಜನ್ಯದಿಂದ ಕೂಡಿದ ನಿಮ್ಮ ಗ್ರಾಮ ವಾಸ್ತವ್ಯವನ್ನು ಜನ ಸಹಿಸುವುದಿಲ್ಲ. ನಿಮ್ಮ ವರ್ತನೆ ಕೂಡ ದೌರ್ಜನ್ಯದಿಂದ ಕೂಡಿದೆ ಎಂದು ಬಿಜೆಪಿ ಆರೋಪಿಸಿದೆ.

ಗ್ರಾಮ ವಾಸ್ತವ್ಯಕ್ಕೆ ಧಿಕ್ಕಾರ

ಗ್ರಾಮ ವಾಸ್ತವ್ಯಕ್ಕೆ ಧಿಕ್ಕಾರ

ಇದೇ ರೀತಿ ನೀವು ಜನರ ಮೇಲೆ ಮಾನಸಿಕ ದೌರ್ಜನ್ಯ ಮುಂದುವರೆಸಿದರೆ ಬಿಜೆಪಿ ಸಹಿಸುವುದಿಲ್ಲ ಮತ್ತು ನಾವು ರಾಜ್ಯ ವ್ಯಾಪಿ ಆಂದೋಲನ ಹಮ್ಮಿಕೊಳ್ಳುತ್ತೇವೆ. ಸಮಯದ ಬಂದರೆ ನಿಮ್ಮ ಗ್ರಾಮ ವಾಸ್ತವ್ಯವೂ ನಡೆಯದಂತೆ ನೋಡಿಕೊಳ್ಳುತ್ತೇವೆ. ಜನ ವಿರೋಧಿ ಗ್ರಾಮ ವಾಸ್ತವ್ಯಕ್ಕೆ ನಮ್ಮ ಧಿಕ್ಕಾರ ಎಂದು ಬಿಜೆಪಿ ಹೇಳಿದೆ.

English summary
Karnataka Chief Minister H.D.Kumaraswamy argued with protestors on the way of Karegudda village of Manvi taluk, Raichur and tell them to ask Narendra Modi. Karnataka BJP president B.S.Yeddyurappa upset with Chief Minister comment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X