ಭೀಕರ ಅಪಘಾತ; ಸಂತಾಪ ಸೂಚಿಸಿ, ದೋಷಪೂರಿತ ಪಾರ್ಕಿಂಗ್ ಬಗ್ಗೆ ದನಿ ಎತ್ತಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು, ಜೂನ್. 28: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬಳಿಕ ಭೀಕರ ರಸ್ತೆ ಅಪಘಾತ ನಡೆದಿದ್ದು, 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ಕಂಡು ಕರುನಾಡು ಸ್ತಬ್ಧವಾಗಿದೆ. ಇದೇ ವೇಳೆ ರಾಷ್ಟರೀಯ ಹೆದ್ದಾರಿಗಳಲ್ಲಿ ದೋಷಪೂರಿತ ಪಾರ್ಕಿಂಗ್ ಬಗ್ಗೆ ಚರ್ಚೆ ಶುರುವಾಗಿದೆ.

ಜೂನ್. 28ರ ಬೆಳಗ್ಗೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ 17 ಜನ ಪ್ರಯಾಣ ಮಾಡುತ್ತಿದ್ದ ಟಿಟಿ ವಾಹನ ಹಿಂದಿನಿಂದ ಗುದ್ದಿದೆ. ಇದರ ಪರಿಣಾಮವಾಗಿ ಏಳು ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತರು ಸವದತ್ತಿ ರಲ್ಲಮ್ಮನ ದರ್ಶನಕ್ಕೆ ತೆರಳಿದ್ದರು ಎಂದು ವರದಿಯಾಗಿದೆ. ಮೃತರು ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪವಿರುವ ಎಮ್ಮೆಹಟ್ಟಿ ಗ್ರಾಮದವರು.

HD Kumaraswamy Basavaraja Bommai condoled the Haveri road accident victims

ದೋಷಪೂರಿತ ಪಾರ್ಕಿಂಗ್ ಅಪಘಾತಕ್ಕೆ ಕಾರಣ

ಘಟನೆ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, "ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ. ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ" ಎಂದಿದ್ದಾರೆ.

"ಮೃತಪಟ್ಟ ಎಲ್ಲರ ಆತ್ಮಕ್ಕೂ ಚಿರಶಾಂತಿ ಸಿಗಲಿ ಹಾಗೂ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ರಾಜ್ಯ ಸರಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಲಾರಿ ಚಾಲಕನ ದೋಷಪೂರಿತ ಪಾರ್ಕಿಂಗ್ ಅಪಘಾತಕ್ಕೆ ಕಾರಣ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಬಗ್ಗೆ ತೋರುವ ನಿರ್ಲಕ್ಷ್ಯ ಜೀವಕ್ಕೆ ಎರವಾಗುತ್ತಿರುವುದು ನೋವಿನ ಸಂಗತಿ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿ" ಎಂದು ಆಗ್ರಹಿಸಿದ್ದಾರೆ.

ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿಯ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಕೂಡ ಘಟನೆಗೆ ಸಂತಾಪ ಸೂಚಿಸಿದ್ದಾರೆ. "ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ" ಎಂದಿದ್ದಾರೆ.

"ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಮೃತರನ್ನು ಸುಭದ್ರಾ ಬಾಯಿ (65 ವರ್ಷ), ಪರಶುರಾಮ (45 ವರ್ಷ), ಭಾಗ್ಯ (40 ವರ್ಷ), ನಾಗೇಶ್ (50 ವರ್ಷ), ವಿಶಾಲಾಕ್ಷಿ (40 ವರ್ಷ), ಅರ್ಪಿತಾ (18 ವರ್ಷ), (ಪುಣ್ಯ 50 ವರ್ಷ), ಮಂಜುಳಾ ಬಾಯಿ (62 ವರ್ಷ), ಆದರ್ಶ (23 ವರ್ಷ), ಮಾನಸ (24 ವರ್ಷ), ರೂಪಾ (40 ವರ್ಷ), ಮಂಜುಳಾ (50 ವರ್ಷ) ಎಂದು ಗುರುತಿಸಲಾಗಿದೆ. ಇನ್ನೂ ಅರ್ಪಿತಾ, ಅರುಣಾ, ಅನ್ನಪೂರ್ಣ ಎನ್ನುವ ಮೂವರು ಗಾಯಾಳುಗಳ ಚಿಕಿತ್ಸೆ ಪಡೆಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+