HD Kumaraswamy Birthday: ಹೆಚ್.ಡಿ. ಕುಮಾರಸ್ವಾಮಿ 65 ನೇ ಜನ್ಮದಿನ: ಮೋದಿ ಶುಭ ಹಾರೈಸಿದ್ದು ಹೀಗೆ

ಬೆಂಗಳೂರು, ಡಿಸೆಂಬರ್‌ 16: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಇಂದು(ಸೋಮವಾರ) 65 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಅನುಭವಿ ರಾಜಕಾರಣಿ ಆಗಿರುವ ಅವರು ಸಕ್ರಿಯವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ.

HD Kumaraswamy celebrates 65th birthday BJP Leaders wishes

ದೇಶದ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವರು ಕೊಡುಗೆ ನೀಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆರೋಗ್ಯಕರ ಜೀವನ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ

ಇನ್ನೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಸಹ ಶುಭಕೋರಿದ್ದು, ನನ್ನ ಪುತ್ರ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶಯಗಳು ಎಂದು ತಿಳಿಸಿದ್ದಾರೆ. ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ.

ಜನತೆಯ ಹಿತಕ್ಕಾಗಿ ನಿಮ್ಮ ನಿಸ್ವಾರ್ಥ ಜನಸೇವೆ ಮುಂದುವರೆಸಿ. ಜನರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ. ಭಗವಂತನ ದಯೆಯಿಂದ ಜನರು ನೀಡುವ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಮಾಡಿಕೊಂಡು ಸಮಾಜಕ್ಕೆ ಅಂಕಿತರಾಗಿ ದುಡಿಮೆ ಮಾಡಿ. ಆರೋಗ್ಯವನ್ನು ಕಾಪಾಡಿಕೊಂಡು ಜನತೆಯ ಆಶೋತ್ತರಳಿಗೆ ಸ್ಪಂದಿಸಿ ಎಂದು ಹೆಚ್‌ ಡಿ ದೇವೇಗೌಡ್ರು ಹೇಳಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆ‌ರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ 'ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಸಿದ್ದಾರೆ.

ಶುಭ ಹಾರೈಸಿದ ಬಸವರಾಜ ಬೊಮ್ಮಾಯಿ

ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಆತ್ಮೀಯರಾದ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿ ಹಾಗೂ ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಹೆಚ್ಚಿನ ಆಯುರ್ ಆರೋಗ್ಯ ದೊರಕಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಆತ್ಮೀಯರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ಇನ್ನೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್‌ ‌ಅವರು ಶುಭ ಹಾರೈಸಿದ್ದು, ಆತ್ಮೀಯರು, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಇನ್ನೂ ಹೆಚ್ಚಿನ ಜನಸೇವೆ ಮಾಡಲು ದೇವರು ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+