HD Kumaraswamy: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರ, ಜೂನ್‌ 12: ರಾಜ್ಯ ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರವನ್ನ ನಡೆಸುತ್ತಿದ್ದು, ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಲಿದೆ ಎನ್ನುವ ಚರ್ಚೆ ಜೋರಾಗಿದ್ದು, ಈ ವದಂತಿಗೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.

ಈ ಕುರಿತು ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರವೂ ಕೇವಲ ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 HD Kumaraswamy Clarified About JDS Alliance

ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ.ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ನೇರವಾಗಿ ಹೇಳಿದರು.

ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ. ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ? ಎಂದು ಸಂಸದ ಡಿ.ಕೆ.ಸುರೇಶ್ ಹೆಸರು ಪ್ರಸ್ತಾಪಿಸದೇ ಕುಮಾರಸ್ವಾಮಿ ಟಾಂಗ್ ನೀಡಿದರು.

ಇನ್ನೂ ಗ್ಯಾರಂಟಿಗಳ ಬಗ್ಗೆ ಗೊಂದಲ ವಿಚಾರವಾಗಿ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವ ರೀತಿ ನಿಬಾಯಿಸುತ್ತಾರೆ ನೋಡಬೇಕು ಎಂದರು.

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಪ್ರಶ್ನಿಸಿದರು.

ಕಳೆದ ಮೇ 8 ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+