ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರ್ಕಾರದ ಬಗ್ಗೆ ಎಚ್‌ಡಿಕೆ ಹೇಳಿಕೆ; ಯಾರು, ಏನಂದರು?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 29 : "ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ" ಎಂಬ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟು ಹಾಕಿದೆ. ವಿವಿಧ ನಾಯಕರು ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಉಪ ಚುನಾವಣೆ ಬಳಿಕ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಕೈ ಜೋಡಿಸಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕುಮಾರಸ್ವಾಮಿ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಹೇಳಿಕೆ ಈಗ ಜಾತಿ ಬಣ್ಣವನ್ನು ಪಡೆದಿದೆ.

ಕುಮಾರಸ್ವಾಮಿ ಇಂದ ಏನು ನಿರೀಕ್ಷಿಸಲು ಸಾಧ್ಯ; ಸಿದ್ದರಾಮಯ್ಯಕುಮಾರಸ್ವಾಮಿ ಇಂದ ಏನು ನಿರೀಕ್ಷಿಸಲು ಸಾಧ್ಯ; ಸಿದ್ದರಾಮಯ್ಯ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಎಚ್. ಡಿ. ಕುಮಾರಸ್ವಾಮಿ ನಡುವೆ ಈ ಹೇಳಿಕೆಗೆ ಬಗ್ಗೆ ವಾಕ್ಸಮರ ನಡೆಯುತ್ತಿದೆ. ಬಿಜೆಪಿಗೆ ಉಪ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ನೀಡಲಿದೆಯೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

'ಕೇಡು ಬಯಸಿದ್ದು ಯಾರು?' ಸಿದ್ದರಾಮಯ್ಯ-ಕುಮಾರಸ್ವಾಮಿ ವಾರು ಜೋರು!'ಕೇಡು ಬಯಸಿದ್ದು ಯಾರು?' ಸಿದ್ದರಾಮಯ್ಯ-ಕುಮಾರಸ್ವಾಮಿ ವಾರು ಜೋರು!

ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯ ರಾಜಕೀಯದಲ್ಲಿ ಬಿಸಿ-ಬಿಸಿ ಚರ್ಚೆಗೆ ಕಾರಣವಾಗಿರುವ ಹೇಳಿಕೆ ಬಗ್ಗೆ ಯಾರು, ಏನು ಹೇಳಿದರು?.

ಜೈಲಿಂದ ಹೆಬ್ಬಂಡೆಯಾಗಿ ಬಂದ ಡಿಕೆಶಿ, ಬಿಜೆಪಿ ನಾಯಕರಿಗೆ ತಪರಾಕಿ!ಜೈಲಿಂದ ಹೆಬ್ಬಂಡೆಯಾಗಿ ಬಂದ ಡಿಕೆಶಿ, ಬಿಜೆಪಿ ನಾಯಕರಿಗೆ ತಪರಾಕಿ!

ಎಚ್. ಡಿ. ಕುಮಾರಸ್ವಾಮಿ ಹೇಳಿಕೆ

ಎಚ್. ಡಿ. ಕುಮಾರಸ್ವಾಮಿ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, "ಉಪ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುವ ಸನ್ನಿವೇಶ ಎದುರಾದರೆ ಅಂತಹ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ತೀರ್ಮಾನಿಸಲಾಗುತ್ತದೆ" ಎಂದು ಹೇಳಿದ್ದು ಚರ್ಚೆಗೆ ಕಾರಣವಾಗಿದೆ.

ಸಿದ್ದರಾಮಯ್ಯ ಹೇಳಿಕೆ

ಸಿದ್ದರಾಮಯ್ಯ ಹೇಳಿಕೆ

"2006ರಲ್ಲಿ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದರು. ಹೀಗಾಗಿ ಅವರಿಂದ ಬೇರೆ ಏನು ನಿರೀಕ್ಷೆ ಮಾಡಲು ಸಾಧ್ಯ. ಕುಮಾರಸ್ವಾಮಿ ಹೇಳಿಕೆ ನೋಡಿದರೆ ಅವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಅನ್ನಿಸುತ್ತಿದೆ. ನಾನು ಬಿಜೆಪಿ ಸರ್ಕಾರವನ್ನು ಉಳಿಸುವೆ ಎಂದರೆ ಏನರ್ಥ?" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಯಡಿಯೂರಪ್ಪ ಪ್ರತಿಕ್ರಿಯೆ

ಯಡಿಯೂರಪ್ಪ ಪ್ರತಿಕ್ರಿಯೆ

ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, "ಉತ್ತಮ ಕೆಲಸ ಮಾಡುತ್ತಿರುವ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬಾರದು ಎಂದ ಕಾರಣಕ್ಕೆ ಹೀಗೆ ಹೇಳಿರಬಹುದು. ನಮ್ಮನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಕುಮಾರಸ್ವಾಮಿಗೆ ಅಭಿನಂದನೆ" ಎಂದು ಹೇಳಿದರು.

ಒದೊಂದು ರೀತಿ ಮಾತನಾಡುತ್ತಾರೆ

ಒದೊಂದು ರೀತಿ ಮಾತನಾಡುತ್ತಾರೆ

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಕುರಿತು ಹೇಳಿಕೆ ನೀಡಿದ್ದು, "ಕುಮಾರಸ್ವಾಮಿ ಹೇಳಿಕೆ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ. ಒದೊಂದು ಬಾರಿ ಒದೊಂದು ರೀತಿ ಮಾತನಾಡುತ್ತಾರೆ. ಆದರೆ, ಸರ್ಕಾರ ಜನಪರ ಕೆಲಸ ಮಾಡುತ್ತಿದೆಯೇ? ಎನ್ನುವುದು ನಮಗೆ ಮುಖ್ಯ" ಎಂದು ಹೇಳಿದರು.

ಕಾಂಗ್ರೆಸ್ ನಿಜಬಣ್ಣ ಗೊತ್ತಾಗಿದೆ

ಕಾಂಗ್ರೆಸ್ ನಿಜಬಣ್ಣ ಗೊತ್ತಾಗಿದೆ

ಕಂದಾಯ ಸಚಿವ ಆರ್. ಅಶೋಕ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. "ದೋಸ್ತಿ ಸರ್ಕಾರ ಇದ್ದಾಗ ನಾನು ವಿಷಕಂಠನಾಗಿದ್ದೆ. ಎಲ್ಲಾ ಕಾಟ ಸಹಿಸಿಕೊಂಡೆ ಎಂದು ಕುಮಾರಸ್ವಾಮಿ ಹೇಳಿದ್ದರು. ಆದರೆ, ಈಗ ಅವರಿಗೆ ಕಾಂಗ್ರೆಸ್ ನಿಜ ಬಣ್ಣ ಗೊತ್ತಾಗಿದೆ. ಹೀಗಾಗಿ ಬಿಜೆಪಿಗೆ ಬೆಂಬಲ ಕೊಡುವೆ ಎಂದು ಹೇಳಿರಬಹುದು" ಎಂದರು.

English summary
Many leaders reacted for H.D.Kumaraswamy comment on BJP government. Who said what?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X