ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕೊರೊನಾ ಸಂಕಷ್ಟದಲ್ಲಿ ಜನರ ಹಿತ ಬದಿಗಿಟ್ಟು ಶಾಸಕ ಹಿತ ಕಾಪಾಡಿದ ಸರ್ಕಾರ'

|
Google Oneindia Kannada News

ಬೆಂಗಳೂರು, ಜುಲೈ 27: ಇಡೀ ರಾಜ್ಯ ಕೊರೊನಾ ವೈರಸ್‌ ಸಂಕಷ್ಟದಿಂದ ಕಷ್ಟ ಅನುಭವಿಸುತ್ತಿದ್ದರೆ, ಯಡಿಯೂರಪ್ಪ ಮಾತ್ರ ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಅಧಿಕಾರ ಉಳಿಸಿಕೊಳ್ಳುವ ಹೋರಾಟ ಮುಂದುವರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

Recommended Video

Karnataka Government ಒಂದು ವರ್ಷದ ಸಾಧನೆ ಕುರಿತ ಪುಸ್ತಕ ಬಿಡಗಡೆ | Oneindia Kannada

ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 24 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲು ಸೋಮವಾರ ಆದೇಶ ಮಾಡಿದ್ದರು.

ಸರ್ಕಾರಕ್ಕೆ ಒಂದು ವರ್ಷ; ಶಾಸಕರಿಗೆ ಕೊಡುಗೆ ಕೊಟ್ಟ ಬಿಎಸ್‌ವೈಸರ್ಕಾರಕ್ಕೆ ಒಂದು ವರ್ಷ; ಶಾಸಕರಿಗೆ ಕೊಡುಗೆ ಕೊಟ್ಟ ಬಿಎಸ್‌ವೈ

ಕೆಎಸ್ಆರ್‌ಟಿಸಿ, ಗೃಹ ಮಂಡಳಿ, ಎಂಎಸ್‌ಐಎಲ್ ಸೇರಿದಂತೆ ಪ್ರಮುಖ ನಿಗಮ/ಮಂಡಳಿಗಳಿಗೆ ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡಿರುವ ಬಗ್ಗೆ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...

ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟ ಸರ್ಕಾರ

ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟ ಸರ್ಕಾರ

'ಕೊರೊನಾ ಸಂಕಷ್ಟ ಸಮಯದಲ್ಲಿ ಬದುಕಿಗಾಗಿ ಜನತೆ ಹೋರಾಟ ಮಾಡುತ್ತಿದ್ದರೆ, ವರ್ಷಾಚರಣೆಯ ಸಂಭ್ರಮದಲ್ಲೂ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿನಲ್ಲಿ ತನ್ಮಯವಾಗಿರುವ ಬಿಜೆಪಿ ಸರ್ಕಾರ 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಉಡುಗೊರೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಕೊಳ್ಳಿ ಇಟ್ಟಿದೆ' ಎಂದು ದೂರಿದ್ದಾರೆ.

ಶಾಸಕರಿಗೆ ಉಡುಗೊರೆ, ಜನತೆಗೆ ಬರೆ

ಶಾಸಕರಿಗೆ ಉಡುಗೊರೆ, ಜನತೆಗೆ ಬರೆ

'ಸರ್ಕಾರ ಮಾತ್ರವಲ್ಲ, ಜನತೆಯು ಕೂಡ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವಾಗ ಬೊಕ್ಕಸ ಹಾಗೂ ಜನಸಾಮಾನ್ಯನ ಮೇಲೆ ಹೊರೆ ಹೇರುವ ಮೂಲಕ 'ಶಾಸಕರಿಗೆ ಉಡುಗೊರೆ, ಜನತೆಗೆ ಬರೆ' ಎಳೆಯುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಲಜ್ಜ ನಡವಳಿಕೆಯನ್ನು ಖಂಡಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜನರ ಹಿತ ಮುಖ್ಯವೋ, ಶಾಸಕ ಹಿತ ಮುಖ್ಯವೋ

ಜನರ ಹಿತ ಮುಖ್ಯವೋ, ಶಾಸಕ ಹಿತ ಮುಖ್ಯವೋ

'ಬಿಜೆಪಿ ಸರ್ಕಾರಕ್ಕೆ ಸಾಮಾನ್ಯರ ಹಿತ ಮುಖ್ಯವೋ? ಕುರ್ಚಿ ಉಳಿಸಿಕೊಳ್ಳಲು ಶಾಸಕರ ಹಿತ ಮುಖ್ಯವೋ? ರಾಜ್ಯದ ಜನತೆಗೆ ಉಡುಗೊರೆ ಕೊಡಬೇಕಾಗಿದ್ದ ಸರ್ಕಾರ ಶಾಸಕರ ತೃಪ್ತಿಪಡಿಸುವ ಅನಾಚಾರ ಪ್ರದರ್ಶಿಸಿದೆ. ರಾಜ್ಯ ಎದುರಿಸುತ್ತಿರುವ ಇಂತಹ ಸಂಕಷ್ಟದ ಸಮಯದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಗಾದಿಯ ಮೇಲೆ ಸವಾರಿ ಮಾಡುವುದು ವಿಹಿತವೇ ಎಂಬುದನ್ನು ಶಾಸಕರು ಆತ್ಮಸಾಕ್ಷಿಗೆ ಪ್ರಶ್ನೆ ಮಾಡಿಕೊಳ್ಳಿ' ಎಂದು ಟೀಕಿಸಿದ್ದಾರೆ.

ನುಡಿವವರ ಮಾತ ಕೇಳಲಾಗದು ಗುಹೇಶ್ವರಾ

ನುಡಿವವರ ಮಾತ ಕೇಳಲಾಗದು ಗುಹೇಶ್ವರಾ

'ಹಗಲನಿರುಳು ಮಾಡಿ, ಇರುಳ ಹಗಲ ಮಾಡಿ

ಆಚಾರವ ಅನಾಚಾರವ ಮಾಡಿ

ಅನಾಚಾರವ ಆಚಾರವ ಮಾಡಿ

ಭಕ್ತನ ಭವಿಯ ಮಾಡಿ, ಭವಿಯ ಭಕ್ತನ ಮಾಡಿ

ನುಡಿವವರ ಮಾತ ಕೇಳಲಾಗದು ಗುಹೇಶ್ವರಾ' ಎಂಬ ವಚನದ ಮೂಲಕ ಸರ್ಕಾರದ ನಡೆಯನ್ನು ಕುಮಾರಸ್ವಾಮಿ ವಿರೋಧಿಸಿದ್ದಾರೆ.

English summary
Karnataka govt has appoints 24 MLAs as chairpersons of various boards and corporations. but, HD Kumaraswamy condemns the appointment of corporation board chairman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X