ವಿಜಯ್ ರಾಘವೇಂದ್ರ ಪತ್ನಿ ನಿಧನ; ಕೋವಿಡ್ ನಂತರ ಹೃದಯಾಘಾತ ಹೆಚ್ಚಾಗುತ್ತಿವೆ ಎಂದ ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 07: ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲು ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದವರಿಗೆ ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದರು ನಿರೀಕ್ಷೆ ಮಾಡಿರಲಿಲ್ಲ, ಇದೊಂದ ಆಘಾತಕಾರಿ ಘಟನೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಇದರ ಮೂಲಕ ಹಿನ್ನಲೆ ಕೊವಿಡ್ ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗುತ್ತಿದೆ. ಪ್ರತಿಯೊಬ್ಬರು ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಎಚ್ಚರವಹಿಸಬೇಕು.
ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು. ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಅ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಅ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications