ಸದನದಲ್ಲಿ ಸದ್ದು ಮಾಡಲಿದೆಯಾ ಹೆಚ್ ಡಿ ಕುಮಾರಸ್ವಾಮಿ ಆಡಿಯೋ ಬಾಂಬ್ !? ರಾಜ್ಯ ಸರ್ಕಾರಕ್ಕೆ ಶಾಕ್ ಕಾದಿದ್ಯಾ?
ಬೆಂಗಳೂರು, ಜುಲೈ 10: ವರ್ಗಾವಣೆ ಧಂದೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ಸಿಡಿದೆದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್‌ನಲ್ಲಿರುವ ಬಾಂಬ್ ನ್ನ ದಾಖಲೆ ಸಮೇತ ಬಿಡುಗಡೆ ಮಾಡುವುದಾಗಿ ಸರ್ಕಾರಕ್ಕೆ ಶಾಕ್ ನೀಡಿದ್ದು, ಇಂದು(ಸೋಮವಾರ) ಸದನದಲ್ಲಿ ಪೆನ್‌ಡ್ರೈವ್ ಬಾಂಬ್ ಸಿಡಿಸುತ್ತಾರಾ ಎಂಬ ಕುತೂಹಲ ಮೂಡಿದೆ.
ಹೌದು, ನನ್ನ ಬಳಿ ದಾಖಲೆ ಇದೆ. ನಾನು ದಾಖಲೆಯನ್ನ ಬಿಡುಗಡೆ ಮಾಡಿದ್ರೆ, ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವಾರು ತನ್ನ ಬಳಿ ಆಡಿಯೋ ಬಾಂಬ್ ಇದೆ ಎಂದು ಹೇಳಿದ್ದು, ಕುಮಾರಸ್ವಾಮಿ ಹೇಳಿಕೆಗೆ ಹಲವು ಸಚಿವರು ದಾಖಲೆಯನ್ನ ಬಿಡುಗಡೆ ಮಾಡಿ ಮಾತನಾಡಲಿ ಎಂದು ಸವಾಲು ಹಾಕಿದ್ರು. ಹೀಗಾಗಿ ಈ ಪೆನ್‌ಡ್ರೈವ್ ವಿಚಾರ ಇಂದು ಸದನದಲ್ಲಿ ಕೋಲಾಹಲ ಎಬ್ಬಿಸುವ ಸಾಧ್ಯತೆ ಇದೆ.

ತಮ್ಮಲ್ಲಿರುವ ದಾಖಲೆ ಇಂದು ಬಿಡುಗಡೆ ಮಾಡ್ತೀನಿ ಎಂದು ಕುಮಾರಸ್ವಾಮಿ ಹೇಳಿದ್ದರು. ಪೆನ್‌ಡ್ರೈವ್‌ನಲ್ಲಿ ಯಾವ ದಾಖಲೆ ಇದೆ ಎಂದು ಜೆಡಿಎಸ್ ಶಾಸಕರಿಗೂ ತಿಳಿದಿಲ್ಲ. ಕುಮಾರಸ್ವಾಮಿ ಹೇಳಿಕೆ ಪ್ರಕಾರ, ಇದರಲ್ಲಿ ವರ್ಗಾವಣೆ ದಂಧೆ ಕುರಿತು ಸಚಿವರ ಸಂಭಾಷಣೆ ಆಡಿಯೋ ಇದೆ ಎನ್ನಲಾಗ್ತಿದೆ. ಅಧಿಕಾರಿಗಳ ಟ್ರಾನ್ಸ್‌ಫರ್‌ಗೆ ಸಂಬಂಧಿಸಿದ ಆಡಿಯೋ ಈ ಪೆನ್‌ಡ್ರೈವ್ ನಲ್ಲಿಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಕುಮಾರಸ್ವಾಮಿ ರಾಜ್ಯದಲ್ಲಿ ಜಿಎಸ್‌ಟಿ ಜೊತೆ ವೈಎಸ್‌ಟಿ ಟ್ಯಾಕ್ಸ್ ಸಹ ಇದೆ ಎಂದು ಆರೋಪ ಮಾಡಿದ್ದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ದ ವರ್ಗಾವಣೆ ದಂಧೆ ಆರೋಪ ಮಾಡುತ್ತಿದ್ದಾರೆ.ಅದರ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿದೆ. ಸರ್ಕಾರ ಅಧಿಕಾರಿಗಳ ವರ್ಗಾವಣೆಗೆ ಹಣವನ್ನ ನಿಗದಿ ಮಾಡಿದ್ದು, ಇಂಧನ ಇಲಾಖೆಯಲ್ಲಿ ಬರೊಬ್ಬರಿ 10 ಕೋಟಿಗೆ ಅಧಿಕಾರಿಗಳ ವರ್ಗಾವಣೆಗೆಯಾಗಿದೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಈಗಾಗಲೇ ಕುಮಾರಸ್ವಾಮಿ ಮಾತಿಗೆ ಹಲವು ಜನ ಸಚಿವರು ದಾಖಲೆಯನ್ನ ಬಿಡುಗಡೆ ಮಾಡಿ ಮಾತನಾಡಲಿ ಎಂದು ಸವಾಲು ಹಾಕಿದ್ದು, ಇಂದೇ ಸದನದಲ್ಲಿ ಪೆನ್ ಡ್ರೈವ್ ಬಾಂಬ್ ಸಿಡಿಸುತ್ತಾರಾ? ಎನ್ನುವ ಚರ್ಚೆ ಜೋರಾಗಿದೆ. ಅಲ್ಲದೇ ರಾಜ್ಯಪಾಲ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರ ನೀಡಲಿದ್ದು, ಇದೇ ವೇಳೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಇತ್ತ ಕುಮಾರಸ್ವಾಮಿ ಅವರ ಆಡಿಯೋ ಬಾಂಬ್ ನಿಂದ ರಾಜ್ಯ ಸರ್ಕಾರಕ್ಕೆ ಶಾಕ್ ಕಾದಿದ್ಯಾ? ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇನ್ನೂ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ದ ವರ್ಗಾವಣೆ ದಂಧೆ ಆರೋಪಕ್ಕೆ ಈಗಾಗಲೇ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಾಥ್ ನೀಡಿದ್ದು, ಸದನದಲ್ಲಿ ಒಂದು ವೇಳೆ ದಾಖಲೆ ಬಿಡುಗಡೆ ಮಾಡಿದ್ರೆ ಬಿಜೆಪಿಯೂ ಸಹ ಕುಮಾರಸ್ವಾಮಿಗೆ ಬೆಂಬಲವನ್ನ ನೀಡುವ ಸಾಧ್ಯತೆ ಇದೆ. ಏಕೆಂದರೆ, ಅಧಿವೇಶನ ಪ್ರಾರಂಭವಾಗಿ ಒಂದು ವಾರ ಕಳೆದರು ವಿಪಕ್ಷ ನಾಯಕರ ಆಯ್ಕೆಯಾಗಿಲ್ಲ ಎಂದು ಕಾಂಗ್ರೆಸ್ ಟೀಕಿಸುತ್ತಿದ್ದು, ಕುಮಾರಸ್ವಾಮಿ ಮಾತಿಗೆ ಸಾಥ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೂ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು ಪೆನ್ ಡ್ರೈವ್‌ನಲ್ಲಿ ಆಡಿಯೋ ಇದೆ ಎಂದು ಹೇಳಿರುವ ಕುಮಾರಸ್ವಾಮಿ, ಈ ಆಡಿಯೋ ಬಿಡುಗಡೆ ಮಾಡಿದರೇ ಇಬ್ಬರು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಲಾಗಿದೆ.
ಒಟ್ನಲಿ ರಾಜ್ಯ ಸರ್ಕಾರದ ವಿರುದ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಡಿಯೋ ಬಾಂಬ್ ಸಿಡಿಸಿದ್ದು, ವರ್ಗಾವಣೆ ದಂಧೆ ಕುರಿತು ನಿಜಕ್ಕೂ ಕುಮಾರಸ್ವಾಮಿ ಅವರ ಬಳಿ ದಾಖಲೆಗಳು ಇವೆಯಾ? ಈ ದಾಖಲೆಗಳಿಂದ ಸರ್ಕಾರ ಶಾಕ್ ಗೆ ಒಳಗಾಗುತ್ತಾ ಎಂಬುದಕ್ಕೆ ಕುಮಾರಸ್ವಾಮಿ ಅವರ ದಾಖಲೆ ಬಿಡುಗಡೆಯ ನಂತರವೇ ಉತ್ತರ ಸಿಗಲಿದೆ ಎನ್ನಲಾಗಿದೆ.












Click it and Unblock the Notifications