ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಗ್ಯಾರಂಟಿ: ಭವಿಷ್ಯ ನುಡಿದ ಸಿದ್ದರಾಮಯ್ಯ

ಮೈಸೂರು, ಮಾರ್ಚ್‌ 28: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ ಗೆ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರವನ್ನ ಬಿಜೆಪಿ ಹೈಕಮಾಂಡ್‌ ಬಿಟ್ಟು ಕೊಟ್ಟಿದ್ದು, ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಸ್ಪರ್ಧೆಗೆ ರೆಡಿಯಾಗಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ಸೋಲುವುದು ಗ್ಯಾರಂಟಿ ಎಂದು ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೊಸ ಮುಖವಾದರೆ, ಕುಮಾರಸ್ವಾಮಿಯೂ ಹೊಸ ಮುಖ ಅಲ್ಲವೇ? ನಮ್ಮ ಅಭ್ಯರ್ಥಿ ಮಂಡ್ಯದವರು. ಕುಮಾರಸ್ವಾಮಿ ಹಾಸನದವರಲ್ಲವೇ ಎಂದು ಪ್ರಶ್ನಿಸಿದ್ದಾರೆ.

HD Kumaraswamy Defeat Guaranteed In Mandya Says CM Siddaramaiah

ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮಗನೇ ಸೋತಿಲ್ಲವೇ? ಮುಖ್ಯಮಂತ್ರಿ ಆಗಿದ್ದಾಗಲೇ ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಈಗ ಹೇಗೆ ಗೆಲ್ಲೋಕೆ ಆಗುತ್ತದೆ? ಕುಮಾರಸ್ವಾಮಿ ಸೋಲುವುದಂತು ಗ್ಯಾರಂಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವಿಷ್ಯ ನುಡಿದಿದ್ದಾರೆ.

ಕೋಲಾರ ಟಿಕೆಟ್‌ಗಾಗಿ ಫೈಪೋಟಿ ವಿಚಾರವಾಗಿ ಮಾತನಾಡಿ, ಕೋಲಾರದಲ್ಲಿ ಅಸಮಾಧಾನ ಇರುವುದು ಸತ್ಯ. ದಲಿತರ ಎಡಗೈ ಬದಲು ಬಲಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಈ ಬಗ್ಗೆ ನಾನು ಅವರ ಜೊತೆ ಮಾತನಾಡಿದ್ದೇನೆ. ಸಮಾಧಾನವಾಗಿ ಇರಿ ಅಂತ ಹೇಳಿದ್ದೇನೆ. ಏಕೆಂದರೆ ಕೋಲಾರಕ್ಕೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+