• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ಅತಿವೃಷ್ಟಿ, ಬರ ಪರಿಸ್ಥಿತಿಗೆ ನೆರವು: ಮೋದಿ ಭರವಸೆ

By Mahesh
|

ನವದೆಹಲಿ, ಸೆಪ್ಟೆಂಬರ್ 10: ಕೊಡಗು ಮತ್ತು ನೆರೆಯ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಕೂಡಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದ ಜನಪ್ರತಿನಿಧಿಗಳ ನಿಯೋಗದ ಜತೆ ಸಭೆಯಲ್ಲಿ ಮೋದಿ ಅವರು ಈ ರೀತಿ ಭರವಸೆ ನೀಡಿದರು.

ನೆರೆ-ಬರದಿಂದ ತತ್ತರಿಸಿದ ಕರ್ನಾಟಕ: 2ಸಾವಿರ ಕೋಟಿ ನೀಡಲು ಮೋದಿಗೆ ಮೊರೆ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗವು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟಿತು.

ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಕರ್ನಾಟಕ ಈಗ ಹೇಗಿದೆ? ವರದಿ

ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ 2000 ಕೋಟಿ ರೂ. ಗಳ ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮಾಡಿದ ಮನವಿಗೆ ಪ್ರಧಾನ ಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು.

 ಸತತ ಭಾರಿ ಮಳೆಯಿಂದಾಗಿ ಪ್ರವಾಹ

ಸತತ ಭಾರಿ ಮಳೆಯಿಂದಾಗಿ ಪ್ರವಾಹ

ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸತತ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಜನ-ಜಾನುವಾರುಗಳು ಜೀವ ಕಳೆದುಕೊಂಡಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಆಗಸ್ಟ್ 2 ನೇ ವಾರದಲ್ಲಿ ಕಳೆದ 118 ವರ್ಷಗಳಲ್ಲೇ ದಾಖಲೆ ಮಳೆ ಸುರಿದಿದ್ದರಿಂದ ಅಪಾರ ನಷ್ಟ ಸಂಭವಿಸಿದ್ದು, ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯಬೆಳೆಗಳಿಗೆ, ಮೂಲಸೌಕರ್ಯ, ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ.

 3705.87 ಕೋಟಿ ರೂ. ನಷ್ಟವಾಗಿದೆ

3705.87 ಕೋಟಿ ರೂ. ನಷ್ಟವಾಗಿದೆ

ಅತಿವೃಷ್ಟಿಯಿಂದಾಗಿ ಈ ಜಿಲ್ಲೆಗಳಲ್ಲಿ ಒಟ್ಟು 3705.87 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ 2000 ರೂಪಾಯಿಗಳ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ನಿಯೋಗದ ಇತರ ಸದಸ್ಯರೊಂದಿಗೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ

17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ

ಅಂತೆಯೇ ಕರ್ನಾಟಕದ ಒಳನಾಡಿನಲ್ಲಿ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಈ ಕುರಿತೂ ಸಹ ನಷ್ಟದ ಪ್ರಮಾಣ ಅಂದಾಜು ಮಾಡಲಾಗುತ್ತಿದ್ದು, ಈ ಕುರಿತು ನಾಳೆ ಸಂಪುಟ ಉಪಸಮಿತಿ ಸಭೆ ನಡೆಸಿ ಪ್ರಸ್ತಾವನೆಯನ್ನು ಅಂತಿಮಗೊಳಿಸಲಿದೆ. ಅದರಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ನಿಯೋಗವು ಪ್ರಧಾನಿಯವರಿಗೆ ಮಾಹಿತಿ ನೀಡಿತು.

ಮುಖ್ಯಮಂತ್ರಿ ಗಳೊಂದಿಗೆ ನಿಯೋಗ

ಮುಖ್ಯಮಂತ್ರಿ ಗಳೊಂದಿಗೆ ನಿಯೋಗ

ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಎಚ್.ಡಿ.ದೇವೇಗೌಡ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕಂದಾಯ ಸಚಿವ ಆರ್. ವಿ.ದೇಶಪಾಂಡೆ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿ ಗಳೊಂದಿಗೆ ನಿಯೋಗದಲ್ಲಿ ಇದ್ದರು.

ಕೊಡಗು ಮಹಾಮಳೆಯ ದುರಂತದ ನಂತರ ಕಾಲೂರಿನ ದುಸ್ಥಿತಿ ಇದು

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Chief Minister H D Kumaraswamy along with a delegation of elected representatives from Karnataka had meeting with Prime Minister Narendra Modi and seek funds for rehabilitation for the regions ravaged by floods.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more