ಬಿಎಸ್‌ವೈಗೆ ಭಯವಿಲ್ಲದಿದ್ದರೆ ಅಧಿವೇಶನ ಕರೆಯಬೇಕು; ಎಚ್‌ಡಿಕೆ
ಬೆಂಗಳೂರು, ಜೂನ್ 22; "ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ.
Recommended Video
ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ" ಎಂದು ಆರೋಪಿಸಿದ್ದಾರೆ.
"ನೀರಾವರಿ ಇಲಾಖೆಯ 20,000 ಕೋಟಿ ಯೋಜನೆಯಲ್ಲಿ 10% ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ" ಎಂದು ದೂರಿದ್ದಾರೆ.

"2 ಸಾವಿರ ಕೋಟಿ ಕಿಕ್ ಬ್ಯಾಕ್ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಯಡಿಯೂರಪ್ಪ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
₹2 ಸಾವಿರ ಕೋಟಿ ಕಿಕ್ ಬ್ಯಾಕ್ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ @BSYBJP ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು.
— H D Kumaraswamy (@hd_kumaraswamy) June 22, 2021
3/4
"ಕೋವಿಡ್ ಮತ್ತು ಬ್ಲಾಕ್ ಫಂಗಸ್ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು" ಎಂದು ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.












Click it and Unblock the Notifications