ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಎಸ್‌ವೈಗೆ ಭಯವಿಲ್ಲದಿದ್ದರೆ ಅಧಿವೇಶನ ಕರೆಯಬೇಕು; ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಜೂನ್ 22; "ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ.

Recommended Video

ಯಡಿಯೂರಪ್ಪಗೆ ಭಯ ಇಲ್ಲ ಅಂದ್ರೆ ಹೀಗೆ ಮಾಡ್ಲಿ ಎಂದ ಕುಮಾರಸ್ವಾಮಿ | Oneindia Kannada

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ" ಎಂದು ಆರೋಪಿಸಿದ್ದಾರೆ.

ವಚನದ ಮೂಲಕ ಬಿಜೆಪಿ ಕಚ್ಚಾಟ ಬಿಚ್ಚಿಟ್ಟ ಎಚ್. ಡಿ. ಕುಮಾರಸ್ವಾಮಿ ವಚನದ ಮೂಲಕ ಬಿಜೆಪಿ ಕಚ್ಚಾಟ ಬಿಚ್ಚಿಟ್ಟ ಎಚ್. ಡಿ. ಕುಮಾರಸ್ವಾಮಿ

"ನೀರಾವರಿ ಇಲಾಖೆಯ 20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ" ಎಂದು ದೂರಿದ್ದಾರೆ.

ಅಚ್ಚೇದಿನ್ ಈಗ ದುಸ್ವಪ್ನವಾಗಿ ಕಾಡುತ್ತಿದೆ; ಕುಮಾರಸ್ವಾಮಿ ಅಚ್ಚೇದಿನ್ ಈಗ ದುಸ್ವಪ್ನವಾಗಿ ಕಾಡುತ್ತಿದೆ; ಕುಮಾರಸ್ವಾಮಿ

HD Kumaraswamy Demand Yediyurappa To Call Assembly Session

"2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಯಡಿಯೂರಪ್ಪ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

"ಕೋವಿಡ್‌ ಮತ್ತು ಬ್ಲಾಕ್‌ ಫಂಗಸ್‌ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು" ಎಂದು ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

English summary
Former chief minister H. D. Kumaraswamy demand the chief minister B. S. Yediyurappa to call assembly session.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X