ರಾಮನಗರದಲ್ಲಿ ಅಪಘಾತದಲ್ಲಿ ಇಬ್ಬರು ಮಕ್ಕಳ ದುರ್ಮರಣ; ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ
ಬೆಂಗಳೂರು, ಆಗಸ್ಟ್ 10: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಮಕ್ಕಳಿಬ್ಬರು ಶಾಲೆ ಪಾಠ ಮುಗಿಸಿಕೊಂಡು ಮನೆಗೆ ನಡೆದುಕೊಂಡು ವಾಪಸ್ ಬರುವಾಗ ಅಪಘಾತದಿಂದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದು, ಕೆಲ ಮಕ್ಕಳು ಗಾಯಗೊಂಡಿದ್ದು, ಮೃತ ಮಕ್ಕಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಮಕ್ಕಳಿಬ್ಬರು ಶಾಲೆ ಪಾಠ ಮುಗಿಸಿಕೊಂಡು ಮನೆಗೆ ನಡೆದುಕೊಂಡು ವಾಪಸ್ ಬರುತ್ತಿದ್ದಾಗ ವೇಗವಾಗಿ ಚಲಿಸುತ್ತಿದ್ದ ಅಜಾಗರೂಕ ಸರಕು ವಾಹನದ ಅಪಘಾತಕ್ಕೆ ಸಿಲುಕಿ ದುರ್ಮರಣಕ್ಕೀಡಾಗಿರುವುದು ನನಗೆ ಅತೀವ ದುಃಖ, ಆಘಾತವನ್ನು ಉಂಟು ಮಾಡಿದೆ.

ಚಾಲಕನ ನಿರ್ಲಕ್ಷ್ಯದಿಂದಲೇ ಈ ದುರಂತ ಸಂಭವಿಸಿದೆ. ಜೀವ ಕಳೆದುಕೊಂಡ ರೋಹಿತ್(5), ಶಾಲಿನಿ(8) ಕಂದಮ್ಮಗಳಿಗೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ. ಮಕ್ಕಳ ಆತ್ಮಕ್ಕೆ ಚಿರಶಾಂತಿ ಸಿಗಲಿ, ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ. ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಾದ ಸುಚಿತ್, ಗೌತಮಿ, ಲೇಖನಾ ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ರಾಜ್ಯ ಸರಕಾರವು ಮೃತ ಮಕ್ಕಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳು ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಬೇಕು. ರಸ್ತೆಗಳಲ್ಲಿ ಅತಿವೇಗ ಮತ್ತೂ ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವ ಚಾಲಕರ ವಿರುದ್ಧ ಪೊಲೀಸರು ನಿಗಾ ವಹಿಸಿ ಕಠಿಣ ಕ್ರಮ ಜರುಗಿಸಬೇಕು. ಅದರಲ್ಲೂ ಶಾಲಾ ಮಕ್ಕಳ ಸುರಕ್ಷತೆಯ ಕಡೆಗೆ ಹೆಚ್ಚು ಒತ್ತು ನೀಡಬೇಕು. 3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 10, 2023
ಇನ್ನೂ ರಾಜ್ಯ ಸರಕಾರವು ಮೃತ ಮಕ್ಕಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಾಳು ಮಕ್ಕಳ ಚಿಕಿತ್ಸೆಯ ವೆಚ್ಚ ಭರಿಸಬೇಕು. ರಸ್ತೆಗಳಲ್ಲಿ ಅತಿವೇಗ ಮತ್ತೂ ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವ ಚಾಲಕರ ವಿರುದ್ಧ ಪೊಲೀಸರು ನಿಗಾ ವಹಿಸಿ ಕಠಿಣ ಕ್ರಮ ಜರುಗಿಸಬೇಕು. ಅದರಲ್ಲೂ ಶಾಲಾ ಮಕ್ಕಳ ಸುರಕ್ಷತೆಯ ಕಡೆಗೆ ಹೆಚ್ಚು ಒತ್ತು ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.












Click it and Unblock the Notifications