ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರ ಪರವಾಗಿ ಮತ್ತೊಂದು ಬೇಡಿಕೆ ಇಟ್ಟ ಮಾಜಿ ಸಿಎಂ ಕುಮಾರಸ್ವಾಮಿ!

|
Google Oneindia Kannada News

ಬೆಂಗಳೂರು, ಅ. 11: ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ಶಿಕ್ಷಣ ಇಲಾಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಅದರ ಬೆನ್ನಲ್ಲಿಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ ಎದುರು ಮತ್ತೊಂದು ಬೇಡಿಕೆಯನ್ನು ಇಟ್ಟಿದ್ದಾರೆ. ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರ್ಕಾರದ ಮೇಲೆ ಕಿಡಿ ಕಾರಿದ್ದಾರೆ.

ಕೊರೊನಾ ಲಾಕ್‌ಡೌನ್ ಮಧ್ಯೆಯೂ ವಿದ್ಯಾಗಮ ಕಾರ್ಯಕ್ರಮ ಮುಂದುವರೆಸಬಾರದು ಎಂದು ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದರು. ವಿದ್ಯಾಗಮ ಮುಂದುವರೆಸಿದಲ್ಲಿ ಅಹೋರಾತ್ರಿ ಧರಣಿ ಮಾಡುವ ಎಚ್ಚರಿಕೆ ಕೊಟ್ಟಿದ್ದರು. ಇದೀಗ ಮತ್ತೊಂದು ಬೇಡಿಕೆಯನ್ನು ಕುಮಾರಸ್ವಾಮಿ ಸರ್ಕಾರದ ಎದುರು ಇಟ್ಟಿದ್ದಾರೆ.

ಶಿಕ್ಷಕರಿಗೆ ರಜೆ ಕೊಡಿ

ಶಿಕ್ಷಕರಿಗೆ ರಜೆ ಕೊಡಿ

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ನನ್ನ ಜೀವ ಹೋದರೂ ಪರವಾಗಿಲ್ಲ, ಸರಕಾರದ ವಿರುದ್ದ ಅಹೋರಾತ್ರಿ ಧರಣಿ: ಕುಮಾರಸ್ವಾಮಿನನ್ನ ಜೀವ ಹೋದರೂ ಪರವಾಗಿಲ್ಲ, ಸರಕಾರದ ವಿರುದ್ದ ಅಹೋರಾತ್ರಿ ಧರಣಿ: ಕುಮಾರಸ್ವಾಮಿ

ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ

ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ

ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.

ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಕುಮಾರಸ್ವಾಮಿ ಅವರು ಟ್ವಿಟರ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಶಿಕ್ಷಕರು ದಿನಗೂಲಿ ನೌಕರರಲ್ಲ

ಶಿಕ್ಷಕರು ದಿನಗೂಲಿ ನೌಕರರಲ್ಲ

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಶಿಕ್ಷಣ ಇಲಾಖೆಯನ್ನು ಕುಮಾರಸ್ವಾಮಿ ಕೇಳಿದ್ದಾರೆ.

ಶಾಲೆ ಆರಂಭಿಸುವ ಕುರಿತು ಮಾಜಿ ಸಿಎಂ ಎಚ್‌ಡಿಕೆ ಮಹತ್ವದ ಸಲಹೆ!ಶಾಲೆ ಆರಂಭಿಸುವ ಕುರಿತು ಮಾಜಿ ಸಿಎಂ ಎಚ್‌ಡಿಕೆ ಮಹತ್ವದ ಸಲಹೆ!

Recommended Video

GT Devegowda : ರಾಜಕೀಯದಲ್ಲಿ ಯಾರೂ ಶತ್ರು ಅಲ್ಲಾ!! | Oneindia Kannada
ಮಧ್ಯಂತರ ರಜೆ ಕೊಡಿ

ಮಧ್ಯಂತರ ರಜೆ ಕೊಡಿ

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

English summary
Former Chief Minister H.D. Kumaraswamy demanded that State govt should announce Dasara holiday for teachers
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X