135 ಶಾಸಕರನ್ನ ಅನರ್ಹಗೊಳಿಸಿ; ಅಕ್ರಮ ಸರಕಾರವನ್ನು ವಜಾ ಮಾಡಿ: ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು,ಸೆಪ್ಟೆಂಬರ್‌ 20: ವರುಣಾ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಗೆಲ್ಲಲು ಕುಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿ, ಮಡಿವಾಳ ಸಮುದಾಯದ ಓಟ್‌ ಗೆಲ್ಲಲು ಕಾರಣವಾಯ್ತು ಎಂದು ಯತೀಂದ್ರ ಸಿದ್ದರಾಮಯ್ಯ ಅವರ ಬಹಿರಂಗ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ಕರ್ನಾಟಕ ಕಾಂಗ್ರೆಸ್‌ ಪಕ್ಷದ 'ಅಸಲಿ ಹಸ್ತ'ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಪ್ರಶ್ನಿಸಿದ್ದಾರೆ.

hd-kumaraswamy

ಉಳಿದ ಕ್ಷೇತ್ರಗಳ ಕಥೆ ಹಾಗಿರಲಿ, ಕರ್ನಾಟಕದ ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿಯೇ ಕುಕ್ಕರ್, ಇಸ್ತ್ರಿಪೆಟ್ಟಿಗೆಗಳ ಭರ್ಜರಿ ಸಮಾರಾಧನೆ ನಡೆದಿದೆ. ಸಮಾಜವಾದಿ ಮುಖ್ಯಮಂತ್ರಿ ಮಹೋದಯರ ಹಾದಿಯಲ್ಲೇ ನಡೆದಿರುವ ಇಡೀ ಕರ್ನಾಟಕ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಅದೇ ವಾಮಮಾರ್ಗದಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನಿಟ್ಟು ಶ್ರೀ ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ಕನ್ನಡಿಗರ ಪ್ರಜಾಸತ್ತೆಯ ಮಹಾದೇಗುಲ ವಿಧಾನಸೌಧದ ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ ಎಂದು ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ, ಮಾಗಡಿ ಸೇರಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗಿಫ್ಟ್ ಕೂಪನ್, ಗ್ಯಾರಂಟಿ ಕೂಪನ್ ಹಂಚಿಯೇ ಗೆದ್ದಿದ್ದಾರೆ. ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಸಹಿ ಹಾಕಿದ ಅಧಿಕೃತ ಅಮಿಷಗಳ 5 ಗ್ಯಾರಂಟಿ ಕೂಪನ್ ಗಳನ್ನು ಮನೆಮನೆಗೂ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ. ಇದು ಸ್ವಾತಂತ್ರ್ಯ ಭಾರತ ಕಂಡ, ಅದೂ ಅಮೃತಕಾಲದಲ್ಲಿ ನಡೆದಿರುವ ಅತಿದೊಡ್ಡ ಚುನಾವಣಾ ಅಕ್ರಮ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಹೆಗ್ಗಳಿಕೆಯ ಕಗ್ಗೊಲೆ ಎಂದು ವಾಗ್ದಾಳಿ ನಡೆಸಿದ್ದಾರೆ.

hd-kumaraswamy

ಕೇಂದ್ರ ಚುನಾವಣಾ ಆಯೋಗ ಈ ಚುನಾವಣಾ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕು. ಖಡಕ್ ತನಿಖೆ ನಡೆಸಿ ಕರ್ನಾಟಕ ಕಾಂಗ್ರೆಸ್‌ ಪಕ್ಷದ ಎಲ್ಲಾ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹೊರ ಹಾಕಲೇಬೇಕು. ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು. ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಇಡೀ ಚುನಾವಣೆ ವ್ಯವಸ್ಥೆಯನ್ನೇ ನಾಶ ಮಾಡಲು ಸಂಚು ಹೂಡಿದೆ. ಕರ್ನಾಟಕ ಮಾದರಿ ಎನ್ನುವ ವಿನಾಶಕಾರಿ ಮಹಾಮಾರಿಯನ್ನು ಇಡೀ ದೇಶಕ್ಕೆ ವಿಸ್ತರಿಸಲು ಹೊರಟಿದೆ. ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿ ಶೀಘ್ರವೇ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಈ ಷಡ್ಯಂತ್ರ, ಕುತಂತ್ರ, ಕುಯುಕ್ತಿಗಳನ್ನು ಪ್ರಯೋಗ ಮಾಡಲು ಹೊರಟಿದೆ. ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ವಿಷಪ್ರಾಶನ ಮಾಡುವ ಈ ದೇಶದ್ರೋಹಿ ಕೃತ್ಯವನ್ನು ಎಲ್ಲರೂ ತಡೆಯಲೇಬೇಕಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+