ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಜನರಿಗೂ ಉಚಿತವಾಗಿ ಲಸಿಕೆ ನೀಡಿ; ಸರ್ಕಾರಕ್ಕೆ ಎಚ್‌ಡಿಕೆ ಆಗ್ರಹ

|
Google Oneindia Kannada News

ಬೆಂಗಳೂರು, ಏಪ್ರಿಲ್ 24: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಏರಿಕೆ ನಡುವೆ ಮೇ 1ರಿಂದ ಮೂರನೇ ಹಂತದ ಲಸಿಕಾ ಅಭಿಯಾನ ಆರಂಭವಾಗುತ್ತಿದೆ. ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಂತೆ ಈಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ.

ಪ್ರಧಾನಿ ಘೋಷಣೆ ಬೆನ್ನಲ್ಲೇ ಹಲವು ರಾಜ್ಯಗಳು ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡುವ ತೀರ್ಮಾನ ಕೈಗೊಂಡಿವೆ. ಇದೀಗ ಕರ್ನಾಟಕದಲ್ಲಿಯೂ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆಗಳನ್ನು ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಕೂಡ ಕರ್ನಾಟಕ ಜನತೆಗೆ ಉಚಿತವಾಗಿ ಲಸಿಕೆ ನೀಡಿ ಎಂದು ಕೇಳಿಕೊಂಡಿದ್ದಾರೆ. ಮುಂದೆ ಓದಿ...

ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆಸ್ಪತ್ರೆಯಿಂದ ಬಿಡುಗಡೆಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಆಸ್ಪತ್ರೆಯಿಂದ ಬಿಡುಗಡೆ

"ರಾಜ್ಯದ ಆರೂವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆ ನೀಡಿ"

ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರೂವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸಿಎಂಗೆ ಎಚ್‌ಡಿಕೆ ಮನವಿ

ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ @BSYBJP ಅವರಲ್ಲಿ ‌ನನ್ನ ಕೋರಿಕೆ ಎಂದಿದ್ದಾರೆ.

"ಜನ ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ"

ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನ ಪ್ರಕಟಿಸಬೇಕೆಂಬುದು ನನ್ನ ‌ಆಗ್ರಹ. ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು ₹2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರ್ಕಾರಕ್ಕೆ ಕನಿಷ್ಠ ಪಕ್ಷ ₹2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು ಎಂದಿದ್ದಾರೆ.

Recommended Video

KL Rahul ಮುಂಬೈ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಇದೇ ಕಾರಣಕ್ಕೆ | Oneindia Kannada

"ಉಚಿತ ಲಸಿಕೆ ನೀಡುವ ಮಹತ್ವದ ತೀರ್ಮಾನ ಕೈಗೊಳ್ಳಿ"

ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸುತ್ತೇನೆ. ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದೂವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೊ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದಿದ್ದಾರೆ.

English summary
Former CM HD Kumaraswamy demands state government to provide free corona vaccine for the age above 18 years in karnataka,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X