700 ಕೋಟಿ ರೂಪಾಯಿ ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ಮೇ 01: ಬರಗಾಲದಂಥ ಸಂಕಷ್ಟದ ಸಂದರ್ಭದಲ್ಲಿ ಹೈನುಗಾರಿಕೆ ರೈತರಿಗೆ ಆದಾಯದ ಮೂಲವಾಗಿತ್ತು. ಆದರೆ ಕಳೆದ ಏಳು ತಿಂಗಳಿಂದ ಸರಕಾರ ಪ್ರೋತ್ಸಾಹ ಧನವನ್ನೇ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟದಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು, ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ. ಒಂದು ಲೀಟರ್ ಹಾಲಿನ ಸಬ್ಸಿಡಿಯನ್ನು ₹7 ಹೆಚ್ಚಿಸುತ್ತೇವೆ ಎಂದು ಚುನಾವಣೆ ವೇಳೆ ಕಾಂಗ್ರೆಸ್ ಸುಳ್ಳು ಹೇಳಿದ್ದೇ ಹೇಳಿದ್ದು. ಹೆಚ್ಚಿಸುವ ಮಾತಿರಲಿ, ಇದ್ದ ಸಬ್ಸಿಡಿಯನ್ನೂ (ಲೀಟರ್ ಹಾಲಿಗೆ ₹5) ಕೊಡದೇ 7 ತಿಂಗಳಿಂದ ಸತಾಯಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ @INCKarnataka ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ?
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2024
•ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ.… pic.twitter.com/kIb3Pe2mNk
ಗೋವಿನ ಆಹಾರವಾದ ಹಿಂಡಿ, ಬೂಸಾ ಬೆಲೆ ಗಗನಕ್ಕೇರಿದೆ. ಮೇವೂ ಸಿಗುತ್ತಿಲ್ಲ. ಇಂಥ ಕಡು ಸಂಕಷ್ಟದಲ್ಲಿರುವ ಹಾಲು ಉತ್ಪಾದಕರಿಗೆ ಕೂಡಲೇ ರಾಜ್ಯ ಸರಕಾರ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.












Click it and Unblock the Notifications